Homeಮುಖಪುಟರಾಜಸ್ಥಾನ: ನಾಲ್ವರು ವಿದ್ಯಾರ್ಥಿನಿಯರ ಮೇಲೆ ಶಾಲಾ ಶಿಕ್ಷಕರಿಂದ ಸಾಮೂಹಿಕ ಅತ್ಯಾಚಾರ ಆರೋಪ

ರಾಜಸ್ಥಾನ: ನಾಲ್ವರು ವಿದ್ಯಾರ್ಥಿನಿಯರ ಮೇಲೆ ಶಾಲಾ ಶಿಕ್ಷಕರಿಂದ ಸಾಮೂಹಿಕ ಅತ್ಯಾಚಾರ ಆರೋಪ

- Advertisement -
- Advertisement -

ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ನಾಲ್ವರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಶಾಲಾ ಸಿಬ್ಬಂದಿ ಸಾಮೂಹಿಕ ಅತ್ಯಾಚಾರ ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಮತ್ತು ಕೃತ್ಯಕ್ಕೆ ಸಹಾಯ ಮಾಡಿದ ಆರೋಪದ ಮೇಲೆ ಶಾಲೆಯ ಪ್ರಾಂಶುಪಾಲರು ಸೇರಿದಂತೆ 15 ಸಿಬ್ಬಂದಿಗಳ ವಿರುದ್ದ ರಾಜಸ್ಥಾನ ಪೊಲೀಸರು ಮೂರು ಪ್ರಕರಣಗಳನ್ನು ದಾಖಲಿಸಿದ್ದಾರೆ. 

ದೌರ್ಜನ್ಯಕ್ಕೆ ತುತ್ತಾದ ವಿದ್ಯರ್ಥಿಯರು  3, 4, 6 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದರು ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

“ತನ್ನ ಮೇಲೆ ಶಾಲೆಯ ಪ್ರಾಂಶುಪಾಲ ಮತ್ತು ಇತರ ಶಿಕ್ಷಕರು ಒಂದು ವರ್ಷದಿಂದ ಸಾಮೂಹಿಕ ಅತ್ಯಾಚಾರ ಎಸಗುತ್ತಿದ್ದಾರೆ. ಇಬ್ಬರು ಮಹಿಳಾ ಶಿಕ್ಷಕರು ಆ ಕೃತ್ಯದ ವಿಡಿಯೋಗಳನ್ನು ಕೂಡ ಮಾಡಿದ್ದಾರೆ” ಎಂದು 10ನೇ ತರಗತಿಯ ಸಂತ್ರಸ್ತ ವಿದ್ಯಾರ್ಥಿನಿ ದೂರಿದ್ದಾರೆ.

ಈ ಕೃತ್ಯದ ಬಗ್ಗೆ ಸಂತ್ರಸ್ತೆಯೊಬ್ಬರು ಮಹಿಳಾ ಶಿಕ್ಷಕರಿಗೆ ದೂರು ನೀಡಿದಾಗ, ಅವರೂ ಕೂಡ ಬಾಲಕಿಗೆ ಶಾಲಾ ಶುಲ್ಕ ಮತ್ತು ಪುಸ್ತಕಗಳನ್ನು ಕೊಡಿಸುವುದಾಗಿ ಆಮಿಷವೊಡ್ಡಿದರು ಮತ್ತು ಈ ಬಗ್ಗೆ ಯಾರಿಗೂ ದೂರು ನೀಡದಂತೆ ಕೇಳಿಕೊಂಡರು ಎಂದು ಸಂತ್ರಸ್ತ ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

“ನಾಲ್ವರು ಸಂತ್ರಸ್ತ ಅಪ್ರಾಪ್ತ ಬಾಲಕಿಯರ ಕುಟುಂಬದ ಸದಸ್ಯರು ಮಂಗಳವಾರ ರಾತ್ರಿ ಮೂರು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಎಫ್‌ಐಆರ್‌ನಲ್ಲಿ ಶಾಲೆಯ ಒಟ್ಟು ಸಿಬ್ಬಂದಿ 15 ಜನರ ವಿರುದ್ದ ಸಾಮೂಹಿಕ ಅತ್ಯಾಚಾರ ಮತ್ತು ಕಿರುಕುಳದ ಆರೋಪ ಹೊರಿಸಿದ್ದಾರೆ” ಎಂದು ಭಿವಾಡಿ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಮೂರ್ತಿ ಜೋಶಿ ತಿಳಿಸಿದ್ದಾರೆ.

ಪ್ರತಿಕಾರದ ಆರೋಪ?

