Homeಮುಖಪುಟರಾಜಸ್ಥಾನ | ನಿರ್ಗಮಿತ ಸರಪಂಚ್‌ಗಳನ್ನೆ ಪಂಚಾಯಿತಿ ಆಡಳಿತಾಧಿಕಾರಿಯಾಗಿ ನೇಮಕಕ್ಕೆ ಬಿಜೆಪಿ ಸರ್ಕಾರ ನಿರ್ಧಾರ; ಕಾಂಗ್ರೆಸ್ ವಿರೋಧ

ರಾಜಸ್ಥಾನ | ನಿರ್ಗಮಿತ ಸರಪಂಚ್‌ಗಳನ್ನೆ ಪಂಚಾಯಿತಿ ಆಡಳಿತಾಧಿಕಾರಿಯಾಗಿ ನೇಮಕಕ್ಕೆ ಬಿಜೆಪಿ ಸರ್ಕಾರ ನಿರ್ಧಾರ; ಕಾಂಗ್ರೆಸ್ ವಿರೋಧ

- Advertisement -
- Advertisement -

ಅಧಿಕಾರಾವಧಿ ಮುಗಿದು ಹೊರಹೋಗುವ ಸರಪಂಚರನ್ನೆ ಗ್ರಾಮ ಪಂಚಾಯಿತಿಗಳ ಆಡಳಿತಾಧಿಕಾರಿಗಳಾಗಿ ನೇಮಿಸುವ ಬಗ್ಗೆ ರಾಜಸ್ಥಾನದ ಬಿಜೆಪಿ ಸರ್ಕಾರ ನಿರ್ಧರಿಸಿದೆ. ಸರ್ಕಾರದ ಈ ನಿರ್ಧಾರವನ್ನು ಕಾಂಗ್ರೆಸ್ ತೀವ್ರವಾಗಿ ವಿರೋಧಿಸಿದ್ದು, ಈ ಕ್ರಮವು ಸಾಂವಿಧಾನಿಕ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಮತ್ತು ಪ್ರಜಾಪ್ರಭುತ್ವ ಪ್ರಕ್ರಿಯೆಗಳನ್ನು ವಿಳಂಬಗೊಳಿಸುತ್ತದೆ ಎಂದು ಆರೋಪಿಸಿದೆ. ರಾಜಸ್ಥಾನ

ರಾಜ್ಯ ಕಾಂಗ್ರೆಸ್‌ನ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸಿ.ಬಿ. ಯಾದವ್ ಅವರು ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರಿಗೆ ಪತ್ರ ಬರೆದು, ಸರ್ಕಾರವು ಸಕಾಲಿಕವಾಗಿ ಪಂಚಾಯತ್ ಚುನಾವಣೆಗಳನ್ನು ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಚುನಾವಣೆಗಳನ್ನು ವಿಳಂಬಗೊಳಿಸುವ ನಿರ್ಧಾರವು ಸಂವಿಧಾನದ 243-ಇ ವಿಧಿ ಮತ್ತು 1994 ರ ರಾಜಸ್ಥಾನ ಪಂಚಾಯತ್ ರಾಜ್ ಕಾಯ್ದೆಯ ಸೆಕ್ಷನ್ 95 ರ ವಿರುದ್ಧವಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ.  

“ಐದು ವರ್ಷಗಳ ಅವಧಿ ಮುಗಿದ ನಂತರ ಯಾವುದೇ ಸಂದರ್ಭಗಳಲ್ಲಿ ಅಧಿಕಾರಾವಧಿಯನ್ನು ವಿಸ್ತರಿಸಲು ಅಥವಾ ಚುನಾವಣೆಗಳನ್ನು ಮುಂದೂಡಲು ಅನುಮತಿಸುವ ಯಾವುದೇ ನಿಬಂಧನೆ ಸಂವಿಧಾನ ಅಥವಾ ಪಂಚಾಯತ್ ರಾಜ್ ಕಾಯ್ದೆಯಲ್ಲಿ ಇಲ್ಲ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಗುರುವಾರ, ರಾಜ್ಯ ಸರ್ಕಾರವು ಅಧಿಕಾರಾವಧಿ ಮುಕ್ತಾಯಗೊಳ್ಳಲಿರುವ ಗ್ರಾಮ ಪಂಚಾಯಿತಿಗಳಿಗೆ ಹೊರಹೋಗುವ ಸರಪಂಚರನ್ನು ಮಧ್ಯಂತರ ಆಡಳಿತಾಧಿಕಾರಿಗಳಾಗಿ ನೇಮಿಸುವ ಅಧಿಸೂಚನೆಯನ್ನು ಹೊರಡಿಸಿತ್ತು.

