ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ವರದಿಯಾಗಿದ್ದು, ಖಾಸಗಿ ಶಾಲೆಯಲ್ಲಿ 7 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯನ್ನು ಶಿಕ್ಷಕರೊಬ್ಬರು ಥಳಿಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ ಈ ದುರಂತ ಘಟನೆ ನಡೆದಿದ್ದು, ಹೋಂವರ್ಕ್ ಮಾಡಿಲ್ಲ ಎಂದು ವಿದ್ಯಾರ್ಥಿಯನ್ನು ಶಿಕ್ಷಕ ಥಳಿಸಿದ್ದಾರೆ. ಪೊಲೀಸರು ಆರೋಪಿ ಶಿಕ್ಷಕ ಮನೋಜ್ (35)ರನ್ನು ಬಂಧಿಸಿದ್ದಾರೆ. ಮೃತ ವಿದ್ಯಾರ್ಥಿಯನ್ನು 13 ವರ್ಷದ ಗಣೇಶ್ ಎಂದು ಗುರುತಿಸಲಾಗಿದೆ.
ರಾಜಸ್ಥಾನದ ಶಿಕ್ಷಣ ಸಚಿವ ಗೋವಿಂದ ಸಿಂಗ್ ದೋತಾಸ್ರಾ ಘಟನೆಯನ್ನು ಖಂಡಿಸಿದ್ದು, ಸಂತಾಪ ವ್ಯಕ್ತಪಡಿಸಿದ್ದಾರೆ. ಜೊತೆಗೆ ಖಾಸಗಿ ಶಾಲೆಯ ಮಾನ್ಯತೆಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿದ್ದಾರೆ.
ಇದನ್ನೂ ಓದಿ: ತಮಿಳುನಾಡು: ವಿದ್ಯಾರ್ಥಿಗೆ ಕಾಲಿನಿಂದ ಒದ್ದು, ಮನಬಂದಂತೆ ಥಳಿಸಿದ ಶಿಕ್ಷಕನ ಬಂಧನ
Rajasthan | A class 7 student of a private school died after he was allegedly thrashed by a teacher in Churu district
A man lodged a complaint alleging that his son was beaten by his teacher after which he fell sick & later died in a hospital. Case registered: Police (20.10) pic.twitter.com/LPpRjQ7ZxG
— ANI (@ANI) October 21, 2021
“13 ವರ್ಷದ ಗಣೇಶ್ ಖಾಸಗಿ ಶಾಲೆಯ 7 ನೇ ತರಗತಿ ವಿದ್ಯಾರ್ಥಿಯಾಗಿದ್ದು, ಹೋಂವರ್ಕ್ ಪೂರ್ಣಗೊಳಿಸದ ಕಾರಣ ಶಿಕ್ಷಕರು ತೀವ್ರವಾಗಿ ಥಳಿಸಿದ್ದಾರೆ. ಥಳಿಸಿದ ನಂತರ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಷ್ಟರಲ್ಲಿ ವೈದ್ಯರು ಬಾಲಕ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ” ಎಂದು ಸಾಲಸಾರ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಸಂದೀಪ್ ವಿಷ್ಣೋಯ್ ಹೇಳಿದ್ದಾರೆ.
ಬಾಲಕನ ತಂದೆ ಶಿಕ್ಷಕನ ವಿರುದ್ಧ ದುರು ದಾಖಲಿಸಿದ್ದಾರೆ. ಈ ಪ್ರಕರಣ ಕೂಲಂಕಷವಾಗಿ ತನಿಖೆ ಮಾಡುವವರೆಗೂ ಶಾಲೆಯ ಮಾನ್ಯತೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ರಾಜಸ್ತಾನ: 11 ವರ್ಷದ ಬಾಲಕಿ ಮೇಲೆ ಶಿಕ್ಷಕನಿಂದ ಅತ್ಯಾಚಾರ


