Homeಮುಖಪುಟರಾಜಸ್ಥಾನ ರಾಜಕೀಯ ಬಿಕ್ಕಟ್ಟು: ಕಾಂಗ್ರೆಸ್ ಅಧ್ಯಕ್ಷೀಯ ರೇಸ್‌ನಿಂದ ಅಶೋಕ್ ಗೆಹ್ಲೋಟ್‌ ಔಟ್‌‌

ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ಕಾಂಗ್ರೆಸ್ ಅಧ್ಯಕ್ಷೀಯ ರೇಸ್‌ನಿಂದ ಅಶೋಕ್ ಗೆಹ್ಲೋಟ್‌ ಔಟ್‌‌

- Advertisement -
- Advertisement -

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌‌ ಅವರು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಸುವುದಿಲ್ಲ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ಪ್ರಸ್ತುತ ಪಕ್ಷದ ಹಿರಿಯ ನಾಯಕರಾದ ಕೆ.ಸಿ.ವೇಣುಗೋಪಾಲ್, ದಿಗ್ವಿಜಯ ಸಿಂಗ್‌ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

“ಅಶೋಕ್ ಗೆಹ್ಲೋಟ್‌‌ ಅವರು ಕಾಂಗ್ರೆಸ್ ಅಧ್ಯಕ್ಷೀಯ ರೇಸ್‌ನಿಂದ ಹೊರಗುಳಿದಿದ್ದಾರೆ. ಸೆಪ್ಟೆಂಬರ್ 30 ರ ಮೊದಲು ಇತರ ನಾಯಕರು ನಾಮಪತ್ರ ಸಲ್ಲಿಸಲಿದ್ದಾರೆ. ಮುಕುಲ್ ವಾಸ್ನಿಕ್, ಮಲ್ಲಿಕಾರ್ಜುನ ಖರ್ಗೆ, ದಿಗ್ವಿಜಯ ಸಿಂಗ್, ಕೆಸಿ ವೇಣುಗೋಪಾಲ್ ರೇಸ್‌ನಲ್ಲಿದ್ದಾರೆ” ಎಂದು ಕಾಂಗ್ರೆಸ್‌‌ ಮುಖಂಡರೊಬ್ಬರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅಶೋಕ್‌ ಗೆಹ್ಲೋಟ್ ನಡೆದುಕೊಂಡ ರೀತಿ ಪಕ್ಷದ ನಾಯಕತ್ವಕ್ಕೆ ಸರಿ ಹೋಗಿಲ್ಲ. ನಾಯಕತ್ವ ಅವರ ಬಗ್ಗೆ ತುಂಬಾ ಅಸಮಾಧಾನ ಹೊಂದಿದೆ” ಎಂದು ಪಕ್ಷದ ಸಿಡಬ್ಲ್ಯೂಸಿ ಸದಸ್ಯರಾಗಿರುವ ಇನ್ನೊಬ್ಬ ನಾಯಕ ಹೇಳಿದ್ದಾರೆ.

ಇದನ್ನೂ ಓದಿ: ‘ಅನ್ನಭಾಗ್ಯ ಕನ್ನಭಾಗ್ಯ’ ಇತ್ಯಾದಿ ಸಾಲುಸಾಲು ಜಾಹೀರಾತು ನೀಡಿದ್ದ ಬಿಜೆಪಿ ದಾಖಲೆಯನ್ನೇ ಒದಗಿಸಿಲ್ಲ: ವರದಿ

ರಾಷ್ಟ್ರೀಯ ಕಾಂಗ್ರೆಸ್‌‌‌‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಅಶೋಕ್‌‌‌ ಗೆಹ್ಲೋಟ್‌‌‌ ಅವರು ಘೋಷಿಸಿದ ನಂತರ, ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಬಿಕ್ಕಟ್ಟು ಎದುರಾಗಿದೆ. ಇದರ ನಂತರ ಸಭೆ ನಡೆಸಿರುವ ಕಾಂಗ್ರೆಸ್‌ ಅಧ್ಯಕ್ಷೀಯ ಚುನಾವಣೆಯ ನಾಮನಿರ್ದೇಶನ ಪ್ರಕ್ರಿಯೆ ಮುಗಿಯುವವರೆಗೆ (ಸೆಪ್ಟೆಂಬರ್ 30) ರಾಜ್ಯದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ.

ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯ ಕುರಿತು ಚರ್ಚೆ ನಡೆಯುವ ಪಕ್ಷದ ಸಭೆಗೆ ಮುನ್ನ 82 ಕಾಂಗ್ರೆಸ್ ಶಾಸಕರು ರಾಜೀನಾಮೆ ಸಲ್ಲಿಸಿದ್ದಾರೆ. ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ತಮ್ಮ ಪ್ರಯತ್ನವನ್ನು ದೃಢಪಡಿಸಿದ್ದರಿಂದ, ಸಚಿನ್ ಪೈಲಟ್ ಅವರನ್ನು ಮುಂದಿನ ರಾಜಸ್ಥಾನ ಸಿಎಂ ಆಗಿ ನೇಮಿಸಲಾಗುತ್ತದೆ ಎಂಬ ಊಹಾಪೋಹಗಳು ಇದ್ದವು. ಆದರೆ ಅಶೋಕ್ ಗೆಹ್ಲೋಟ್ ನಿಷ್ಠಾವಂತರಿಗೆ ಇದು ಅಸಮಾಧಾನ ತಂದಿದೆ

ಹೀಗಾಗಿ, ಕಾಂಗ್ರೆಸ್ ನಾಯಕತ್ವ ಮತ್ತು ಅಶೋಕ್‌ ಗೆಹ್ಲೋಟ್ ನಿಷ್ಠಾವಂತರ ನಡುವಿನ ಬಿಕ್ಕಟ್ಟಿಗೆ ಕಾರಣವಾಯಿದೆ. ಪಕ್ಷದ ಹೈಕಮಾಂಡ್ ತನ್ನ ಪಕ್ಷದ ವೀಕ್ಷಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಅಜಯ್ ಮಾಕನ್ ಅವರಿಂದ ರಾಜಸ್ಥಾನದ ರಾಜಕೀಯ ಪರಿಸ್ಥಿತಿಯ ಬಗ್ಗೆ ವರದಿಯನ್ನು ಕೇಳಿದೆ.

ಇದನ್ನೂ ಓದಿ: ಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್ ಮುಂದುವರಿಯಬೇಕು ಎಂದ ರಾಜಸ್ಥಾನದ ಕಾಂಗ್ರೆಸ್ ಶಾಸಕರು!

ಈ ಮಧ್ಯೆ, ರಾಜಸ್ಥಾನ ಸಿಎಂ ಹುದ್ದೆಗೆ ಬಿಕ್ಕಟ್ಟು ಭುಗಿಲೆದ್ದಿದ್ದು, ಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ರೇಸ್‌ನಿಂದ ಹೊರಗುಳಿಯುತ್ತಿದ್ದಾರೆ.

ಬಹಳ ಮುಖ್ಯವಾಗಿ ಕಾಂಗ್ರೆಸ್‌ ಉನ್ನತ ನಾಯಕತ್ವವು ತನ್ನ ‘ಒಬ್ಬ ವ್ಯಕ್ತಿ, ಒಂದು ಹುದ್ದೆ’ ನೀತಿಯ ಬಗ್ಗೆ ದೃಢವಾಗಿರುವುದರಿಂದ, ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಮುಖ್ಯಸ್ಥರಾದರೆ ಸಿಎಂ ಸ್ಥಾನವನ್ನು ಉಳಿಸಿಕೊಳ್ಳಲು ಕಡಿಮೆ ಅವಕಾಶವಿತ್ತು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....