ರಾಜಸ್ಥಾನದಾದ್ಯಂತ 6,759 ಗ್ರಾಮ ಪಂಚಾಯಿತಿಗಳ ಅಧಿಕಾರಾವಧಿ ಜನವರಿ 17, 2024 ರಂದು ಕೊನೆಗೊಳ್ಳಲಿದೆ. ಅಧಿಕೃತ ಮೂಲಗಳ ಪ್ರಕಾರ, ಸರ್ಕಾರವು ಮಧ್ಯಪ್ರದೇಶ, ಜಾರ್ಖಂಡ್ ಮತ್ತು ಉತ್ತರಾಖಂಡಗಳಲ್ಲಿ ಜಾರಿಗೆ ತಂದಿರುವ ಇದೇ ರೀತಿಯ ಮಾದರಿಗಳನ್ನು ಅಧ್ಯಯನ ಮಾಡಿ ನಿರ್ಧಾರವನ್ನು ಅಂತಿಮಗೊಳಿಸಿದೆ. ಈ ಬಗ್ಗೆ ಕಾನೂನು ಸಲಹೆ ಪಡೆದು, ಸರಪಂಚ ಸಂಘದ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಲಾಯಿತು. ಅವರು ಈ ಕ್ರಮಕ್ಕೆ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಅಧಿಸೂಚನೆಯು, ಜಿಲ್ಲಾಧಿಕಾರಿಗಳು ಗ್ರಾಮ ಪಂಚಾಯತ್‌ಗಳಲ್ಲಿ ಆಡಳಿತಾಧಿಕಾರಿಗಳ ನೇಮಕಾತಿ ಮತ್ತು ಆಡಳಿತ ಸಮಿತಿಗಳ ರಚನೆಯ ಮೇಲ್ವಿಚಾರಣೆ ಮಾಡಬೇಕೆಂದು ಆದೇಶಿಸುತ್ತದೆ. ರಾಜಸ್ಥಾನದಲ್ಲಿ 11,000 ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಿದ್ದರೂ, ಅವುಗಳ ಅಧಿಕಾರಾವಧಿ ಏಕರೂಪವಾಗಿ ಕೊನೆಗೊಳ್ಳುವುದಿಲ್ಲ. ಉದಾಹರಣೆಗೆ, 704 ಪಂಚಾಯತ್‌ಗಳ ಅಧಿಕಾರಾವಧಿ ಮಾರ್ಚ್‌ನಲ್ಲಿ ಮುಕ್ತಾಯಗೊಳ್ಳಲಿದ್ದು, 3,847 ಪಂಚಾಯತ್‌ಗಳ ಅವಧಿ ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮುಕ್ತಾಯಗೊಳ್ಳಲಿದೆ.

ಚುನಾವಣಾ ಪ್ರಕ್ರಿಯೆಯನ್ನು ಒಟ್ಟಗೂಡಿಸುವುದು ಮತ್ತು ಮಧ್ಯಂತರದಲ್ಲಿ ಸುಗಮ ಆಡಳಿತವನ್ನು ಖಚಿತಪಡಿಸುವುದು ಈ ನಿರ್ಧಾರದ ಗುರಿಯಾಗಿದೆ ಎಂದು ಬಿಜೆಪಿ ಸರ್ಕಾರ ಹೇಳಿಕೊಂಡಿದೆ. ಆದಾಗ್ಯೂ, ಅನಗತ್ಯವಾಗಿ ಚುನಾವಣೆಗಳನ್ನು ವಿಳಂಬ ಮಾಡುವ ಮೂಲಕ ಸರ್ಕಾರವು ಪ್ರಜಾಪ್ರಭುತ್ವ ತತ್ವಗಳನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಟೀಕಿಸುತ್ತಿದೆ. ಪ್ರಸ್ತುತ ವಿಚಾರವು ರಾಜಕೀಯ ಚರ್ಚೆಯನ್ನು ಹುಟ್ಟುಹಾಕಿದ್ದು, ಪಂಚಾಯತ್ ಆಡಳಿತದಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ಸಾಂವಿಧಾನಿಕ ಆದೇಶಗಳನ್ನು ಪಾಲಿಸಬೇಕೆಂಬ ಕೂಗು ಕೇಳಿ ಬಂದಿದೆ.

ಇದನ್ನೂಓದಿ:  ಇಡಿಯಿಂದ ಮುಡಾ ಸ್ಥಿರಾಸ್ತಿ ಮುಟ್ಟುಗೋಲು – ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...