Homeಚಳವಳಿದೆಹಲಿ ಗಡಿಗಳಲ್ಲಿ ರಾಜಸ್ಥಾನ-ಮಹಾರಾಷ್ಟ್ರ ರೈತರ ಹೋರಾಟ: ನೀವು ತಿಳಿಯಬೇಕಾದ ಅಂಶಗಳು

ದೆಹಲಿ ಗಡಿಗಳಲ್ಲಿ ರಾಜಸ್ಥಾನ-ಮಹಾರಾಷ್ಟ್ರ ರೈತರ ಹೋರಾಟ: ನೀವು ತಿಳಿಯಬೇಕಾದ ಅಂಶಗಳು

ಜ. 11ರಂದು ಕೇರಳದಿಂದ 1000 ರೈತರು ಶಹಜಹಾನ್‌ಪುರ್‌ ಗಡಿಯತ್ತ ಹೊರಡಲಿದ್ದಾರೆ. ಜ.21ರಂದು ಮತ್ತೊಂದು ಗುಂಪು ದೆಹಲಿಯತ್ತ ಹೊರಡಲಿದೆ ಎಂದು ಕೇರಳ ಕೃಷಿಕ್‌ ಸಂಘಂ ತಿಳಿಸಿದೆ.

- Advertisement -
- Advertisement -

ಟ್ರಿಕಿ, ಸಿಂಗು, ಗಾಜಿಯಾಪುರ‌ದಂತೆಯೇ ರಾಜಸ್ಥಾನ-ಹರಿಯಾಣ ರಾಜ್ಯಗಳನ್ನು ಬೆಸೆಯುವ ಹೆದ್ದಾರಿಯಲ್ಲಿರುವ ಶಹಜಹಾನ್‌ಪುರ್‌ ಗಡಿಯಲ್ಲಿ ರೈತ ಹೋರಾಟ ನಡೆಯುತ್ತಿದೆ.

ಟಿಕ್ರಿ ಮತ್ತು ಸಿಂಘು ಗಡಿಯಲ್ಲಿ ಪಂಜಾಬ್‌, ಹರಿಯಾಣದಿಂದ ದೊಡ್ಡ ಸಂಖ್ಯೆಯಲ್ಲಿ ಬಂದ ರೈತರು ಹೋರಾಟಕ್ಕೆ ಕುಳಿತಿದ್ದರೆ, ಶಹಜಹಾನ್‌ಪುರ್‌ ಗಡಿಯಲ್ಲಿ ಡಿಸೆಂಬರ್‌ 12ರಿಂದ ರಾಜಸ್ಥಾನದಿಂದ ಬಂದ ರೈತರು ಹೋರಾಟಕ್ಕೆ ಕುಳಿತಿದ್ದಾರೆ. ಈ ಹೋರಾಟದ ಮುಂದಾಳತ್ವವನ್ನು ಆಲ್‌ ಇಂಡಿಯಾ ಕಿಸಾನ್‌ ಸಭಾ ವಹಿಸಿಕೊಂಡಿದೆ.

ಕಳೆದ ಒಂದು ವಾರದಿಂದ ಮಹಾರಾಷ್ಟ್ರ, ಕೇರಳದಿಂದಲೂ ಸಾವಿರಾರು ಸಂಖ್ಯೆಯ ರೈತರು ಈ ಗಡಿ ಭಾಗಕ್ಕೆ ಬಂದು ಹೋರಾಟದಲ್ಲಿ ಜೊತೆಯಾಗಿದ್ದಾರೆ.

ದೆಹಲಿ ಚಲೋ ಜಾಥಾದ ಭಾಗವಾಗಿ ರಾಜಸ್ಥಾನದಿಂದ ಹೊರಟ ರೈತರನ್ನು ರಾಜಸ್ಥಾನ ಹಾಗೂ ಹರಿಯಾಣ ಪೊಲೀಸರು ಈ ಗಡಿಯಲ್ಲಿ ತಡೆದು ನಿಲ್ಲಿಸಿದ್ದು ಕಳೆದ ಆರು ವಾರಗಳಿಂದ ಹೋರಾಟ ಮುಂದುವರೆದಿದೆ.

