Homeಮುಖಪುಟರಾಜಸ್ಥಾನ| ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಏಳು ಮಂದಿ ಸಾವು - ಹಲವರು ಸಿಲುಕಿರುವ...

ರಾಜಸ್ಥಾನ| ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಅವಘಡ; ಏಳು ಮಂದಿ ಸಾವು – ಹಲವರು ಸಿಲುಕಿರುವ ಶಂಕೆ

- Advertisement -
- Advertisement -

ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯ ಭಿವಾಡಿ ಪಟ್ಟಣದಲ್ಲಿ ಸೋಮವಾರ ಅಕ್ರಮ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಮಭವಿಸಿದ ಬೆಂಕಿ ಅವಘಡದಲ್ಲಿ ಏಳು ಮಂದಿ ಸಜೀವ ದಹನಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಘಟನೆಯಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಇದು ಗಾರ್ಮೆಂಟ್ ಕಾರ್ಖಾನೆಯಾಗಿತ್ತು. ಆದರೆ ಅದರೊಳಗೆ ಅಕ್ರಮವಾಗಿ ಪಟಾಕಿಗಳನ್ನು ತಯಾರಿಸಲಾಗುತ್ತಿತ್ತು” ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಸುಮಿತ್ರಾ ಪರೀಕ್ ಹೇಳಿದ್ದಾರೆ. ಕಾರ್ಖಾನೆಯಲ್ಲಿ ಇಬ್ಬರು ಸಿಲುಕಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಭಿವಾಡಿಯ ಖುಷ್ಖೇರಾ-ಕರೋಲಿ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

“ಗಾರ್ಮೆಂಟ್ ಕಾರ್ಖಾನೆಯ ಹೆಸರಿನಲ್ಲಿ ಆವರಣವನ್ನು ಗುತ್ತಿಗೆಗೆ ನೀಡಲಾಗಿದೆ. ಆದರೆ ಪ್ರಾಥಮಿಕ ವರದಿಯ ಪ್ರಕಾರ, ಅಕ್ರಮವಾಗಿ ಪಟಾಕಿಗಳನ್ನು ತಯಾರಿಸಲಾಗುತ್ತಿತ್ತು” ಎಂದು ಅವರು ಹೇಳಿದರು.

ಪೊಲೀಸರಿಗೆ ದಿನನಿತ್ಯದ ಗಸ್ತು ತಿರುಗುತ್ತಿದ್ದಾಗ ಘಟನೆಯ ಬಗ್ಗೆ ತಿಳಿದುಬಂದಿತು, ನಂತರ ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿ ಅರ್ತಿಕಾ ಶುಕ್ಲಾ ಸೇರಿದಂತೆ ಇತರ ಹಿರಿಯ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು.

ಪ್ರಾಥಮಿಕ ವರದಿಯ ಪ್ರಕಾರ, ಕಾರ್ಖಾನೆಯೊಳಗೆ 20 ಕ್ಕೂ ಹೆಚ್ಚು ಜನರಿದ್ದರು. ಬೆಂಕಿ ಹೊತ್ತಿಕೊಂಡ ತಕ್ಷಣ, ಅನೇಕ ಕಾರ್ಮಿಕರು ಹೊರಬರುವಲ್ಲಿ ಯಶಸ್ವಿಯಾದರು, ಒಂಬತ್ತು ಮಂದಿ ಸಿಲುಕಿಕೊಂಡರು. ಅವರಲ್ಲಿ ಏಳು ಮಂದಿ ಜೀವಂತವಾಗಿ ಸುಟ್ಟುಹೋದರು.

ಒಂದೂವರೆ ಗಂಟೆಗೂ ಹೆಚ್ಚು ಸಮಯದ ನಂತರ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಕೆಲವು ಅಸ್ಥಿಪಂಜರಗಳನ್ನು ಸಹ ಹೊರತೆಗೆಯಲಾಯಿತು.

ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು ತಕ್ಷಣವೇ ಕೈಗೊಳ್ಳುವಂತೆ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದರು. ಅರಣ್ಯ ಸಚಿವ ಸಂಜಯ್ ಶರ್ಮಾ ಅವರನ್ನು ಅಲ್ವಾರ್ ತಲುಪಲು ಅವರು ನಿರ್ದೇಶಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...