Homeಮುಖಪುಟರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

ರಾಜಸ್ಥಾನ | ಮದುವೆಯ ದಿನವೆ ಹಣದೊಂದಿಗೆ ನಾಪತ್ತೆಯಾದ ಸಾಮೂಹಿಕ ವಿವಾಹದ ಆಯೋಜಕರು!

- Advertisement -
- Advertisement -

ಸಾಮೂಹಿಕ ವಿವಾಹ ಆಯೋಜಿಸಿದ್ದ ಆಯೋಜಕರು ಮದುವೆ ದಿನದಂದೆ ಮದುವೆಯ ಹಣದೊಂದಿಗೆ ಪರಾರಿಯಾಗಿರುವ ಅಘಾತಕಾರಿ ಘಟನೆ ರಾಜಸ್ಥಾನದ ರಾಜ್‌ಕೋಟ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಋಷಿವಂಶಿ ಸಮಾಜದ ಹೆಸರಿನಲ್ಲಿ ಆಯೋಜಿಸಲಾಗಿದ್ದ ಈ ಸಮಾರಂಭದಲ್ಲಿ ಎಲ್ಲಾ ಜಾತಿಗಳ 28 ಯುವತಿಯರ ಸಾಮೂಹಿಕ ವಿವಾಹ ನಡೆಸುವುದಾಗಿ ನಿರ್ಧರಿಸಲಾಗಿತ್ತು ಎಂದು ವರದಿಯಾಗಿದೆ. ರಾಜಸ್ಥಾನ

ಸಮಾರಂಭವು ಸುಗಮವಾಗಿ ನಡೆಯುತ್ತದೆ ಎಂದು ನಂಬಿ ಪ್ರತಿ ಕುಟುಂಬಗಳು ವಧು-ವರರ ಪರವಾಗಿ ಸುಮಾರು 40,000 ರೂ.ಗಳನ್ನು ಪಾವತಿಸಿದ್ದರು. ಆಯೋಜಕರು ನಾಪತ್ತೆಯಾಗಿರುವ ಸುದ್ದಿ ಸಿಗುತ್ತಿದ್ದಂತೆ ಗೊಂದಲವೇರ್ಪಟ್ಟಿದ್ದು, ಈ ವೇಳೆ ರಾಜ್‌ಕೋಟ್ ಪೊಲೀಸರು ಮಧ್ಯಪ್ರವೇಶಿಸಿ, ವಿವಾಹಗಳನ್ನು ಶಾಸ್ತ್ರೋಕ್ತವಾಗಿ ನಡೆಸುವಂತೆ ನೋಡಿಕೊಂಡರು ಎಂದು ವರದಿ ಹೇಳಿದೆ. ರಾಜಸ್ಥಾನ

ರಾಜ್‌ಕೋಟ್‌ನಲ್ಲಿ ಋಷಿವಂಶಿ ಸಮಾಜದ ಹೆಸರಿನಲ್ಲಿ ಆಯೋಜಿಸಲಾಗಿದ್ದ ಎಲ್ಲಾ ಜಾತಿಗಳ 28 ಹುಡುಗಿಯರ ಸಾಮೂಹಿಕ ವಿವಾಹ ಸಮಾರಂಭಕ್ಕೆ ವಧು-ವರದ ಕಡೆಯವರು 15,000 ರೂ.ಗಳಿಂದ 40,000 ರೂ.ಗಳವರೆಗೆ ಹಣವನ್ನು ಪಾವತಿಸಿದ್ದರು. ಮದುವೆಯ ದಿನ ಕುಟುಂಬಗಳು ಮಧಾಪರ್ ಬಳಿಯ ಮದುವೆಯ ಸ್ಥಳಕ್ಕೆ ಆಗಮಿಸಿದಾಗ ಯಾವುದೇ ವ್ಯವಸ್ಥೆಗಳು ಕಂಡುಬಂದಿರಲಿಲ್ಲ.

ರಾಜ್‌ಕೋಟ್ ಮತ್ತು ಹತ್ತಿರದ ಜಿಲ್ಲೆಗಳಿಂದ ಬಂದಿದ್ದ ಕುಟುಂಬಗಳು ತಾವು ಮೋಸ ಹೋಗಿರುವುದನ್ನು ತಿಳಿಯುತ್ತಿದ್ದಂತೆ ಆತಂಕಕ್ಕೆ ಒಳಗಾಗಿ ಕಣ್ಣೀರು ಹಾಕಿದ್ದಾರೆ. ಇದರ ನಂತರ ವಧುಗಳು ಹಿಂತಿರುಗಲು ಸಿದ್ಧರಾಗುತ್ತಿದ್ದಂತೆ, ಪೊಲೀಸರು ಸ್ಥಳಕ್ಕೆ ತಲುಪಿ, ಸ್ಥಗಿತಗೊಂಡ ವಿವಾಹಗಳನ್ನು ನಡೆಸಿಕೊಟ್ಟಿದ್ದಾರೆ.

