Homeರಾಷ್ಟ್ರೀಯರಾಜಸ್ಥಾನ: ಸಾಲ ತೀರಿಸಲು ಹುಡುಗಿಯರ ಮಾರಾಟ; ನಿರಾಕರಿಸಿದರೆ ಜಾತಿ ಮಂಡಳಿಗಳ ಆದೇಶದ ಮೇರೆಗೆ ಅವರ ತಾಯಿಯ...

ರಾಜಸ್ಥಾನ: ಸಾಲ ತೀರಿಸಲು ಹುಡುಗಿಯರ ಮಾರಾಟ; ನಿರಾಕರಿಸಿದರೆ ಜಾತಿ ಮಂಡಳಿಗಳ ಆದೇಶದ ಮೇರೆಗೆ ಅವರ ತಾಯಿಯ ಮೇಲೆ ಅತ್ಯಾಚಾರ!

ಈ ರೀತಿಯ ಪದ್ದತಿಗಳು ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯುತ್ತಿದೆ ಎಂದು ವರದಿಯಾಗಿದೆ

- Advertisement -
- Advertisement -

ಹಣಕಾಸಿನ ವಹಿವಾಟುಗಳು, ಸಾಲಗಳ ಮರು ಪಾವತಿ ಸೇರಿದಂತೆ ತಮ್ಮ ವಿವಾದಗಳನ್ನು ಪರಿಹರಿಸುವ ಸಲುವಾಗಿ ಸ್ಟಾಂಪ್‌ ಪೇಪರ್‌‌ಗಳಲ್ಲಿ ಒಪ್ಪಂದ ನಡೆಸಿ 8 ರಿಂದ18 ವರ್ಷದೊಳಗಿನ ಹುಡುಗಿಯರನ್ನು ಮಾರಾಟ ಮಾಡುತ್ತಿರುವ ಅಘಾತಕಾರಿ ಘಟನೆ ರಾಜಸ್ಥಾನದ ಸುಮಾರು ಆರು ಜಿಲ್ಲೆಗಳಲ್ಲಿ ನಡೆಯುತ್ತಿದೆ ಎಂದು ದೈನಿಕ್ ಭಾಸ್ಕರ್‌ ದಿನಪತ್ರಿಕೆ ವರದಿ ಮಾಡಿದೆ.

ಹುಡುಗಿಯರ ಮಾರಾಟಕ್ಕೆ ನಿರಾಕರಿಸಿದರೆ ಗ್ರಾಮದ ಜಾತಿ ಮಂಡಳಿಗಳ ಆದೇಶದ ಮೇರೆಗೆ ಹುಡುಗಿಯರ ತಾಯಂದಿರ ಮೇಲೆ ಅತ್ಯಾಚಾರ ನಡೆಸಿ ಅದನ್ನು ಇತ್ಯರ್ಥ ಮಾಡಲಾಗುತ್ತದೆ ಎಂದು ವರದಿ ಹೇಳಿದೆ. ರಾಜ್ಯದ ಭಿಲ್ವಾರದಂತಹ ಸ್ಥಳಗಳಲ್ಲಿನ ಜನರು ತಮ್ಮ ವಿವಾದಗಳನ್ನು ಪೋಲೀಸರ ಬಳಿಗೆ ಹೋಗುವ ಬದಲು ಜಾತಿ ಮಂಡಳಿಗಳನ್ನು ಸಂಪರ್ಕಿಸುತ್ತಾರೆ ಎಂದು ವರದಿ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಾರಾಟವಾದ ಹುಡುಗಿಯರನ್ನು ಉತ್ತರ ಪ್ರದೇಶ, ಮಧ್ಯಪ್ರದೇಶ, ಮುಂಬೈ, ದೆಹಲಿ ಮತ್ತು ವಿದೇಶಗಳಿಗೆ ಕಳುಹಿಸಲಾಗುತ್ತಿದೆ. ಗುಲಾಮಗಿರಿಗೆ ಒಳಗಾದ ಅವರ ಮೇಲೆ ದೈಹಿಕ ಕಿರುಕುಳ, ಚಿತ್ರಹಿಂಸೆ ಮತ್ತು ಲೈಂಗಿಕ ದೌರ್ಜನ್ಯ ಎಸಗಲಾಗುತ್ತದೆ. ಈ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು (ಎನ್‌ಎಚ್‌ಆರ್‌ಸಿ) ರಾಜಸ್ಥಾನ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ವರದಿ ಸಲ್ಲಿಸುವಂತೆ ಸೂಚಿಸಿದೆ.

