Homeಮುಖಪುಟಬಾಬರಿ ಮಸೀದಿ ಧ್ವಂಸದಂದು ಶಾಲೆಗಳಲ್ಲಿ 'ಶೌರ್ಯ ದಿನಾಚರಣೆ'ಗೆ ಸೂಚಿಸಿದ ರಾಜಸ್ಥಾನದ ಬಿಜೆಪಿ ಸರ್ಕಾರ : 12...

ಬಾಬರಿ ಮಸೀದಿ ಧ್ವಂಸದಂದು ಶಾಲೆಗಳಲ್ಲಿ ‘ಶೌರ್ಯ ದಿನಾಚರಣೆ’ಗೆ ಸೂಚಿಸಿದ ರಾಜಸ್ಥಾನದ ಬಿಜೆಪಿ ಸರ್ಕಾರ : 12 ಗಂಟೆಯೊಳಗೆ ಆದೇಶ ವಾಪಸ್

- Advertisement -
- Advertisement -

ಬಾಬರಿ ಮಸೀದಿ ಧ್ವಂಸ ದಿನವಾದ ಡಿಸೆಂಬರ್ 6ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಶೌರ್ಯ ದಿನ’ ಆಚರಿಸುವಂತೆ ನೀಡಿದ್ದ ಆದೇಶವನ್ನು 12 ಗಂಟೆಗಳ ಒಳಗೆ ರಾಜಸ್ಥಾನದ ಬಿಜೆಪಿ ಸರ್ಕಾರ ವಾಪಸ್ ಪಡೆದಿದೆ.

ಡಿಸೆಂಬರ್ 6ರಂದು ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ‘ಶೌರ್ಯ ದಿನ’ ಆಚರಣೆ ಮಾಡುವಂತೆ ರಾಜಸ್ಥಾನದ ಶಿಕ್ಷಣ ಮತ್ತು ಪಂಚಾಯತ್ ರಾಜ್ ಸಚಿವ ಮದನ್ ದಿಲಾವರ್ ಶನಿವಾರ (ನವೆಂಬರ್ 29) ಆದೇಶಿಸಿದ್ದರು. ಆದರೆ, ವಿದ್ಯಾರ್ಥಿಗಳಿ ಪರೀಕ್ಷೆಯ ಕಾರಣ ನೀಡಿ ಭಾನುವಾರ (ನವೆಂಬರ್ 30) ಅದೇಶವನ್ನು ವಾಪಸ್ ಪಡೆದಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರೌಢ ಶಿಕ್ಷಣ ನಿರ್ದೇಶಕ ಸೀತಾರಾಮ್ ಜಾಟ್ ಅವರು ಶನಿವಾರ ಶಾಲೆಗಳಿಗೆ ಹೊರಡಿಸಿದ್ದ ಆದೇಶದಲ್ಲಿ, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯಲ್ಲಿ ‘ದೇಶಭಕ್ತಿ, ರಾಷ್ಟ್ರೀಯತೆ, ಶೌರ್ಯ, ಸಾಂಸ್ಕೃತಿಕ ಹೆಮ್ಮೆ ಮತ್ತು ರಾಷ್ಟ್ರೀಯ ಏಕತೆ’ಯನ್ನು ಉತ್ತೇಜಿಸಲು ಡಿಸೆಂಬರ್ 6ರಂದು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸುವಂತೆ ಸೂಚಿಸಿದ್ದರು ಎಂದು ವರದಿ ಹೇಳಿದೆ.

