Homeಮುಖಪುಟರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ ಸಚಿವ

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ ಸಚಿವ

- Advertisement -
- Advertisement -

ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ ಎಂದು ತಿಳಿಸಿದ್ದಾರೆ.

ಭಜನ್ ಲಾಲ್ ಶರ್ಮಾ ನೇತೃತ್ವದ ಬಿಜೆಪಿ ಸರಕಾರ ರಾಜಸ್ಥಾನದಲ್ಲಿ ಅಧಿಕಾರದಲ್ಲಿದೆ.

ಹಿರಿಯ ನ್ಯಾಯಾಧೀಶರು ಮತ್ತು ಐಎಎಸ್ ಅಧಿಕಾರಿಗಳ ನಿವಾಸಗಳಿಗೆ ಜೈಪುರದ ಗಾಂಧಿನಗರದಲ್ಲಿ ವಸತಿ ಸಂಕೀರ್ಣ ಯೋಜನೆಯಿಂದ ರಾಜ್ಯ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ನಷ್ಟವುಂಟಾಗಲಿದೆಯೆಂದು ಹಿರಿಯ ಬಿಜೆಪಿ ನಾಯಕ ಹಾಗೂ ಕೃಷಿ ಸಚಿವ ಕಿರೋಡಿ ಲಾಲ್ ಮೀನಾ ಆಪಾದಿಸಿದ್ದಾರೆ. ಮುಖ್ಯಮಂತ್ರಿಯವರ ಅಧೀನದಲ್ಲಿರುವ ಸಾಮಾನ್ಯ ಆಡಳಿತ ಇಲಾಖೆ (ಜಿಎಡಿ) ಕ್ಯಾಬಿನೆಟ್ ಅನುಮತಿಯಿಲ್ಲದೆ ಯೋಜನೆಯನ್ನು ಮುಂದುವರಿಸುತ್ತಿದೆ ಎಂದು ಮೀನಾ ಹೇಳಿದ್ದು, ಯೋಜನೆಗೆ ತಡೆ ನೀಡಬೇಕು ಮತ್ತು ಈ ಕುರಿತ ಫೈಲ್‌ನ್ನು ವಾಪಾಸ್ಸು ತರಿಸುವಂತೆ ಸಿಎಂಗೆ ಆಗ್ರಹಿಸಿದ್ದಾರೆ.

ಸಾಮಾನ್ಯ ಆಡಳಿತ ಇಲಾಖೆ ಗಾಂಧಿನಗರದಲ್ಲಿರುವ ಹಳೆಯ ಎಂಆರ್‌ಇಸಿ ಕ್ಯಾಂಪಸ್ ಕಟ್ಟಡಗಳನ್ನು ನಾಶಪಡಿಸಿ ಬಹುಮಹಡಿ ಕಟ್ಟಡಗಳನ್ನು ನಿರ್ಮಿಸುವ ಯೋಜನೆಯನ್ನು ಹೊಂದಿದೆ. ಐದು ವರ್ಷಗಳ ಹಿಂದೆ ಈ ನಿವೇಶನದ ಮೌಲ್ಯವು ರೂ.277 ಕೋಟಿಗಳಾಗಿದ್ದರೂ, ಈಗ ಅದರ ಮೌಲ್ಯವನ್ನು ಕಡಿಮೆಗೊಳಿಸಿ 218 ಕೋಟಿ ರೂ. ಎಂದು ಹೇಳಲಾಗಿದೆ. ಜಮೀನಿನ ಮೀಸಲು ಬೆಲೆಯು ಪ್ರಸಕ್ತ 25 ಸಾವಿರ ರೂ.ಗಳಾಗಿದ್ದರೂ, ಅದನ್ನು 8 ಸಾವಿರ ಚದರ ಅಡಿಗೆ ನೀಡಲಾಗಿದೆ. ಇದರಿಂದಾಗಿ ರಾಜ್ಯ ಸರಕಾರಕ್ಕೆ ಪ್ರತಿ ಚದರ ಅಡಿಗೆ 17 ಸಾವಿರ ರೂ.ನಷ್ಟವಾಗಲಿದೆ. ಈ ವಸತಿ ಸಂಕೀರ್ಣ ಯೋಜನೆಯಡಿ ರಾಜ್ಯ ಸರಕಾರವು ಮೂರನೇ ಒಂದರಷ್ಟು ಫ್ಲ್ಯಾಟ್‌ಗಳನ್ನು ಸಾರ್ವಜನಿಕ-ಖಾಸಗಿ ಪಾಲುದಾರಿಕೆಯಡಿ ಖಾಸಗಿಯವರಿಗೆ ನೀಡಲಿದೆ ಎಂದು ಮೀನಾ ತಿಳಿಸಿದ್ದಾರೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವುಂಟಾಗಲಿದೆ ಎಂದು ಮೀನಾ ಹೇಳಿದ್ದಾರೆ. ಯೋಜನೆಯ ಕಡತವನ್ನು ಕ್ಯಾಬಿನೆಟ್ ಅಥವಾ ಹಣಕಾಸು ಸಚಿವಾಲಯ ಪಾಸ್ ಮಾಡಿಲ್ಲ  ಎಂದು ಹೇಳಿರುವ ಸಚಿವರು, ಅದನ್ನು ತಕ್ಷಣ ಹಿಂಪಡೆಯುವಂತೆ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರನ್ನು ಒತ್ತಾಯಿಸಿದ್ದಾರೆ.

