Homeಮುಖಪುಟರಾಜಸ್ಥಾನ: ದಲಿತ ಮಹಿಳೆಯ ಮೇಲೆ ಪೊಲೀಸರಿಂದಲೇ ಸಾಮೂಹಿಕ ಅತ್ಯಾಚಾರ, ಕೊಲೆ!

ರಾಜಸ್ಥಾನ: ದಲಿತ ಮಹಿಳೆಯ ಮೇಲೆ ಪೊಲೀಸರಿಂದಲೇ ಸಾಮೂಹಿಕ ಅತ್ಯಾಚಾರ, ಕೊಲೆ!

- Advertisement -
- Advertisement -

ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ದಲಿತ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಆಕೆಯ ಶವ ಮಂಗಳವಾರ ಜಿಲ್ಲೆಯ ಖಜುವಾಲಾ ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಈ ಬಗ್ಗೆ ಪೊಲೀಸ್ ಮಹಾನಿರೀಕ್ಷಕ ಓಂ ಪ್ರಕಾಶ್ ಮಾತನಾಡಿ, ”ಖಜುವಾಲಾ ಪೊಲೀಸ್ ಠಾಣೆಯ ಇಬ್ಬರು ಕಾನ್‌ಸ್ಟೆಬಲ್‌ಗಳಾದ ಮನೋಜ್ ಕುಮಾರ್ ಮತ್ತು ಭಾಗೀರಥ್ ಸೇರಿದಂತೆ ಮೂವರು ವ್ಯಕ್ತಿಗಳು ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಮಹಿಳೆಯ ಕುಟುಂಬದ ಸದಸ್ಯರು ಆರೋಪಿಸಿದ್ದಾರೆ. ಆ ಇಬ್ಬರೂ ಪೊಲೀಸರನ್ನು ತಕ್ಷಣವೇ ಅಮಾನತುಗೊಳಿಸಲಾಗಿದೆ ಮತ್ತು ವಿಷಯದ ಬಗ್ಗೆ ತನಿಖೆ ನಡೆಸಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ಪ್ರಮುಖ ಆರೋಪಿ ಎನ್ನಲಾದ ಮೂರನೇ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಪ್ರಮುಖ ಆರೋಪಿ ವ್ಯಕ್ತಿ ಮತ್ತು ಮಹಿಳೆ ಪರಸ್ಪರ ಪರಿಚಯಸ್ಥರು ಎಂದು ಕಾಲ್‌ ರೆಕಾರ್ಡ್ಸ್‌ನಿಂದ ತಿಳಿದುಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಮೃತದೇಹದ ಮರಣೋತ್ತರ ಪರೀಕ್ಷೆಗೆ ಅನುಮತಿ ನಿರಾಕರಿಸಿರುವ ಮಹಿಳೆಯ ಸಂಬಂಧಿಕರು, ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ಸಾಗರದ ದಲಿತ ವಿದ್ಯಾರ್ಥಿನಿ ಪ್ರಕರಣ; ವಸತಿ ಶಾಲೆ ಮುಖ್ಯಸ್ಥನ ವಿರುದ್ಧ ‘ಪೋಕ್ಸೋ’, ‘ಅಟ್ರಾಸಿಟಿ’ ಕೇಸ್‌ ದಾಖಲು

ಮರಣೋತ್ತರ ಪರೀಕ್ಷೆಗೆ ನಡೆಸಲು ಅನುಮತಿ ನೀಡುವಂತೆ ಕುಟುಂಬದವರ ಮನವೊಲಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತೇಜಸ್ವನಿ ಗೌತಮ್ ತಿಳಿಸಿದ್ದಾರೆ.

ರಾಜಸ್ಥಾನದ ವಿರೋಧ ಪಕ್ಷದ ನಾಯಕ ರಾಜೇಂದ್ರ ರಾಥೋಡ್ ಅವರು ಟ್ವೀಟ್ ಮಾಡಿದ್ದು, ”ಆರೋಪಿ ಕಾನ್‌ಸ್ಟೆಬಲ್‌ಗಳನ್ನು ಇನ್ನೂ ಬಂಧಿಸದಿರುವುದು ದುರದೃಷ್ಟಕರ ಸಂಗತಿ” ಎಂದಿದ್ದಾರೆ.

”ಪ್ರಕ್ರಿಯೆಯ ಹೆಸರಿನಲ್ಲಿ, ಕಾನ್‌ಸ್ಟೆಬಲ್‌ಗಳನ್ನು ಅಮಾನತುಗೊಳಿಸುವ ಔಪಚಾರಿಕತೆಯನ್ನು ಕೈಗೊಳ್ಳಲಾಗಿದೆ. ಪೊಲೀಸರೇ ಹೆಣ್ಣು ಮಕ್ಕಳ ಮೇಲೆ ಹೀಗೆ ಅತ್ಯಾಚಾರ ಮಾಡಿದರೆ ಮಹಿಳೆಯರಿಗೆ ರಕ್ಷಣೆ ನೀಡುವವರು ಯಾರು? ಪೊಲೀಸರ ಕೈವಾಡವಿರುವುದು ಸರ್ಕಾರದ ಮುಖಕ್ಕೆ ಮಸಿ ಬಳಿದಿದೆ” ಎಂದು ರಾಥೋಡ್ ಟ್ವಿಟರ್‌ನಲ್ಲಿ ಟೀಕಿಸಿದ್ದಾರೆ.

ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸಚಿವ ಪ್ರತಾಪ್ ಸಿಂಗ್ ಖಚರಿಯಾವಾಸ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...