ಕಿಸಾನ್‌ ಮಹಾ ಪಂಚಾಯತ್‌ ಸೇರಿದಂತೆ ವಿವಿಧ ರೈತ ಸಂಘಟನೆಗಳು 25 ಟ್ರ್ಯಾಕ್ಟರ್‌ಗಳೊಂದಿಗೆ ಗಡಿಯನ್ನು ತಲುಪಿದ್ದು, ಮೂರು ಹೊಸ ಕೃಷಿ ಕಾಯ್ದೆಗಳನ್ನು ಹಿಂಪಡೆಯುವುದಕ್ಕೆ ಪಂಜಾಬ್‌ ರೈತರಂತೆ ಪಟ್ಟು ಹಿಡಿದಿದ್ದಾರೆ.

ಜಾಟ್‌ ಮಹಾಸಭಾ 100ಕ್ಕೂ ಹೆಚ್ಚು ವಾಹನಗಳೊಂದಿಗೆ ಈ ಹೋರಾಟದಲ್ಲಿ ಜೊತೆಯಾಗಿ ಇತ್ತೀಚೆಗೆ ಜೈಪುರ -ದೆಹಲಿ ಹೈವೇ ತಡೆಯುವ ಯತ್ನ ನಡೆಸಿ, ಸರ್ಕಾರಗಳಿಗೆ ಹೋರಾಟದ ಬಿಸಿ ಮುಟ್ಟಿಸಿತ್ತು.

ಕಿಸಾನ್‌ ಸಂಯುಕ್ತ ಮೋರ್ಚಾದ ಸಂಯೋಜಕರಾಗಿರುವ ರಾಜಕೀಯ ಚಿಂತಕ ಯೋಗೇಂದ್ರ ಯಾದವ್‌, ಪ್ರಾದೇಶಿಕ ರೈತ ಸಂಘಟನೆಗಳನ್ನು ಇಲ್ಲಿಗೆ ಕರೆತರುವ, ಹೋರಾಟದ ಬಲವನ್ನು ಇನ್ನಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ನಡೆಸಿದ್ದಾರೆ.

ಇದಕ್ಕಾಗಿ ಸಕ್ತಪುರಾ, ಗುಗಲ್‌ಕೋಟ, ಮಿರ್ಜಾಪುರ್‌, ಪಲವಾ, ಬಿರೋದಾ, ಫೌಲಾದ್‌ಪುರ್‌ಗಳ ರೈತರಿಂದ ಬೆಂಬಲವನ್ನು ಕೇಳಲಾಗಿದೆ.

ಕಿಸಾನ್ ಸಂಘರ್ಷ ಸಮಿತಿ, ಭೀಮಸೇನೆ, ಎಎಎಸ್‌ಪಿ, ಸಮಾಜವಾದಿ ಪಕ್ಷ, ಅಂಬೇಡ್ಕರ್‌ವಾದಿ ಪಕ್ಷ, ರಾಷ್ಟ್ರೀಯ ಲೋಕ ತಾಂತ್ರಿಕ ಪಕ್ಷ, ಸ್ವರಾಜ್‌ ಯುವ ಸಂಘಟನೆ ಈ ಹೋರಾಟಕ್ಕೆ ಬೆಂಬಲ ಸೂಚಿಸಿ ರೈತರೊಂದಿಗೆ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ.