“ಸಾಮೂಹಿಕ ವಿವಾಹದ ಹೆಸರಿನಲ್ಲಿ ಇದು ಎಂದಿಗೂ ಸಂಭವಿಸಬಾರದು” ಎಂದು ರಾಜ್‌ಕೋಟ್‌ನಿಂದ ತನ್ನ ಮಗನ ಮದುವೆಗೆ ಆಗಮಿಸಿದ ವಿಠ್ಠಲಭಾಯಿ ವಿಷಾದಿಸಿದ್ದಾರೆ. “ಆಯೋಜಕರು ನಮ್ಮಿಂದ 40,000 ರೂ.ಗಳನ್ನು ತೆಗೆದುಕೊಂಡು ಕಣ್ಮರೆಯಾಗಿದ್ದಾರೆ. ಆದರೆ ಯಾವುದೇ ವ್ಯವಸ್ಥೆಗಳು ಕಂಡುಬಂದಿಲ್ಲ. ಇದರಿಂದಾಗಿ ಜನರು ಸಿಲುಕಿಕೊಂಡರು. ವಂಚನೆ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

“ಆಯೋಜಕರು ಎರಡೂ ಕಡೆಯಿಂದ 15,000 ರೂ.ಗಳನ್ನು ತೆಗೆದುಕೊಂಡು, ವರದಕ್ಷಿಣೆಯೊಂದಿಗೆ ಅದ್ಧೂರಿ ವಿವಾಹವನ್ನು ಮಾಡುವುದಾಗಿ ಭರವಸೆ ನೀಡಿದ್ದರು” ಎಂದು ತಮ್ಮ ಸೋದರ ಮಾವನ ಮಗಳ ಮದುವೆಗೆ ಹಾಜರಾದ ಶಿಲ್ಪಾಬೆನ್ ಬಗ್ಥಾರಿಯಾ ಹೇಳಿದ್ದಾರೆ.

“ಬೆಳಿಗ್ಗೆ 6 ಗಂಟೆಯೊಳಗೆ ಎಲ್ಲವೂ ಸಿದ್ಧವಾಗಲಿದೆ ಎಂದು ಅವರು ನಮಗೆ ಹೇಳಿದ್ದರು. ಆದರೆ ನಾವು ಬಂದಾಗ, ಯಾವುದೇ ವ್ಯವಸ್ಥೆಗಳು ಇರಲಿಲ್ಲ, ಸಂಘಟಕರು ಇರಲಿಲ್ಲ ಮತ್ತು ಮದುವೆ ನಡೆಸಬೇಕಾಗಿದ್ದ ಬ್ರಾಹ್ಮಣರು ಸಹ ಹೊರಟು ಹೋಗಿದ್ದರು” ಎಂದು ಅವರು ನಿರಾಶೆಯನ್ನು ವಿವರಿಸಿದ್ದಾರೆ.

ವಿವಾಹ ಸ್ಥಳದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದ್ದಂತೆ ರಾಜ್‌ಕೋಟ್ ಎಸಿಪಿ ರಾಧಿಕಾ ಭರೈ ನೇತೃತ್ವದ ಪೊಲೀಸ್ ಬೆಂಗಾವಲು ಪಡೆ ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಥಳಕ್ಕೆ ಧಾವಿಸಿದೆ. ಆ ಹೊತ್ತಿಗೆ, ಕೆಲವು ವರರು ಈಗಾಗಲೇ ಹತಾಶೆಯಿಂದ ಹೊರಟುಹೋಗಿದ್ದರು, ಇದು ತೊಂದರೆಯನ್ನು ಮತ್ತಷ್ಟು ಹೆಚ್ಚಿಸಿತ್ತು.

ನಂತರ, ಪೊಲೀಸರು ಪರಿಸ್ಥಿತಿಯನ್ನು ಕೈಗೆತ್ತಿಕೊಂಡು ಮದುವೆಗಳು ನಡೆಯುವಂತೆ ನೋಡಿಕೊಳ್ಳಲು ಮುಂದಾದರು. ಈ ವೇಳೆ ಅವರು ಹೊರಟುಹೋದ ವರರನ್ನು ಸಂಪರ್ಕಿಸಿ, ಮದುವೆ ನಡೆಸುವುದಾಗಿ ಮತ್ತು ಹಿಂತಿರುಗುವಂತೆ ಒತ್ತಾಯಿಸಿದ್ದಾರೆ. “ಆಯೋಜಕರು ಕಣ್ಮರೆಯಾಗಿರುವುದರಿಂದ, ಪೊಲೀಸರು ಮದುವೆಗಳ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಮುಂದಾದರು” ಎಂದು ರಾಜ್‌ಕೋಟ್ ನಗರದ ಎಸಿಪಿ ರಾಧಿಕಾ ಭರೈ ಹೇಳಿದ್ದಾರೆ. “ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಲಾಗುವುದು” ಎಂದು ಅವರು ಇದೇ ವೇಳೆ ಹೇಳಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೈಸೂರು | ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ : ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್

ಮೈಸೂರು | ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ : ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...