Homeದಲಿತ್ ಫೈಲ್ಸ್ರಾಜಸ್ಥಾನ | ದಲಿತ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅವರ ಮೇಲೆ ಮೂತ್ರ ವಿಸರ್ಜನೆ...

ರಾಜಸ್ಥಾನ | ದಲಿತ ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅವರ ಮೇಲೆ ಮೂತ್ರ ವಿಸರ್ಜನೆ ಮಾಡಿ ಥಳಿಸಿದ ದುಷ್ಕರ್ಮಿಗಳು

- Advertisement -
- Advertisement -

ರಾಜಸ್ಥಾನದ ಸಿಕಾರ್ ಜಿಲ್ಲೆಯ 19 ವರ್ಷದ ಯುವಕನ ಮೇಲೆ ಇಬ್ಬರು ದುಷ್ಕರ್ಮಿಗಳು ಲೈಂಗಿಕ ದೌರ್ಜನ್ಯ ಎಸಗಿ, ಮೂತ್ರ ವಿಸರ್ಜಿಸಿ, ಜಾತಿಯ ಆಧಾರದ ಮೇಲೆ ನಿಂದಿನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಆರೋಪಿಗಳು ಯುವಕನಿಗೆ ಮದ್ಯದ ಬಾಟಲಿಯಿಂದ ಹೊಡೆದು, ದೂರು ನೀಡಿದರೆ ಅವರನ್ನು ಮತ್ತು ಅವರ ಕುಟುಂಬವನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತ ಯುವಕ ಆರೋಪಿಸಿದ್ದಾರೆ. ರಾಜಸ್ಥಾನ

ಆಪಾದಿತ ಅಪರಾಧವು ಏಪ್ರಿಲ್ 8 ರಂದು ಸಿಕಾರ್ ಜಿಲ್ಲೆಯ ಫತೇಪುರ್ ಪ್ರದೇಶದಲ್ಲಿ ನಡೆದಿದ್ದು, ಏಪ್ರಿಲ್ 16 ರಂದು ಪ್ರಕರಣ ದಾಖಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ತಾನು ಭಯಭೀತರಾಗಿರುವುದಿಂರ ದೂರು ದಾಖಲಿಸಲು ವಿಳಂಬ ಮಾಡಿರುವುದಾಗಿ ಅವರು ಹೇಳಿದ್ದಾರೆ. ಅಷ್ಟೆ ಅಲ್ಲದೆ, ಆರೋಪಿಗಳು ತಮ್ಮ ಕೃತ್ಯಗಳ ವೀಡಿಯೊಗಳನ್ನು ಚಿತ್ರೀಕರಿಸಿ ವೀಡಿಯೊಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆ ದಲಿತ ಯುವಕ ಹೇಳಿದ್ದಾರೆ.

ಏಪ್ರಿಲ್ 8 ರಂದು ಆಪಾದಿತ ಅಪರಾಧ ನಡೆದ ಸಮಯದಲ್ಲಿ, ದಲಿತ ವ್ಯಕ್ತಿಯ ಕುಟುಂಬವು ಅವರ ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಭಾಗವಹಿಸಲು ತೆರಳಿತ್ತು ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.. “ಡಿಜೆ ಮದುವೆ ಮನೆಯ ಬಳಿ ಬಂದಾಗ, ನಾನು ಕೂಡ ಅದನ್ನು ವೀಕ್ಷಿಸಲು ನನ್ನ ಮನೆಯಿಂದ ಹೊರಟೆ. ನಾನು ಹೋಗುವಾಗ, [ಆರೋಪಿಗಳು] ನನ್ನನ್ನು ತಡೆದು, [ಬಸ್] ನಿಲ್ದಾಣಕ್ಕೆ ಅವರೊಂದಿಗೆ ಕೆಲಸಕ್ಕಾಗಿ ಬರುವಂತೆ ಕೇಳಿಕೊಂಡರು.”

