Homeಮುಖಪುಟರಾಜಸ್ಥಾನ: ಅಪಘಾತಕ್ಕೀಡಾದವರಿಗೆ ಸಹಾಯ ಮಾಡಿದರೆ 5000 ರೂ ಬಹುಮಾನ

ರಾಜಸ್ಥಾನ: ಅಪಘಾತಕ್ಕೀಡಾದವರಿಗೆ ಸಹಾಯ ಮಾಡಿದರೆ 5000 ರೂ ಬಹುಮಾನ

- Advertisement -
- Advertisement -

ರಸ್ತೆ ಅಪಘಾತಕ್ಕೀಡಾದವರಿಗೆ ಸಹಾಯ ಮಾಡಿದವರನ್ನು ಸಾಕ್ಷಿಗಳಾಗಿ ಪರಿಗಣಿಸಿ ಅವರನ್ನು ಪದೇ ಪದೇ ನ್ಯಾಯಾಲಯಕ್ಕೆ ಅಲೆಸಲಾಗುತ್ತದೆ ಎಂಬ ದೂರು ಆಗಾಗ್ಗೆ ಕೇಳಿಬರುತ್ತಿತ್ತು. ಹಾಗಾಗಿ ತಮ್ಮ ಕಣ್ಣಾರೆ ಅಪಘಾತದಲ್ಲಿ ಜನ ಸಾಯುತ್ತಿದ್ದರೂ ಬಹಳಷ್ಟು ಜನ ತಮ್ಮ ಪಾಡಿಗೆ ತಾವು ಹೋಗಿಬಿಡುತ್ತಿದ್ದರು. ಈ ಮನಸ್ಥಿತಿ ಬದಲಿಸಲು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್​ ಮುಂದಾಗಿದ್ದು ಅಪಘಾತದಲ್ಲಿ ಗಾಯಗೊಂಡವರಿಗೆ ಸಹಾಯ ಮಾಡುವವರಿಗೆ ಈಗ 5,000 ರೂ ಬಹುಮಾನ ಘೋಷಿಸಿದ್ದಾರೆ.

ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೆ ಅನೇಕ ಜನ ಸಾವನ್ನಪ್ಪುತ್ತಿದ್ದಾರೆ. ಈಗ ಅಂತಹ ಜನರ ಜೀವ ಉಳಿಸಲು ರಾಜಸ್ಥಾನ ಸರ್ಕಾರ ಹೊಸ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಡಿ, ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯುವ ಜನರಿಗೆ ಸರ್ಕಾರದಿಂದ 5000 ರೂಪಾಯಿ ಮತ್ತು ಪ್ರಮಾಣ ಪತ್ರ ನೀಡಲಾಗುತ್ತದೆ ಎಂದು ಗೆಹ್ಲೋಟ್ ಸರ್ಕಾರ ಘೋಷಿಸಿದೆ.

ಈ ಯೋಜನೆಗೆ ಚಿರಂಜೀವಿ ಜೀವನ್ ರಕ್ಷಾ ಯೋಜನೆ ಎಂದು ಹೆಸರಿಡಲಾಗಿದೆ. ಈ ಯೋಜನೆಯಡಿ, ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ಸಹಾಯ ಮಾಡುವವರ ಪೋಲಿಸ್ ವಿಚಾರಣೆ ಇರುವುದಿಲ್ಲ. ಅಲ್ಲದೆ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ತಲುಪಿಸಿದರೆ ಆತ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಹಣವನ್ನೂ ಪಾವತಿ ಮಾಡುವಂತಿಲ್ಲ ಎಂದು ಯೋಜನೆಯಲ್ಲಿ ತಿಳಿಸಲಾಗಿದೆ.

ಈ ಯೋಜನೆಯಡಿ ಗಾಯಗೊಂಡ ವ್ಯಕ್ತಿಯನ್ನು ಸಾಧ್ಯವಾದಷ್ಟು ಬೇಗ ಸಹಾಯಕ್ಕಾಗಿ ಆಸ್ಪತ್ರೆಗೆ ಕರೆದೊಯ್ಯುವ ವ್ಯಕ್ತಿಯು ಬಹುಮಾನದ ಮೊತ್ತವನ್ನು ಶೀಘ್ರವಾಗಿಯೇ ಪಡೆಯುತ್ತಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆತಂದ ಮೇಲೆ ಪ್ರಮಾಣಪತ್ರವನ್ನು ಮಾತ್ರ ನೀಡಲಾಗುತ್ತದೆ. ಸರ್ಕಾರಿ ಆಂಬ್ಯುಲೆನ್ಸ್, ಖಾಸಗಿ ಆಂಬ್ಯುಲೆನ್ಸ್, ಪಿಸಿಆರ್ ವ್ಯಾನ್ ಮತ್ತು ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಈ ಯೋಜನೆಯ ಲಾಭವನ್ನು ಪಡೆಯುವುದಿಲ್ಲ. ಏಕೆಂದರೆ ಇದು ಅವರ ಕರ್ತವ್ಯ ಎಂದು ಉಲ್ಲೇಖಿಸಲಾಗಿದೆ.


ಇದನ್ನೂ ಓದಿ; #NationalUnemploymentDay | ಪ್ರಧಾನಿ ಜನ್ಮದಿನದಂದೆ ಉದ್ಯೋಗ ಕೇಳಿದ ದೇಶದ ಜನತೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...