ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಸುವುದಿಲ್ಲ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ಪ್ರಸ್ತುತ ಪಕ್ಷದ ಹಿರಿಯ ನಾಯಕರಾದ ಕೆ.ಸಿ.ವೇಣುಗೋಪಾಲ್, ದಿಗ್ವಿಜಯ ಸಿಂಗ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.
“ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಅಧ್ಯಕ್ಷೀಯ ರೇಸ್‌ನಿಂದ ಹೊರಗುಳಿದಿದ್ದಾರೆ. ಸೆಪ್ಟೆಂಬರ್ 30 ರ ಮೊದಲು ಇತರ ನಾಯಕರು ನಾಮಪತ್ರ ಸಲ್ಲಿಸಲಿದ್ದಾರೆ. ಮುಕುಲ್ ವಾಸ್ನಿಕ್, ಮಲ್ಲಿಕಾರ್ಜುನ ಖರ್ಗೆ, ದಿಗ್ವಿಜಯ ಸಿಂಗ್, ಕೆಸಿ ವೇಣುಗೋಪಾಲ್ ರೇಸ್‌ನಲ್ಲಿದ್ದಾರೆ” ಎಂದು ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
“ಅಶೋಕ್ ಗೆಹ್ಲೋಟ್ ನಡೆದುಕೊಂಡ ರೀತಿ ಪಕ್ಷದ ನಾಯಕತ್ವಕ್ಕೆ ಸರಿ ಹೋಗಿಲ್ಲ. ನಾಯಕತ್ವ ಅವರ ಬಗ್ಗೆ ತುಂಬಾ ಅಸಮಾಧಾನ ಹೊಂದಿದೆ” ಎಂದು ಪಕ್ಷದ ಸಿಡಬ್ಲ್ಯೂಸಿ ಸದಸ್ಯರಾಗಿರುವ ಇನ್ನೊಬ್ಬ ನಾಯಕ ಹೇಳಿದ್ದಾರೆ.
ಇದನ್ನೂ ಓದಿ: ‘ಅನ್ನಭಾಗ್ಯ ಕನ್ನಭಾಗ್ಯ’ ಇತ್ಯಾದಿ ಸಾಲುಸಾಲು ಜಾಹೀರಾತು ನೀಡಿದ್ದ ಬಿಜೆಪಿ ದಾಖಲೆಯನ್ನೇ ಒದಗಿಸಿಲ್ಲ: ವರದಿ
ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಅಶೋಕ್ ಗೆಹ್ಲೋಟ್ ಅವರು ಘೋಷಿಸಿದ ನಂತರ, ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಬಿಕ್ಕಟ್ಟು ಎದುರಾಗಿದೆ. ಇದರ ನಂತರ ಸಭೆ ನಡೆಸಿರುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯ ನಾಮನಿರ್ದೇಶನ ಪ್ರಕ್ರಿಯೆ ಮುಗಿಯುವವರೆಗೆ (ಸೆಪ್ಟೆಂಬರ್ 30) ರಾಜ್ಯದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ.
ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯ ಕುರಿತು ಚರ್ಚೆ ನಡೆಯುವ ಪಕ್ಷದ ಸಭೆಗೆ ಮುನ್ನ 82 ಕಾಂಗ್ರೆಸ್ ಶಾಸಕರು ರಾಜೀನಾಮೆ ಸಲ್ಲಿಸಿದ್ದಾರೆ. ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ತಮ್ಮ ಪ್ರಯತ್ನವನ್ನು ದೃಢಪಡಿಸಿದ್ದರಿಂದ, ಸಚಿನ್ ಪೈಲಟ್ ಅವರನ್ನು ಮುಂದಿನ ರಾಜಸ್ಥಾನ ಸಿಎಂ ಆಗಿ ನೇಮಿಸಲಾಗುತ್ತದೆ ಎಂಬ ಊಹಾಪೋಹಗಳು ಇದ್ದವು. ಆದರೆ ಅಶೋಕ್ ಗೆಹ್ಲೋಟ್ ನಿಷ್ಠಾವಂತರಿಗೆ ಇದು ಅಸಮಾಧಾನ ತಂದಿದೆ
ಹೀಗಾಗಿ, ಕಾಂಗ್ರೆಸ್ ನಾಯಕತ್ವ ಮತ್ತು ಅಶೋಕ್ ಗೆಹ್ಲೋಟ್ ನಿಷ್ಠಾವಂತರ ನಡುವಿನ ಬಿಕ್ಕಟ್ಟಿಗೆ ಕಾರಣವಾಯಿದೆ. ಪಕ್ಷದ ಹೈಕಮಾಂಡ್ ತನ್ನ ಪಕ್ಷದ ವೀಕ್ಷಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಅಜಯ್ ಮಾಕನ್ ಅವರಿಂದ ರಾಜಸ್ಥಾನದ ರಾಜಕೀಯ ಪರಿಸ್ಥಿತಿಯ ಬಗ್ಗೆ ವರದಿಯನ್ನು ಕೇಳಿದೆ.
ಇದನ್ನೂ ಓದಿ: ಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಮುಂದುವರಿಯಬೇಕು ಎಂದ ರಾಜಸ್ಥಾನದ ಕಾಂಗ್ರೆಸ್ ಶಾಸಕರು!
ಈ ಮಧ್ಯೆ, ರಾಜಸ್ಥಾನ ಸಿಎಂ ಹುದ್ದೆಗೆ ಬಿಕ್ಕಟ್ಟು ಭುಗಿಲೆದ್ದಿದ್ದು, ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ರೇಸ್‌ನಿಂದ ಹೊರಗುಳಿಯುತ್ತಿದ್ದಾರೆ.
ಬಹಳ ಮುಖ್ಯವಾಗಿ ಕಾಂಗ್ರೆಸ್ ಉನ್ನತ ನಾಯಕತ್ವವು ತನ್ನ ‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ನೀತಿಯ ಬಗ್ಗೆ ದೃಢವಾಗಿರುವುದರಿಂದ, ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಮುಖ್ಯಸ್ಥರಾದರೆ ಸಿಎಂ ಸ್ಥಾನವನ್ನು ಉಳಿಸಿಕೊಳ್ಳಲು ಕಡಿಮೆ ಅವಕಾಶವಿತ್ತು.