“ಆದರೆ, ಕುಡಿದ ಮತ್ತಿನಲ್ಲಿದ್ದ ಇಬ್ಬರೂ ಆರೋಪಿಗಳು, ತನ್ನನ್ನು ಗ್ರಾಮದ ಹೊರಗಿನ ನಿರ್ಜನ ಸ್ಥಳಕ್ಕೆ ಕರೆದೊಯ್ದು ಜಾತಿ ನಿಂದನೆ ಮಾಡಲು ಪ್ರಾರಂಭಿಸಿದರು. ಅವರು ನನ್ನ ತಂದೆಯನ್ನು ಕೊಲ್ಲಲು ಬಯಸಿದ್ದಾಗಿ ಹೇಳಿದ್ದು, ಆದರೆ ಅವರು ದೇಶದ ಹೊರಗಿರುವುದರಿಂದ, ಈಗ ನಿನ್ನ ಸರದಿ [ಹೊಡೆಯುವುದು]” ಎಂದು ಅವರು ಹೇಳಿದ್ದಾರೆ ಎಂದು ಸಂತ್ರಸ್ತ ತನ್ನ ದೂರಿನಲ್ಲಿ ತಿಳಿಸಿದ್ದಾರೆ.

“ನಂತರ ಆರೋಪಿಗಳು ನನ್ನೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿ ನನ್ನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ. ಅದರ ವೀಡಿಯೊವನ್ನು ರೆಕಾರ್ಡ್ ಮಾಡಿದ್ದಾರೆ. ಅವರಲ್ಲಿ ಒಬ್ಬ ವ್ಯಕ್ತಿ ನನ್ನ ಬೆನ್ನು, ತೋಳುಗಳು, ಹೊಟ್ಟೆ ಮತ್ತು ಜನನಾಂಗಗಳಿಗೆ ಕೋಲಿನಿಂದ ಹೊಡೆದಿದ್ದಾರೆ” ಎಂದು ಅವರು ಹೇಳಿದ್ದಾರೆ. ಈ ವೇಳೆ ಹತ್ತಿರದ ಪ್ರದೇಶದ ಇಬ್ಬರು ವ್ಯಕ್ತಿಗಳು ಮಧ್ಯಪ್ರವೇಶಿಸಿ ತನ್ನನ್ನು ರಕ್ಷಿಸಿದ್ದಾಗಿ ದೂರುದಾರ ಯುವಕ ಹೇಳಿದ್ದಾರೆ.

ಸಂತ್ರಸ್ತ ಯುವಕ ಘಟನೆಯ ಬಗ್ಗೆ ಆರಂಭದಲ್ಲಿ ತಮ್ಮ ಕುಟುಂಬಕ್ಕೆ ತಿಳಿಸಿರಲಿಲ್ಲ, ಆದರೆ ನಂತರ ಮೂತ್ರ ವಿಸರ್ಜನೆಯಲ್ಲಿ ತೊಂದರೆಯಾದ ನಂತರ ಅವರ ಬಳಿ ಈ ಹೇಳಿಕೊಂಡರು ಎಂದು ಹೇಳಿದ್ದಾರೆ. ಅವರ ದೂರಿನ ನಂತರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಸೇರಿದಂತೆ ವಿವಿಧ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಫತೇಪುರದ ಉಪ ಪೊಲೀಸ್ ವರಿಷ್ಠಾಧಿಕಾರಿ ಅರವಿಂದ್ ಕುಮಾರ್ ಜಾಟ್ ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ರಾಜಸ್ಥಾನ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸುಪ್ರೀಂ ಕೋರ್ಟ್ ಕಾನೂನುಗಳನ್ನು ರೂಪಿಸುವುದಾದರೆ ಸಂಸತ್ ಕಟ್ಟಡವನ್ನು ಮುಚ್ಚಿ: ಬಿಜೆಪಿಯ ಸಂಸದ ನಿಶಿಕಾಂತ್ ದುಬೆ

ಸುಪ್ರೀಂ ಕೋರ್ಟ್ ಕಾನೂನುಗಳನ್ನು ರೂಪಿಸುವುದಾದರೆ ಸಂಸತ್ ಕಟ್ಟಡವನ್ನು ಮುಚ್ಚಿ: ಬಿಜೆಪಿಯ ಸಂಸದ ನಿಶಿಕಾಂತ್ ದುಬೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...