ಮಾಜಿ ಶಾಸಕ, ಹಾಲಿ ಆಲ್‌ ಇಂಡಿಯಾ ಕಿಸಾನ್‌ ಸಭಾದ ಅಮ್ರಾ ರಾಮ್‌, ಲೋಕ ತಾಂತ್ರಿಕ ಪಕ್ಷದ ಸಂಸದ ಹನುಮಾನ್‌ ಬೆನಿವಾಲಾ ಹೋರಾಟ ನಾಯಕತ್ವ ವಹಿಸಿಕೊಂಡಿದ್ದಾರೆ. ಭೀಮ್‌ ಆರ್ಮಿಯ ಚಂದ್ರಶೇಖರ್‌ ಆಜಾದ್‌, ಕಿಸಾನ್‌ ಮಹಾಪಂಚಾಯತ್‌ ರಾಷ್ಟ್ರೀಯ ಅಧ್ಯಕ್ಷ ರಾಮ್‌ಪಾಲ್‌ ಜಾಟ್‌, ಸಮಾಜಸೇವಕ ರಾಧೇಶ್ಯಾಮ್‌ ಶುಕ್ಲಾವಾಸ್‌, ಕಿಸಾನ್‌ ಯೂನಿಯನ್‌ನ ಬಲಬೀರ್‌ ಛಿಲ್ಲರ್‌, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಲಲಿತ್‌ ಯಾದವ್‌ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಈ ಹೋರಾಟದಲ್ಲಿ ಪಾಲ್ಗೊಂಡು ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ಅಷ್ಟೇ ಅಲ್ಲ, ರಾಜಸ್ಥಾನ, ಹರಿಯಾಣ ಸೇರಿದಂತೆ ವಿವಿಧ ಭಾಗಗಳ ನಾಯಕರು ಇಲ್ಲಿ ನೆರೆದ ರೈತರೊಂದಿಗೆ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ.

ಹೊಸ ವರ್ಷದ ಮುನ್ನಾ ದಿನ ರೈತರು ಮತ್ತು ಪೊಲೀಸರೊಂದಿಗೆ ನಡೆದ ಸಂಘರ್ಷದಲ್ಲಿ ಯುವ ಹೋರಾಟಗಾರರು ಪೊಲೀಸರು ಹಾಕಿದ್ದ ಬ್ಯಾರಿಕೇಡ್‌ಗಳನ್ನು ಕೆಡವಲು ಪ್ರಯತ್ನಿಸಿದರು. ಈ ಸಂದರ್ಭದಲ್ಲಿ ಹೋರಾಟಗಾರರನ್ನು ಹಿಮ್ಮೆಟ್ಟಿಸುವುದಕ್ಕಾಗಿ ಟಿಯರ್‌ ಗ್ಯಾಸ್‌, ವಾಟರ್‌ ಕ್ಯಾನನ್‌ಗಳನ್ನು ಬಳಸಿದವು. ಗಡಿಯ ಎರಡು ಬದಿಯಲ್ಲಿ ಡ್ರೋನ್‌ಗಳ ಮೂಲಕ ಹೋರಾಟಗಾರರ ಮೇಲೆ ನಿಗಾ ಇಡಲಾಗಿದೆ.

ಜ. 11ರಂದು ಕೇರಳದಿಂದ 1000 ರೈತರು ಶಹಜಹಾನ್‌ಪುರ್‌ ಗಡಿಯತ್ತ ಹೊರಡಲಿದ್ದಾರೆ. ಜ.21ರಂದು ಮತ್ತೊಂದು ಗುಂಪು ದೆಹಲಿಯತ್ತ ಹೊರಡಲಿದೆ ಎಂದು ಕೇರಳ ಕೃಷಿಕ್‌ ಸಂಘಂ ತಿಳಿಸಿದೆ.

ಹೀಗೇ ವಿವಿಧ ರಾಜ್ಯಗಳಿಂದ ರೈತ ಹೋರಾಟಗಾರರು ಈ ಗಡಿಯನ್ನು ತಲುಪುತ್ತಿದ್ದು, ಪ್ರತಿಭಟನೆಗೆ ದಿನದಿನಕ್ಕೂ ಹೊಸ ಹುರುಪು, ಹೊಸ ಶಕ್ತಿಯನ್ನು ಪಡೆದುಕೊಳ್ಳುತ್ತಿದೆ. ಶುಕ್ರವಾರ 8ನೇ ಸುತ್ತಿನ ಮಾತುಕತೆಯೂ ವಿಫಲವಾದ ನಂತರ ರೈತರು ಟಿಕ್ರಿ-ಸಿಂಘು ರೈತರಂತೆ ಈ ಗಡಿಯ ರೈತ ಹೋರಾಟಗಾರರು ಜ. 26ರ ಟ್ರ್ಯಾಕ್ಟರ್‌ ರ್ಯಾಲಿಗೆ ಸಿದ್ಧರಾಗುತ್ತಿದ್ದಾರೆ.

(ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ)


ಇದನ್ನೂ ಓದಿ:

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...