Homeಮುಖಪುಟರಾಜಸ್ಥಾನ: ಬಿಜೆಪಿ ಶಾಸಕರ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು

ರಾಜಸ್ಥಾನ: ಬಿಜೆಪಿ ಶಾಸಕರ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲು

- Advertisement -

ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ 37 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ ಬಿಜೆಪಿ ಶಾಸಕರೊಬ್ಬರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಗೋಗುಂಡಾ ವಿಧಾನಸಭಾ ಕ್ಷೇತ್ರದ ಶಾಸಕ ಪ್ರತಾಪ್ ಭೀಲ್ ವಿರುದ್ಧ ಮಹಿಳೆ ಅತ್ಯಾಚಾರದ ಆರೋಪ ಮಾಡಿದ್ದಾರೆ. ಈ ಬಿಜೆಪಿ ಶಾಸಕರ ವಿರುದ್ಧ 10 ತಿಂಗಳಲ್ಲಿ ದಾಖಲಾದ ಎರಡನೇ ಅತ್ಯಾಚಾರ ಪ್ರಕರಣ ಇದಾಗಿದೆ.

ಇದಕ್ಕೂ ಮುನ್ನ ಮತ್ತೊಬ್ಬ ಮಹಿಳೆ ಆತನ ವಿರುದ್ಧ ಸುಖೇರ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ‘ನನ್ನ ತಂದೆಯನ್ನು ಕೊಂದು, ನನ್ನನ್ನು ನೋಡಿ ನಗುತ್ತಿದ್ದರು’ – ಕಾಶ್ಮೀರಿ ಬಾಲಕಿ

“ಗೋಗುಂಡಾ ಶಾಸಕರ ವಿರುದ್ಧ ಅತ್ಯಾಚಾರ ಪ್ರಕರಣವನ್ನು ದಾಖಲಿಸಲಾಗಿದೆ. ಮಹಿಳೆ ಅವರ ವಿರುದ್ಧ ಲಿಖಿತ ದೂರನ್ನು ಸಲ್ಲಿಸಿದ್ದಾರೆ, ನಂತರ ಅಂಬಾಮಾತಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ” ಎಂದು ಉದಯಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮನೋಜ್ ಕುಮಾರ್ ಪಿಟಿಐಗೆ ತಿಳಿಸಿದ್ದಾರೆ.

ಕೆಲಸ ಹುಡುಕುತ್ತಿದ್ದಾಗ ಶಾಸಕರ ಸಂಪರ್ಕಕ್ಕೆ ಬಂದಿರುವುದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ತನಗೆ ಕೆಲಸ ಕೊಡಿಸಲು ಸಹಾಯ ಮಾಡುವುದಾಗಿ ಮತ್ತು ಮದುವೆಯಾಗುವುದಾಗಿ ಭರವಸೆ ನೀಡಿ ನಂತರ ಶಾಸಕ ಪ್ರತಾಪ್ ಭಿಲ್ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆಕೆ ಆರೋಪಿಸಿದ್ದಾರೆ. ಸಂತ್ರಸ್ತ ಮಹಿಳೆ ವಕೀಲರ ಮೂಲಕ ಉದಯಪುರ ಎಸ್ಪಿಯನ್ನು ಸಂಪರ್ಕಿಸಿದ್ದಾರೆ.

ಗೋಗುಂಡಾ ವಿಧಾನಸಭಾ ಕ್ಷೇತ್ರದ ಶಾಸಕ ಪ್ರತಾಪ್ ಭೀಲ್ ವಿರುದ್ಧದ ಎರಡೂ ಅತ್ಯಾಚಾರ ಪ್ರಕರಣಗಳ ತನಿಖೆಯನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ನಡೆಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ: ಮಹಾರಾಷ್ಟ್ರದಲ್ಲೊಂದು ಹೇಯ ಕೃತ್ಯ: 16 ವರ್ಷದ ಬಾಲಕಿಯ ಮೇಲೆ 400 ಜನರಿಂದ ಅತ್ಯಾಚಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಸೀದಿ ಒಡೆಯುವ ಮಾತುಗಳು: ‘ಮುತಾಲಿಕ್‌’ ಮುಂದುವರಿದ ಭಾಗ ‘ಕಾಳಿ ಸ್ವಾಮೀಜಿ’ ಪ್ರಕರಣ

ಕೋಮು ಪ್ರಚೋದನೆ ಮಾಡಿರುವ ರಿಷಿ ಕುಮಾರ ಸ್ವಾಮೀಜಿ (ಕಾಳಿ ಸ್ವಾಮೀಜಿ) ಈಗ ಸುದ್ದಿಯಲ್ಲಿದ್ದಾರೆ. ಮಸೀದಿ ಒಡೆಯಬೇಕೆಂದು ಕರೆ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ ಕೆಡವಬೇಕೆಂದು ಕಾಳಿ...
Wordpress Social Share Plugin powered by Ultimatelysocial