Homeಮುಖಪುಟರಾಜಸ್ಥಾನ: ವಿವಾಹಿತ ಮಹಿಳೆ ಮೇಲೆ ಪೊಲೀಸ್‌ ಪೇದೆಯಿಂದ ಅತ್ಯಾಚಾರ; ಸಾರ್ವಜನಿಕರಿಂದ ಗೂಸಾ

ರಾಜಸ್ಥಾನ: ವಿವಾಹಿತ ಮಹಿಳೆ ಮೇಲೆ ಪೊಲೀಸ್‌ ಪೇದೆಯಿಂದ ಅತ್ಯಾಚಾರ; ಸಾರ್ವಜನಿಕರಿಂದ ಗೂಸಾ

- Advertisement -
- Advertisement -

ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಪೊಲೀಸ್‌ ಕಾನ್‌ಸೈಬಲ್‌ನನ್ನು ಮಂಚಕ್ಕೆ ಕಟ್ಟಿ ಸ್ಥಳೀಯರು ಥಳಿಸಿರುವ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಡೆದಿದೆ.

ಕಾನ್‌ಸೈಬಲ್‌ ಮಹಶ್ ಕುಮಾರ್ ಗುರ್ಜರ್ ಅತ್ಯಾಚಾರದ ಆರೋಪಿಯಾಗಿದ್ದು, ಈತ ಮಂಗಳವಾರ ರಾತ್ರಿ 30 ವರ್ಷದ ಮಹಿಳೆ ಮನೆಯಲ್ಲಿ ಒಂಟಿಯಾಗಿರುವಾಗ ಆಕೆಯ ಮನೆಗೆ ನುಗ್ಗಿ ಅತ್ಯಾಚಾರವೆಸಗಿದ್ದಾನೆ. ಆಕೆ ಕಿರುಚಿಕೊಂಡಾಗ ನೆರೆಹೊರೆಯವರು ಸಹಾಯಕ್ಕೆ ಬಂದು ಆರೋಪಿಯನ್ನು ಹಿಡಿದಿದ್ದಾರೆ.

ಅಷ್ಟರಲ್ಲಿ ಆಕೆಯ ಕುಟುಂಬಸರು ಆತನನ್ನು ಮಂಚಕ್ಕೆ ಕಟ್ಟಿ ಥಳಿಸಿದ್ದಾರೆ ಎಂದು ಸರ್ಕಲ್ ಆಫೀಸರ್ (ಸಿಒ) ಈಶ್ವರ್ ಸಿಂಗ್‌ ಹೇಳಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಬಸ್ಸಾ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಗುರ್ಜ‌ ಅವರನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯಿದ್ದು, ಬಳಿಕ ಗುರ್ಜರ್ ಅವರನ್ನು ಬಿಟ್ಟು ಕಳುಹಿಸಿದ್ದಾರೆ ಎಂದು ಸಿಂಗ್‌ ಹೇಳಿದ್ದಾರೆ. ಘಟನೆ ಸಂಬಂಧ ವಿವಾಹಿತ ಮಹಿಳೆ ದೂರು ನೀಡಿದ್ದಾರೆ.

ಗುರುವಾರ ಮಹಿಳೆ ಪೊಲೀಸರಿಗೆ ದೂರು ನೀಡಿದ ಬಳಿಕ ವಿಚಾರ ತಿಳಿದು ಬಂದಿದೆ. ಮಂಗಳವಾರವೇ ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಸ್ವಾ ಪೊಲೀಸ್ ಠಾಣೆಯ ಠಾಣಾಧಿಕಾರಿ ಮತ್ತು ಕಾನ್‌ಸ್ಟೆಬಲ್ ಗುರ್ಜರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ, ಆರೋಪಿ ಕಾನ್‌ಸ್ಟೆಬಲ್ ಪರಾರಿಯಾಗಿದ್ದು, ಆತನಿಗಾಗಿ ಬಲೆ ಬೀಸಲಾಗಿದೆ ಎಂದು ಸಿಂಗ್ ಹೇಳಿದ್ದಾರೆ.

ಘಟನೆ ಬಗ್ಗೆ ಸರ್ಕಲ್ ಆಫೀಸರ್ (ಸಿಒ) ಈಶ್ವರ್ ಸಿಂಗ್‌ ಮಾಹಿತಿ ನೀಡಿದ್ದು, ”ಕಾನ್‌ಸ್ಟೆಬಲ್ ಗುರ್ಜರ್ ಮಂಗಳವಾರ ರಾತ್ರಿ ಬಸ್ವಾದಲ್ಲಿ 30 ವರ್ಷದ ಮಹಿಳೆಯ ಮನೆಗೆ ಪ್ರವೇಶಿಸಿದಾಗ ಈ ಗೊಂದಲದ ಘಟನೆ ಸಂಭವಿಸಿದೆ. ಆ ಸಮಯದಲ್ಲಿ ಮಹಿಳೆ ಒಬ್ಬಂಟಿಯಾಗಿದ್ದು, ಗುರ್ಜರ್ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ” ಎಂದರು.

”ಮಹಿಳೆ ಕಿರುಚಾಡುವುದನ್ನು ಕೇಳಿಸಿಕೊಂಡ ನೆರೆಹೊರೆಯಯವರು ತಕ್ಷಣ ಸಹಾಯಕ್ಕೆ ಬಂದು ಕಾನ್‌ಸ್ಟೆಬಲ್‌ನನ್ನು ಕಟ್ಟಿಹಾಕಿದ್ದಾರೆ. ಆ ಬಳಿಕ ಸಂತ್ರಸ್ತೆಯ, ಕುಟುಂಬ ಸದಸ್ಯರು ಬಂದಿದ್ದಾರೆ. ಆಗ ಅವರು ಗುರ್ಜರ್ ಅವರ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ” ಎಂದು ಹೇಳಿದರು.

ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸಮಯಕ್ಕೆ ಬಸ್ವಾ ಪೊಲೀಸ್ ಠಾಣೆಯ ಸಿಬ್ಬಂದಿ ಮಧ್ಯಪ್ರವೇಶಿಸಿ, ಗುರ್ಜರ್‌ನನ್ನು ಬಚಾವ್ ಮಾಡಿದ್ದಾರೆ. ವೈದ್ಯಕೀಯ ಪರೀಕ್ಷೆಯ ನಂತರ, ಆತನನ್ನು ಬಿಡುಗಡೆ ಮಾಡಲಾಯಿತು.

ಬಸ್ವಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಮಂಗಳವಾರವೇ ಘಟನೆಯ ಕುರಿತು ಉನ್ನತ ಅಧಿಕಾರಿಗಳಿಗೆ ತಕ್ಷಣ ವರದಿ ಮಾಡಲು ವಿಫಲವಾದ ಕಾರಣದಿಂದ ಅಮಾನತುಗೊಂಡಿದ್ದಾರೆ. SHO ಜೊತೆಗೆ, ಗುರ್ಜರ್ ಕೂಡ ಬೇರೆ ಪೊಲೀಸ್ ಠಾಣೆಯಲ್ಲಿ ತಮ್ಮ ಕರ್ತವ್ಯದಿಂದ ಅಮಾನತುಗೊಂಡಿದ್ದಾರೆ.

ಇದನ್ನೂ ಓದಿ: ಅಸ್ಸಾಂ ಬಿಜೆಪಿ ಕಚೇರಿಯಲ್ಲಿ ಬೆತ್ತಲೆ ಮೃತದೇಹ ಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...