ಹಿರಿಯ ಸಚಿವರಾಗಿರುವ ಕಿರೋಡಿ ಲಾಲ್ ಮೀನಾ ತಮ್ಮದೇ ಸರ್ಕಾರ ತೆಗೆದುಕೊಳ್ಳುತ್ತಿರುವ ನಿರ್ಧಾರಗಳನ್ನು ವಿರೋಧಿಸುತ್ತಿರುವುದು ಇದೇ ಮೊದಲಲ್ಲ. ಕಳೆದ ತಿಂಗಳು, ಅವರು ಪೂರ್ವ ರಾಜಸ್ಥಾನ ಕಾಲುವೆ ಯೋಜನೆಯಡಿಯಲ್ಲಿ ಭೂಮಿಯನ್ನು ಮಾರಾಟ ಮಾಡುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು ಮತ್ತು ಭ್ರಷ್ಟಾಚಾರದ ಸುಳಿವು ನೀಡಿದ್ದರು.

ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಮೊದಲು ಕಿರೋಡಿ ಲಾಲ್ ಮೀನಾ ಮೀನಾ ರಾಜ್ಯಸಭಾ ಸದಸ್ಯರಾಗಿದ್ದರು ಮತ್ತು ಚುನಾವಣಾ ಪ್ರಚಾರದಲ್ಲಿ ದೊಡ್ಡ ಪಾತ್ರವನ್ನು ವಹಿಸಿದ್ದರು. ಕಳೆದ ವರ್ಷ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪತನದ ಬಳಿಕ ಬಿಜೆಪಿಯು ಶಾಸಕ ಭಜನ್ ಲಾಲ್ ಶರ್ಮಾ ಅವರನ್ನು ಮುಖ್ಯಮಂತ್ರಿ ಮಾಡುವ ಮೂಲಕ ಅಚ್ಚರಿಯ ನಿರ್ಧಾರವನ್ನು ಪ್ರಕಟಿಸಿತ್ತು.

ಮೀನಾ ಅವರು ತಮಗೆ ನೀಡಲಾದ ಖಾತೆಗಳ ಬಗ್ಗೆ ಅತೃಪ್ತರಾಗಿದ್ದಾರೆ ಮತ್ತು ದೌಸಾ ಲೋಕಸಭಾ ಕ್ಷೇತ್ರದಿಂದ ತಮ್ಮ ಸಹೋದರನಿಗೆ ಟಿಕೆಟ್ ನೀಡಲು ಪ್ರಯತ್ನಿಸುತ್ತಿದ್ದರು ಎನ್ನಲಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ಬಿಜೆಪಿ 25ರಲ್ಲಿ 24 ಸ್ಥಾನಗಳನ್ನು ಗೆದ್ದಿತ್ತು. ಇದು 2014ರಲ್ಲಿ ಎಲ್ಲಾ 25 ಸ್ಥಾನಗಳನ್ನು ಗೆದ್ದಿತ್ತು. ಈ ಎರಡೂ ಚುನಾವಣೆಗಳು ವಸುಂಧರಾ ರಾಜೆ ನೇತೃತ್ವದಲ್ಲಿ ನಡೆದಿದ್ದವು. ಈ ವರ್ಷದ ಲೋಕಸಭೆ ಚುನಾವಣೆಯನ್ನು ಹೊಸ ಆಡಳಿತಕ್ಕೆ ಅಗ್ನಿಪರೀಕ್ಷೆ ಎಂದು ಪರಿಗಣಿಸಲಾಗಿದೆ ಮತ್ತು ಬಿಜೆಪಿಯ ಸ್ಥಾನಗಳು  ಕಡಿಮೆಯಾದರೆ, ಶರ್ಮಾ ಅವರು ತಮ್ಮ ಸರ್ಕಾರ ಮತ್ತು ಪಕ್ಷದೊಳಗಿನ ಬಣಗಳನ್ನು ಎದುರಿಸುವ ಪರಿಸ್ಥಿತಿ ಎದುರಾಗಬಹುದು ಎಂದು ಹೇಳಲಾಗಿದೆ.

ಇದನ್ನು ಓದಿ: ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...