Homeಮುಖಪುಟರಾಜಸ್ಥಾನ: ಭೂವಿವಾದದಲ್ಲಿ ಅರ್ಚಕನಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ರಾಜಸ್ಥಾನ: ಭೂವಿವಾದದಲ್ಲಿ ಅರ್ಚಕನಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ದೇವಸ್ಥಾನದ ಭೂಮಿಯ ಮೇಲೆ ಕಣ್ಣಿಟ್ಟಿದ್ದ ಮೀನಾ ಸಮುದಾಯದ ಆರು ಮಂದಿ ತನ್ನ ಮೇಲೆ ಸೀಮೆ ಎಣ್ಣೆ ಮತ್ತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ನಿಧನಕ್ಕೂ ಮುನ್ನ ಅರ್ಚಕ ಪೊಲೀಸರಿಗೆ ತಿಳಿಸಿದ್ದಾರೆ.

- Advertisement -
- Advertisement -

ರಾಜಸ್ಥಾನದ ರಾಜಧಾನಿ ಜೈಪುರದಿಂದ 177 ಕಿ.ಮೀ ದೂರದಲ್ಲಿರುವ ಕರೌಲಿ ಜಿಲ್ಲೆಯ ಅರ್ಚಕರೊಬ್ಬರನ್ನು ಭೂ ವಿವಾದಕ್ಕೆ ಸಂಬಂಧಿಸಿದಂತೆ ಸೀಮೆ ಎಣ್ಣೆ ಹಾಗೂ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಕರೌಲಿ ಜಿಲ್ಲೆಯ ಸಪೋತ್ರಾದಲ್ಲಿ 50 ವರ್ಷದ ಅರ್ಚಕ ಬಾಬು ಲಾಲ್ ವೈಷ್ಣವ್ ‘ರಾಧಾ ಕೃಷ್ಣ ದೇವಾಲಯದ ಟ್ರಸ್ಟ್‌ಗೆ’ ಸೇರಿದ ಸುಮಾರು 5.2 ಎಕರೆ ಭೂಮಿಯನ್ನು ಹೊಂದಿದ್ದರು. ದೇವಾಲಯದ ಟ್ರಸ್ಟ್‌ಗಳಿಗೆ ಸೇರಿದ ಈ ರೀತಿಯ ಭೂಮಿಯನ್ನು ಸಾಮಾನ್ಯವಾಗಿ ಉಸ್ತುವಾರಿ ಪುರೋಹಿತರಿಗೆ ಅವರ ಬಳಕೆಗಾಗಿ ನೀಡಲಾಗುತ್ತದೆ.

ಅಂತಹ ಭೂಮಿಯನ್ನು ರಾಜಸ್ಥಾನದಲ್ಲಿ ಮಂದಿರ ಮಾಫಿ ಎಂದು ಕರೆಯಲಾಗುತ್ತದೆ. ಈ ಜಮೀನು ರಾಜಸ್ಥಾನದ ಗ್ರಾಮ ದೇವಾಲಯಗಳ ಉಸ್ತುವಾರಿ ವಹಿಸುವ ಪುರೋಹಿತರಿಗೆ ಆದಾಯದ ಮೂಲವಾಗಿರುತ್ತದೆ. ಆದರೆ ಕರೌಲಿಯಲ್ಲಿ ಇದು ವಿವಾದದ ಮೂಲವಾಯಿತು.

ಇದನ್ನೂ ಓದಿ: ರಾಮನಗರ: ಅಂತರ್‌ಧರ್ಮೀಯ ಪ್ರೇಮ – ಯುವಕನ ಮರ್ಯಾದಗೇಡು ಹತ್ಯೆ?

ಅರ್ಚಕ ಬಾಬು ಲಾಲ್ ವೈಷ್ಣವ್ ಜಮೀನಿನಲ್ಲಿ ತನಗಾಗಿ ಒಂದು ಮನೆಯನ್ನು ನಿರ್ಮಿಸಲು ಬಯಸಿದ್ದರು. ನಿರ್ಮಾಣವನ್ನು ಪ್ರಾರಂಭಿಸುವ ಸಲುವಾಗಿ, ಭೂಮಿಯನ್ನು ಸಮತಟ್ಟುಗೊಳಿಸಿದ್ದರು. ಇದಕ್ಕೆ ಗ್ರಾಮದ ಮೀನಾ ಸಮುದಾಯದ ಗುಂಪಿನ ಜನರು ಇದನ್ನು ಆಕ್ಷೇಪಿಸಿ ಭೂಮಿಯನ್ನು ತಮ್ಮದಾಗಿಸಿಕೊಂಡರು. ಆದರೆ ಗ್ರಾಮದ ಹಿರಿಯರು ಅರ್ಚಕರ ಪರವಾಗಿ ತೀರ್ಪು ನೀಡಿದ್ದರು ಆಗ ಭೂ ವಿವಾದ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು.

ಸಾವನ್ನಪ್ಪುವುದಕ್ಕಿಂತ ಮುನ್ನ ಪೊಲೀಸರ ಮುಂದೆ ಹೇಳಿಕೆ ದಾಖಲಿಸಿರುವ ಅರ್ಚಕ , ವಿವಾದಿತ ಸ್ಥಳದಲ್ಲಿ ಮಲಗಿದ್ದ ತನ್ನ ಮೇಲೆ ಮತ್ತು ಬಾಜ್ರಾ ತೆನೆಗಳ ಮೇಲೆ ಆರು ಜನರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದಿದ್ದಾರೆ. ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಅರ್ಚಕರನ್ನು ಜೈಪುರದ ಎಸ್‌ಎಂಎಸ್ ಆಸ್ಪತ್ರೆಗೆ ಸಾಗಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

Karauli Priest Burn Alive in Temple Land Issue Main Accused Arrested by Rajasthan Police - Rajasthan: Priest burnt alive by pouring petrol, dies in dispute over temple land »
ಪ್ರಮುಖ ಆರೋಪಿ ಕೈಲಾಶ್ ಮೀನಾ ಬಂಧನ

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅರ್ಚಕ ಹೆಸರಿಸಿದ್ದ ಕೈಲಾಶ್ ಮೀನಾ, ಶಂಕರ್ ಮೀನಾ, ನಮೋ ಮೀನಾ ಮತ್ತು ಇತರ ಮೂವರಲ್ಲಿ ಪ್ರಮುಖ ಆರೋಪಿ ಕೈಲಾಶ್ ಮೀನಾ ಎನ್ನುವವರನ್ನು ಬಂಧಿಸಿದ್ದಾರೆ.

“ಶವದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ನಾವು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದೇವೆ ಮತ್ತು ಪ್ರಧಾನ ಆರೋಪಿ ಕೈಲಾಶ್ ಮೀನಾ ಅವರನ್ನೂ ವಶಕ್ಕೆ ತೆಗೆದುಕೊಂಡಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಹರ್ಜಿ ಲಾಲ್ ಯಾದವ್ ಎನ್‌ಡಿಟಿವಿಗೆ ತಿಳಿಸಿದ್ದಾರೆ.


ಇದನ್ನೂ ಓದಿ: ಮಂಡ್ಯ ಅರ್ಚಕರ ಕೊಲೆ: ಒಟ್ಟು 09 ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...