Homeಮುಖಪುಟನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಕುರಿತು ಹೇಳಿಕೆ: ಗೆಹ್ಲೋಟ್‌ಗೆ ರಾಜಸ್ಥಾನ ಹೈಕೋರ್ಟ್ ನೋಟಿಸ್

ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಕುರಿತು ಹೇಳಿಕೆ: ಗೆಹ್ಲೋಟ್‌ಗೆ ರಾಜಸ್ಥಾನ ಹೈಕೋರ್ಟ್ ನೋಟಿಸ್

- Advertisement -
- Advertisement -

ನ್ಯಾಯಾಂಗದಲ್ಲಿ ಅತಿರೇಕದ ಭ್ರಷ್ಟಾಚಾರವಿದೆ ಎಂದು ಹೇಳಿಕೆ ನೀಡಿದ್ದಕ್ಕೆ ರಾಜಸ್ಥಾನ ಹೈಕೋರ್ಟ್ ಶನಿವಾರ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ನೋಟಿಸ್ ಜಾರಿ ಮಾಡಿದೆ ಎಂದು ಪಿಟಿಐ ವರದಿ ಮಾಡಿದೆ.

ನ್ಯಾಯಮೂರ್ತಿಗಳಾದ ಎಂಎಂ ಶ್ರೀವಾಸ್ತವ ಮತ್ತು ಅಶುತೋಷ್ ಕುಮಾರ್ ಅವರಿದ್ದ ವಿಭಾಗೀಯ ಪೀಠವು ಮೂರು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಮುಖ್ಯಮಂತ್ರಿಗೆ ಸೂಚನೆ ನೀಡಿದೆ.

ನ್ಯಾಯಾಂಗದಲ್ಲಿ ಅತಿರೇಕದ ಭ್ರಷ್ಟಾಚಾರವಿದೆ ಎಂಬ ಗೆಹ್ಲೋಟ್ ಹೇಳಿಕೆಗೆ ಸಂಬಂಧಿಸಿದಂತೆ ಶಿವಚರಣ್ ಗುಪ್ತಾ ಎಂಬ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗಳ ಈ ಹೇಳಿಕೆಗೆ ರಾಜ್ಯದ ವಕೀಲರ ಸಂಘಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗೆಹ್ಲೋಟ್ ಹೇಳಿಕೆಯನ್ನು ವಿರೋಧಿಸಿ ಸಾವಿರಾರು ವಕೀಲರು ಜೋಧ್‌ಪುರದಲ್ಲಿ ಶುಕ್ರವಾರ ಒಂದು ದಿನದ ಮುಷ್ಕರ ನಡೆಸಿದರು ಎಂದು ಪಿಟಿಐ ವರದಿ ಮಾಡಿದೆ.

ವ್ಯಾಪಕ ಟೀಕೆಗಳ ನಂತರ, ಮುಖ್ಯಮಂತ್ರಿ ಗೆಹ್ಲೋಟ್ ಅವರು ಗುರುವಾರ ಸ್ಪಷ್ಟೀಕರಣವನ್ನು ನೀಡಿದ್ದಾರೆ. ”ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನನ್ನ ವೈಯಕ್ತಿಕ ಅಭಿಪ್ರಾಯವಲ್ಲ ಮತ್ತು ನಾನು ಯಾವಾಗಲೂ ನ್ಯಾಯಾಂಗವನ್ನು ಗೌರವಿಸುತ್ತೇನೆ ಮತ್ತು ನಂಬುತ್ತೇನೆ” ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ನ್ಯಾಯಾಂಗದ ಭ್ರಷ್ಟಾಚಾರದ ಬಗ್ಗೆ ನಾನು ನಿನ್ನೆ ಹೇಳಿದ್ದು ನನ್ನ ವೈಯಕ್ತಿಕ ಅಭಿಪ್ರಾಯವಲ್ಲ. ನಾನು ಯಾವಾಗಲೂ ನ್ಯಾಯಾಂಗವನ್ನು ಗೌರವಿಸುತ್ತೇನೆ ಮತ್ತು ನಂಬುತ್ತೇನೆ. ಕಾಲಕಾಲಕ್ಕೆ, ಅನೇಕ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮತ್ತು ನಿವೃತ್ತ ಮುಖ್ಯ ನ್ಯಾಯಮೂರ್ತಿಗಳು ಸಹ ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ ಮತ್ತು ಅದರ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

”ಪ್ರತಿಯೊಬ್ಬ ನಾಗರಿಕನು ನ್ಯಾಯಾಂಗವನ್ನು ಗೌರವಿಸಬೇಕು ಮತ್ತು ನಂಬಬೇಕು ಎಂದು ನಾನು ದೃಢವಾಗಿ ನಂಬುತ್ತೇನೆ. ಇದು ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನ್ಯಾಯಾಂಗದಲ್ಲಿ ಅತಿರೇಕದ ಭ್ರಷ್ಟಾಚಾರವಿದೆ: ಅಶೋಕ್ ಗೆಹ್ಲೋಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...