Homeಮುಖಪುಟರಾಜಸ್ಥಾನ: ನೀತಿ ಸಂಹಿತೆ ಜಾರಿಯಾದ 48 ಗಂಟೆಗಳಲ್ಲಿ 500ಕ್ಕೂ ಅಧಿಕ ದೂರುಗಳು ದಾಖಲು

ರಾಜಸ್ಥಾನ: ನೀತಿ ಸಂಹಿತೆ ಜಾರಿಯಾದ 48 ಗಂಟೆಗಳಲ್ಲಿ 500ಕ್ಕೂ ಅಧಿಕ ದೂರುಗಳು ದಾಖಲು

- Advertisement -
- Advertisement -

ರಾಜಸ್ಥಾನದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ಕೇವಲ 48 ಗಂಟೆಗಳಲ್ಲಿ ಸಿ-ವಿಜಿಲ್ ಆ್ಯಪ್‌ನಲ್ಲಿ 500ಕ್ಕೂ ಹೆಚ್ಚು ದೂರುಗಳು ಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾ ಚುನಾವಣಾಧಿಕಾರಿಗಳು 134 ದೂರುಗಳನ್ನು ಸತ್ಯವೆಂದು ಕಂಡು ಹಿಡಿದಿದ್ದು, ನಿಗದಿತ ಸಮಯದಲ್ಲಿ ಕ್ರಮ ಕೈಗೊಂಡಿದ್ದಾರೆ. 115 ದೂರುಗಳನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದು, 6 ದೂರುಗಳು ಪರಿಶೀಲನೆಗೆ ಬಾಕಿ ಉಳಿದಿವೆ ಎಂದು ಮುಖ್ಯ ಚುನಾವಣಾಧಿಕಾರಿ ಪ್ರವೀಣ್ ಗುಪ್ತಾ ತಿಳಿಸಿದ್ದಾರೆ.

ಉಳಿದ 242 ದೂರುಗಳನ್ನು ಜಿಲ್ಲಾ ನಿಯಂತ್ರಣ ಕೊಠಡಿಯು ತಿರಸ್ಕರಿಸಿದೆ. ಜೈಪುರ ಜಿಲ್ಲೆಯಿಂದ ಗರಿಷ್ಠ ಎಂದರೆ 79 ದೂರುಗಳು ಬಂದಿವೆ. ಸಿ-ವಿಜಿಲ್ ಅಪ್ಲಿಕೇಶನ್‌ನಲ್ಲಿ ದೂರು ಸ್ವೀಕರಿಸಿದ 100 ನಿಮಿಷಗಳಲ್ಲಿ ದೂರುಗಳನ್ನು ಪರಿಹರಿಸಲು ಸಾಧ್ಯವಾಗುತ್ತದೆ ಎಂದು ಗುಪ್ತಾ ಹೇಳಿದ್ದಾರೆ.

ಕೇಂದ್ರ ಚುನಾವಣಾ ಆಯೋಗವು ರಾಜಸ್ಥಾನ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಬುಧವಾರ ಬದಲಿಸಿತ್ತು. ಮೊದಲು ನಿಗದಿಪಡಿಸಿದ ದಿನಕ್ಕಿಂತ ಎರಡು ದಿನ ತಡವಾಗಿ ಚುನಾವಣೆ ನಡೆಸಲು ನಿರ್ಧರಿಸಿದೆ.

ನವೆಂಬರ್ 23ರಂದು ರಾಜಸ್ಥಾನ ವಿಧಾನಸಭೆ ಚುನಾವಣೆಗೆ ದಿನ ನಿಗದಿಪಡಿಸಲಾಗಿತ್ತು. ಆದರೆ ಆ ದಿನ ವ್ಯಾಪಕ ಮದುವೆ ಸಮಾರಂಭಗಳು ಹಾಗೂ ಸಾಮಾಜಿಕ ಕಾರ್ಯಕ್ರಮಗಳು ಆಯೋಜನೆಯಾಗಿರುವುದರಿಂದ ನವೆಂಬರ್ 25ಕ್ಕೆ ಮತದಾನ ಮುಂದೂಡಲಾಗಿದೆ.

ಮಂಗಳವಾರ ಕೇಂದ್ರ ಚುನಾವಣಾ ಆಯೋಗ ಪಂಚ ರಾಜ್ಯಗಳ ಚುನಾವಣಾಗೆ ದಿನಾಂಕ ಘೋಷಣೆ ಮಾಡಿತ್ತು. ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಛತ್ತಿಸ್‌ಗಡ ಮತ್ತು ಮಿಜೋರಾಮ್ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಿದೆ.

ಇದನ್ನು ಓದಿ: ಬಿಹಾರ: ಹಳಿ ತಪ್ಪಿದ ನಾರ್ತ್‌ ಈಸ್ಟ್ ಸೂಪರ್‌ಫಾಸ್ಟ್ ರೈಲು: ನಾಲ್ವರು ಸಾವು, 100 ಮಂದಿಗೆ ಗಾಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...