Homeಮುಖಪುಟರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಜಯಭೇರಿ, ಎರಡನೇ ಸ್ಥಾನದಲ್ಲಿ ಬಿಜೆಪಿ

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್ ಜಯಭೇರಿ, ಎರಡನೇ ಸ್ಥಾನದಲ್ಲಿ ಬಿಜೆಪಿ

- Advertisement -
- Advertisement -

ರಾಜಸ್ಥಾನದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಗಳು ನಡೆದಿದ್ದು, ಕಾಂಗ್ರೆಸ್ ಭರ್ಜರಿ ಜಯ ಗಳಿಸಿದೆ. ಬಿಜೆಪಿ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟಿದೆ. ರಾಜ್ಯದ ಆರು ಜಿಲ್ಲೆಗಳ 78 ಪಂಚಾಯತ್‌ ಸಮಿತಿಯ 1,564 ಸ್ಥಾನಗಳಿಗೆ ಮತ್ತು ಜಿಲ್ಲಾ ಪರಿಷತ್‌ನ 200 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಶನಿವಾರ ಫಲಿತಾಂಶ ಪ್ರಕಟವಾಗಿದೆ.

ಆಡಳಿತಾರೂಢ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಕಳೆದ ಚುನಾವಣೆಗಳಲ್ಲಿ ಹೆಚ್ಚು ಸ್ಥಾನ ಗೆದ್ದಿದ್ದ ಬಿಜೆಪಿ ಈ ಚುನಾವಣೆಯಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದೆ.

ಒಟ್ಟು 1,564 ಸ್ಥಾನಗಳಲ್ಲಿ ಕಾಂಗ್ರೆಸ್‌ ಪಕ್ಷವು 670 ಪಂಚಾಯತಿ ಸ್ಥಾನಗಳನ್ನು ಮತ್ತು ಬಿಜೆಪಿ 551 ರಲ್ಲಿ ಸ್ಥಾನಗಳನ್ನು ಗೆದ್ದಿದೆ. ಇನ್ನು, ಆರ್‌ಎಲ್‌ಪಿ 40 ಮತ್ತು ಬಿಎಸ್‌ಪಿ 11 ಸ್ಥಾನಗಳನ್ನು ಗೆದ್ದಿದೆ. ಸ್ವತಂತ್ರ ಅಭ್ಯರ್ಥಿಗಳು 290 ಸ್ಥಾನಗಳಲ್ಲಿ ಗೆದ್ದಿದ್ದಾರೆ. ಎರಡು ಸ್ಥಾನಗಳ ಫಲಿತಾಂಶ ಪ್ರಕಟವಾಗಿಲ್ಲ.

ಜಿಲ್ಲಾ ಪರಿಷತ್‌ನ ಒಟ್ಟು 200 ಸ್ಥಾನಗಳಲ್ಲಿ ಕಾಂಗ್ರೆಸ್‌ 99 ಸ್ಥಾನಗಳು, ಬಿಜೆಪಿ 90 ಸ್ಥಾನಗಳನ್ನು ಗೆದ್ದಿವೆ. ಉಳಿದಂತೆ ಇತರ ಪಕ್ಷಗಳು 11 ಸ್ಥಾನಗಳನ್ನು ಗೆದ್ದಿವೆ.

ಇದನ್ನೂ ಓದಿ: ರಾಜಸ್ಥಾನ: ಪಾಕಿಸ್ತಾನಕ್ಕೆ ಹೋಗು ಎಂದು ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ, ಐವರ ಬಂಧನ

ಕಳೆದ ಚುನಾವಣೆಯಲ್ಲಿ 1,328 ಪಂಚಾಯಿತಿ ಸಮಿತಿ ಸ್ಥಾನಗಳ ಪೈಕಿ ಬಿಜೆಪಿ 585 ಸ್ಥಾನ ಗೆದ್ದಿತ್ತು. ಆದರೆ, ಈ ಬಾರಿ ಒಟ್ಟು ಸ್ಥಾನಗಳ ಸಂಖ್ಯೆ 1,564ಕ್ಕೆ ಹೆಚ್ಚಿದ್ದರೂ, ಬಿಜೆಪಿ ಕಳೆದ ಬಾರಿಗಿಂತ ಕಡಿಮೆ ಸ್ಥಾನಗಳನ್ನು ಗಳಿಸಿದೆ.

ಹಿಂದಿನ ಚುನಾವಣೆಯಲ್ಲಿ ಬಿಜೆಪಿ 100 ಜಿಲ್ಲಾ ಪಂಚಾಯತ್ ಸ್ಥಾನಗಳನ್ನು ಗೆದ್ದಿದ್ದರೆ, 90 ಸ್ಥಾನಗಳಲ್ಲಿ ಕಾಂಗ್ರೆಸ್ ಜಯ ಸಾಧಿಸಿತ್ತು.

ಆಗಸ್ಟ್ 26, 29 ಮತ್ತು ಸೆಪ್ಟೆಂಬರ್ 1 ರಂದು ಭರತಪುರ, ದೌಸಾ, ಜೈಪುರ, ಜೋಧಪುರ, ಸವಾಯಿ ಮಾಧೋಪುರ ಮತ್ತು ಸಿರೋಹಿ ಜಿಲ್ಲೆಗಳಲ್ಲಿ ಚುನಾವಣೆ ನಡೆದಿತ್ತು.

ಒಟ್ಟು ಆರು ಜಿಲ್ಲಾ ಪರಿಷತ್‌ನ 200 ಸದಸ್ಯರು ಮತ್ತು 78 ಪಂಚಾಯತ್ ಸಮಿತಿಯ 1,564 ಸದಸ್ಯರನ್ನು ಆಯ್ಕೆ ಮಾಡಲು ಮೂರು ಹಂತಗಳಲ್ಲಿ ಮತದಾನ ನಡೆದಿತ್ತು.


ಇದನ್ನೂ ಓದಿ: ಪಂಜಾಬ್ ಬಳಿಕ ರಾಜಸ್ಥಾನದ ಸಮಸ್ಯೆ ಬಗೆ ಹರಿಸಲು ಮುಂದಾದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...