“ಕಳೆದ ವರ್ಷ ಡಿಸೆಂಬರ್ 17 ರಂದು ಅದೇ ಶಾಲೆಯ ಶಿಕ್ಷಕರೊಬ್ಬರು ದಲಿತ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ನಂತರ ಶಿಕ್ಷಕನನ್ನು ಬಂಧಿಸಿ, ಪ್ರಕರಣದ ಆರೋಪಪಟ್ಟಿಯನ್ನು ಪೊಲೀಸರು ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಆರೋಪಿ ಶಿಕ್ಷಕನಿಗೆ ಇತ್ತೀಚೆಗೆ ಜಾಮೀನು ಸಿಕ್ಕಿದೆ. ಈಗ ಹೊಸದಾಗಿ ದಾಖಲಾಗಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಸಿಬ್ಬಂದಿಗಳೆಲ್ಲರೂ ಆ ಆರೋಪಿ ಶಿಕ್ಷಕನ ವಿರುದ್ಧದ ಸಾಕ್ಷಿಯಾಗಿ ಹೇಳಿಕೆ ನೀಡಿದ್ದವರೇ ಆಗಿದ್ದಾರೆ. ಹೀಗಾಗಿ, ಇತ್ತೀಚೆಗೆ ದಾಖಲಾದ ಎಫ್‌ಐಆರ್‌ಗಳ ಹಿಂದೆ ಆತನ ಕೈವಾಡವಿದೆಯೇ ಎಂದು ಅನುಮಾನಿಸಲಾಗಿದೆ. ಅದಕ್ಕಾಗಿ, ನಾವು ಸಂಭವನೀಯ ಸಾಕ್ಷಿ, ಕಿರುಕುಳದ ಆಯಾಮವನ್ನು ಸಹ ತನಿಖೆ ಮಾಡುತ್ತಿದ್ದೇವೆ” ಎಂದು ಜೋಶಿ ಹೇಳಿದ್ದಾರೆ.

“ಇತ್ತೀಚಿನ ಪ್ರಕರಣವನ್ನು ಪ್ರತ್ಯೇಕವಾಗಿ ನೋಡಲಾಗುವುದಿಲ್ಲ. ಏಕೆಂದರೆ ಎಲ್ಲಾ ಆರೋಪಿಗಳು ತಮ್ಮ ಮಾಜಿ ಸಹೋದ್ಯೋಗಿಯ ವಿರುದ್ಧ ಸಾಕ್ಷ್ಯ ನುಡಿದಿದ್ದಾರೆ. ಆ ಆರೋಪಿ ಶಿಕ್ಷಕ ನಿನ್ನೆ ಎಫ್‌ಐಆರ್ ದಾಖಲಿಸಲು ಬಾಲಕಿಯರ ಪೋಷಕರನ್ನು ಪೊಲೀಸ್ ಠಾಣೆಗೆ ಕರೆತಂದಿದ್ದಾನೆ. ಆತ ಪೊಲೀಸ್ ಠಾಣೆಗೆ ಪ್ರವೇಶಿಸಲಿಲ್ಲ. ಆದರೆ ಹೊರಗೆ ಕಾಯುತ್ತಿದ್ದ. ಇದು ಅನುಮಾನವನ್ನು ಹುಟ್ಟುಹಾಕಿದ್ದು, ನೈಜವಾಗಿ ಅಪರಾಧ ನಡೆದಿದೆಯೇ ಎಂಬುದನ್ನೂ ಒಳಗೊಂಡಂತೆ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದೇವೆ ಎಂದು ಎಸ್‌ಪಿ ಜೋಶಿ ತಿಳಿಸಿದ್ದಾರೆ.

ಈವರೆಗೆ ಯಾರನ್ನೂ ಬಂಧಿಸಿಲ್ಲ. ಐಪಿಸಿ ಸೆಕ್ಷನ್‌ಗಳು ಹಾಗೂ ಪೋಕ್ಸೊ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನಿಜವಾಗಿಯೂ ವಿದ್ಯಾರ್ಥಿನಿಗಳ ಮೇಲೆ ಲೈಂಗಿಕ ಕಿರುಕುಳ ನಡೆದಿರುವ ಸಂಭವವೂ ಇದೆ. ಹಿಂದಿನ ಆರೋಪಿ ಶಿಕ್ಷಕ ಮತ್ತು ಹೀಗಿನ ಆರೋಪಿ ಶಿಕ್ಷಕರೆಲ್ಲಾ ಕೂಡಿಯೇ ವಿದ್ಯಾರ್ಥಿನಿಗಳ ಮೇಲೆ ಅತ್ಯಾಚಾರ ಎಸಗಿರುವ ಸಂಭವವೂ ಇದೆ. ತಾನು ಮಾತ್ರ ಸಿಕ್ಕಿಬಿದ್ದಿದ್ದು, ಉಳಿದವರು ತನ್ನ ವಿರುದ್ಧ ಸಾಕ್ಷಿ ಹೇಳಿದ್ದಾರೆ ಎಂದು ಆತ ಎಲ್ಲರ ಮೇಲೆ ದೂರು ನೀಡುವಂತೆ ಒತ್ತಾಯಿಸಿರುವ ಅನುಮಾನಗಳಿವೆ. ಹಾಗಾಗಿ ಈ ಪ್ರಕರಣವನ್ನು ಪೊಲೀಸರು ಕೂಲಂಕುಷವಾಗಿ ಪರಿಗಣಿಸಿ ಆರೋಪಿಗಿಗಳಿಗೆ ಶಿಕ್ಷೆ ಆಗುವಂತೆ ಮತ್ತು ಈ ರೀತಿಯ ಪ್ರಕರಣಗಳು ಮತ್ತೆ ನಡೆಯದಂತೆ ನೋಡಿಕೊಳ್ಳಬೇಕಿದೆ.


ಇದನ್ನೂ ಓದಿ: ವಾರಣಾಸಿಯಲ್ಲಿ ಹೇಯ ಕೃತ್ಯ: 3 ನೇ ತರಗತಿ ಬಾಲಕಿ ಮೇಲೆ ಶಾಲಾ ಸಿಬ್ಬಂದಿಯಿಂದ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...