ಭಾನುವಾರ ಬೆಳಿಗ್ಗೆ 9.15ಕ್ಕೆ ಸಚಿವರು ಆದೇಶವನ್ನು ಹಿಂತೆಗೆದುಕೊಂಡಿದ್ದಾರೆ. “ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪ್ರಸ್ತುತ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುತ್ತಿವೆ. ಡಿಸೆಂಬರ್ 5 ಮತ್ತು 6ರಂದು ಪರೀಕ್ಷೆಗಳಿವೆ. ಹಾಗಾಗಿ, ಪರೀಕ್ಷಾ ಅವಧಿಯಲ್ಲಿ ಶಾಲೆಗಳಲ್ಲಿ ಯಾವುದೇ ಇತರ ಚಟುವಟಿಕೆಗಳು ಅಥವಾ ಕಾರ್ಯಕ್ರಮಗಳನ್ನು ನಡೆಸಲು ಸಾಧ್ಯವಿಲ್ಲ. ಆದ್ದರಿಂದ, ‘ಶೌರ್ಯ ದಿನ’ ಆಚರಣೆಯನ್ನು ಮುಂದೂಡಲಾಗಿದೆ” ಎಂದು ಸಚಿವ ದಿಲಾವರ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅದಾಗ್ಯೂ, ಶಾಲೆಗಳಲ್ಲಿ ಶೌರ್ಯ ದಿನ ಆಚರಿಸುವುದನ್ನು ದಿಲಾವರ್ ಸಮರ್ಥಿಸಿಕೊಂಡಿದ್ದಾರೆ. “ಶ್ರೀರಾಮನು ಭಾರತೀಯ ಸಂಸ್ಕೃತಿಯ ಆದರ್ಶಗಳನ್ನು ಪ್ರತಿನಿಧಿಸುತ್ತಾನೆ. ರಾಮ ಮಂದಿರ ಚಳುವಳಿ ಸಾಂಸ್ಕೃತಿಕ ಹೆಮ್ಮೆಯನ್ನು ಸಂಕೇತಿಸುತ್ತದೆ. ರಾಮ ಜನ್ಮಭೂಮಿ ಚಳುವಳಿಯ ಬಗ್ಗೆ ಕಲಿಯುವುದು ‘ವಿದ್ಯಾರ್ಥಿಗಳಿಗೆ ಸ್ಫೂರ್ತಿ ನೀಡುತ್ತದೆ. ದೇಶಭಕ್ತಿ ಮತ್ತು ರಾಷ್ಟ್ರೀಯ ಏಕತೆಯ ಮನೋಭಾವವನ್ನು ತುಂಬುತ್ತದೆ” ಎಂದು ಹೇಳಿದ್ದಾರೆ.

ಶೌರ್ಯ ದಿನದ ಭಾಗವಾಗಿ ಶಾಲೆಗಳಲ್ಲಿ ಭಾರತೀಯ ಸಂಸ್ಕೃತಿ ಮತ್ತು ರಾಮ ಮಂದಿರ ಚಳುವಳಿಯ ಕುರಿತು ಭಾಷಣ, ಪ್ರಬಂಧ ಸ್ಪರ್ಧೆಗಳನ್ನು ನಡೆಸುವಂತೆ ಹಾಗೂ ಅಯೋಧ್ಯಾ ರಾಮ ಮಂದಿರದ ವಿಷಯಾಧಾರಿತ ಚಿತ್ರಕಲೆ, ಪೋಸ್ಟರ್ ತಯಾರಿಕೆ ಚಟುವಟಿಕೆಗಳನ್ನು ಆಯೋಜಿಸುವಂತೆ ಸರ್ಕಾರದ ಆದೇಶದಲ್ಲಿ ಹೇಳಲಾಗಿತ್ತು. ದೇಶಭಕ್ತಿ ಗೀತೆ, ಜಾನಪದ ನೃತ್ಯ ಮತ್ತು ಐತಿಹಾಸಿಕ ಅಥವಾ ಪೌರಾಣಿಕ ಪ್ರಸಂಗಗಳನ್ನು ಆಧರಿಸಿದ ಕಿರು ನಾಟಕಗಳನ್ನು ಪ್ರದರ್ಶಿಸುವಂತೆಯೂ ಸೂಚಿಸಲಾಗಿತ್ತು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ವಿವರಿಸಿದೆ.

ರಾಮ ಜನ್ಮಭೂಮಿ ಚಳುವಳಿ ಮತ್ತು ಭಾರತೀಯ ಇತಿಹಾಸದ ಇತರ ‘ವೀರ ಘಟನೆಗಳಿಗೆ’ ಸಂಬಂಧಿಸಿದ ಛಾಯಾಚಿತ್ರಗಳು, ಲೇಖನಗಳು ಮತ್ತು ಕಲಾಕೃತಿಗಳನ್ನು ಪ್ರದರ್ಶಿಸುವಂತೆ ಹಾಗೂ ಸಾಮೂಹಿಕ ಸೂರ್ಯ ನಮಸ್ಕಾರ, ಯೋಗಾಭ್ಯಾಸ ಮತ್ತು ಶ್ರೀರಾಮನಿಗೆ ಸಮರ್ಪಿತವಾದ ಸ್ತೋತ್ರಗಳು ಮತ್ತು ಆರತಿಯೊಂದಿಗೆ ಪ್ರಾರಂಭವಾಗುವ ವಿಶೇಷ ಪ್ರಾರ್ಥನಾ ಸಭೆಯನ್ನು ನಡೆಸುವಂತೆ ಆದೇಶದಲ್ಲಿ ಹೇಳಲಾಗಿತ್ತು.

