Homeಚಳವಳಿರಾಜಸ್ಥಾನದಲ್ಲಿ ದಲಿತ ವ್ಯಕ್ತಿಯ ಬರ್ಬರ ಹತ್ಯೆ: ತ್ವರಿತ ಕ್ರಮಕ್ಕೆ ಜಿಗ್ನೇಶ್ ಮೇವಾನಿ ಆಗ್ರಹ

ರಾಜಸ್ಥಾನದಲ್ಲಿ ದಲಿತ ವ್ಯಕ್ತಿಯ ಬರ್ಬರ ಹತ್ಯೆ: ತ್ವರಿತ ಕ್ರಮಕ್ಕೆ ಜಿಗ್ನೇಶ್ ಮೇವಾನಿ ಆಗ್ರಹ

- Advertisement -
- Advertisement -

ರಾಜಸ್ಥಾನದಲ್ಲಿ ದಲಿತ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಸ್ವತಂತ್ರ ಶಾಸಕ ಜಿಗ್ನೇಶ್ ಮೇವಾನಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಕಳೆದ ತಿಂಗಳು ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದ ಜಿಗ್ನೇಶ್ ಮೇವಾನಿ, ದಲಿತ ವ್ಯಕ್ತಿ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಆಡಳಿತವಿರುವ ರಾಜಸ್ಥಾನ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿರುವ ದಲಿತ ವ್ಯಕ್ತಿಯ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ.

“ರಾಜಸ್ಥಾನದಲ್ಲಿ ಬಡ ದಲಿತ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದಿರುವುದು ಅತ್ಯಂತ ಆತಂಕಕಾರಿ ಘಟನೆ ವರದಿಯಾಗಿದೆ. ಘಟನೆಯಲ್ಲಿ ತಪ್ಪಿತಸ್ಥರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಬೇಕು. ಇದನ್ನು ರಾಜಸ್ಥಾನ ಸರ್ಕಾರವು ಆದ್ಯತೆಯ ಮೇಲೆ ತೆಗೆದುಕೊಳ್ಳಬೇಕೆಂದು ನಾನು ಒತ್ತಾಯಿಸುತ್ತೇನೆ. ಇಂತಹ ಬರ್ಬರತೆಗೆ ಎಲ್ಲಿಯೂ ಅವಕಾಶವಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ: ದಲಿತ ಯುವಕನ ಬರ್ಬರ ಗುಂಪು ಹತ್ಯೆ, ಕಾಂಗ್ರೆಸ್ ವಿರುದ್ಧ ಭುಗಿಲೆದ್ದ ಆಕ್ರೋಶ

 

 

ರಾಜಸ್ಥಾನದ ಹನುಮಾನ್‌ಘರ್ ಜಿಲ್ಲೆಯ ಪ್ರೇಂಪುರ ಎಂಬಲ್ಲಿ ಅಕ್ಟೋಬರ್ 7 ರಂದು ದಲಿತ ಯುವಕನೊಬ್ಬನನ್ನು ಗುಂಪೊಂದು ತೀವ್ರ ಹಲ್ಲೆ ಮಾಡಿ ಹತ್ಯೆ ಮಾಡಲಾಗಿದೆ. ಆಕ್ರೋಶಗೊಂಡ ಯುವಕನ ಕುಟುಂಬ ಮತ್ತು ದಲಿತ ಸಮುದಾಯ ತೀವ್ರ ಪ್ರತಿಭಟನೆ ನಡೆಸಿದ ಕಾರಣಕ್ಕಾಗಿ 11 ಜನರ ಮೇಲೆ ಎಫ್‌ಐಆರ್ ದಾಖಲಿಸಿದ್ದು, ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಒಬ್ಬ ಅಪ್ರಾಪ್ತನನ್ನು ವಶಕ್ಕೆ ಪಡೆದಿದ್ದಾರೆ.

ಜಗದೀಶ್ ಮೇಘವಾಲ್ ಎಂಬ ಯುವಕ ಅನ್ಯ ಜಾತಿಯ ಯುವತಿಯನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಆತನಿಗೆ ಗುಂಪು ಕಟ್ಟಿ ಥಳಿಸಿ, ಹತ್ಯೆ ಮಾಡಲಾಗಿದೆ ಎಂದು ಸಂತ್ರಸ್ತನ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಯುವಕನನ್ನು ಹೊಲಕ್ಕೆ ಎಳೆದೊಯ್ದು ಕೈಕಟ್ಟಿ ಮೊಣಕಾಲಿನಲ್ಲಿ ಕೂರಿಸಿ ದೊಣ್ಣೆಗಳಿಂದ ಮನಬಂದಂತೆ ಥಳಿಸಲಾಗಿದೆ. ಆತನ ಕೊನೆಯ ಉಸಿರಿರುವರೆಗೂ ಹಲ್ಲೆ ನಡೆಸಲಾಗಿದೆ. ನಂತರ ಶವವನ್ನು ಆತನ ಮನೆ ಮುಂದೆ ಎಸೆಯಲಾಗಿತ್ತು.


ಇದನ್ನೂ ಓದಿ: ಕನ್ಹಯ್ಯಾ ಜೊತೆಗೆ ದೇಶದಾದ್ಯಂತ ಆಡಳಿತ ವಿರೋಧಿ ಚಳವಳಿ ಕಟ್ಟುತ್ತೇನೆ: ಜಿಗ್ನೇಶ್ ಮೆವಾನಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...