ಸುತ್ತೋಲೆಯ ಪ್ರಕಾರ ಶಾಲಾ ಆವರಣದಲ್ಲಿ ‘ಶೌರ್ಯ ಯಾತ್ರೆಗಳು’ ಮತ್ತು ಜಾಗೃತಿ ಮೆರವಣಿಗೆಗಳನ್ನು ಕೂಡ ಆಯೋಜಿಸಬೇಕಿತ್ತು. ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಲು ಮಿಲಿಟರಿ ಸಿಬ್ಬಂದಿ, ಸಾಮಾಜಿಕ ಕಾರ್ಯಕರ್ತರು ಮತ್ತು ಇತಿಹಾಸ ಉತ್ಸಾಹಿಗಳನ್ನು ಅತಿಥಿಗಳಾಗಿ ಆಹ್ವಾನಿಸಬೇಕಾಗಿತ್ತು.

ಮದನ್ ದಿಲಾವರ್ ವಿವಾದಾತ್ಮಕ ಹೇಳಿಕೆ

ಮದನ್ ದಿಲಾವರ್ ಶೌರ್ಯ ದಿನ ಆಚರಣೆಯಂತಹ ವಿವಾದಾತ್ಮಕ ಆದೇಶ, ಹೇಳಿಕೆ ನೀಡುವುದು ಹೊಸತಲ್ಲ. ಶಿಕ್ಷಣ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ದಿಲಾವರ್ ಹಲವಾರು ವಿವಾದಾತ್ಮಕ ಹೇಳಿಕೆಗಳು ಮತ್ತು ಆದೇಶಗಳನ್ನು ನೀಡಿದ್ದಾರೆ. ಮದರಸಾಗಳು ಸೇರಿದಂತೆ ಶಾಲೆಗಳಲ್ಲಿ ವಂದೇ ಮಾತರಂ ಕಡ್ಡಾಯಗೊಳಿಸುವ ಅವರ ಈ ಹಿಂದಿನ ಆದೇಶವು ಅಲ್ಪಸಂಖ್ಯಾತ ಗುಂಪುಗಳಿಂದ ತೀವ್ರ ಟೀಕೆಗೆ ಗುರಿಯಾಯಿತು. ಇದು ಒಂದು ಸಂಸ್ಕೃತಿಯ ಹೇರಿಕೆ ಎಂದು ಆಕ್ರೋಶ ವ್ಯಕ್ತವಾಗಿತ್ತು. ಅನೇಕ ಸಂದರ್ಭಗಳಲ್ಲಿ, ದಿಲಾವರ್ ಮೊಘಲ್ ದೊರೆ ಅಕ್ಬರ್ ಅನ್ನು ನಿರಂಕುಶಾಧಿಕಾರಿ ಎಂದು ಕರೆದಿದ್ದಾರೆ. ಈ ಹಿಂದಿನ ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಅಕ್ಬರ್‌ ಅನ್ನು ವೈಭವೀಕರಿಸಿತ್ತು ಎಂದು ಆರೋಪಿಸಿದ್ದಾರೆ.

ಸರ್ಕಾರಿ ಶಾಲೆಗಳ ಆವರಣದಲ್ಲಿರುವ ಅಕ್ರಮ ಅತಿಕ್ರಮಣಗಳು ಮತ್ತು ಧಾರ್ಮಿಕ ಸ್ಥಳಗಳನ್ನು ತಕ್ಷಣವೇ ತೆರವುಗೊಳಿಸಬೇಕು. ಯಾವುದೇ ಶಾಲೆಯಲ್ಲಿ ಅಂತಹ ಸ್ಥಳಗಳು ಕಂಡುಬಂದರೆ ಪ್ರಾಂಶುಪಾಲರು/ಮುಖ್ಯೋಪಾಧ್ಯಾಯರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು ಕೆಲ ದಿನಗಳ ಹಿಂದೆ ದಿಲಾವರ್ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...