ಇದನ್ನೂ ಓದಿ: ಅಂತಾರಾಷ್ಟ್ರೀಯ ಮಹಿಳಾ ದಿನ: ಸ್ತ್ರೀವಾದ ಸಮಾನ ಹಕ್ಕುಗಳ ಬೇಡಿಕೆಯಷ್ಟೆ ಅಲ್ಲ ಸಮಾನ ಗೌರವದ ಬೇಡಿಕೆ ಕೂಡ

ವ್ಯಕ್ತಿಯೊಬ್ಬ ತಾನು ಪಡೆದ 15 ಲಕ್ಷ ರೂ. ಸಾಲವನ್ನು ಮರು ಪಾವತಿಸಲು ತನ್ನ ಸಹೋದರಿಯನ್ನು ಮಾರಾಟ ಮಾಡುವಂತೆ ಜಾತಿ ಮಂಡಳಿ ಆದೇಶ ನೀಡಿತ್ತು. ಅಷ್ಟಾಗಿಯು ಅವರ ಸಾಲ ತೀರದೆ ಇದ್ದಾಗ ಅವರ 12 ವರ್ಷದ ಮಗಳನ್ನು ಕೂಡಾ ಮಾರಾಟ ಮಾಡುವಂತೆ ಜಾತಿ ಮಂಡಳಿ ಒತ್ತಾಯಿಸಿದೆ ಎಂದು ವರದಿ ಹೇಳಿದೆ.

ಅದೇ ರೀತಿಯ ಮತ್ತೊಂದು ಪ್ರಕರಣದಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಚಿಕಿತ್ಸೆಗಾಗಿ ಪಡೆದಿದ್ದ 6 ಲಕ್ಷ ರೂ.ಗಳನ್ನು ಮರುಪಾವತಿ ಮಾಡಲು ತನ್ನ ಮನೆಯನ್ನು ಮಾರಿದ್ದರು. ಮನೆ ಮಾರಿಯು ಸಾಲ ತೀರದೆ ಇದ್ದಾಗ ತನ್ನ ಮಗಳನ್ನು ಮಾರಾಟ ಮಾಡಿದ್ದಾರೆ. ಈ ಬಾಲಕಿಯನ್ನು ಆಗ್ರಾಕ್ಕೆ ಕರೆದೊಯ್ಯಲಾಗಿತ್ತು, ಅಲ್ಲಿಂದ ಬಾಲಕಿಯನ್ನು ಮೂರು ಬಾರಿ ಮಾರಾಟ ಮಾಡಲಾಗಿದೆ ಜೊತೆಗೆ ಅವರು ನಾಲ್ಕು ಬಾರಿ ಗರ್ಭಿಣಿಯಾಗಿದ್ದಾರೆ ಎಂದು ವರದಿ ಹೇಳಿದೆ.

ಪತ್ರಿಕೆಯು ವರದಿಯಲ್ಲಿ ಉಲ್ಲೇಖಿಸಿರುವ ವಿಷಯಗಳು ನಿಜವೇ ಆಗಿದ್ದಲ್ಲಿ ಅದು ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು  ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಹೇಳಿದೆ. ನಾಲ್ಕು ವಾರಗಳಲ್ಲಿ ಕ್ರಮ ತೆಗೆದುಕೊಂಡ ವಿವರವಾದ ವರದಿಯನ್ನು ಸಲ್ಲಿಸುವಂತೆ ಅದು ರಾಜಸ್ಥಾನದ ಮುಖ್ಯ ಕಾರ್ಯದರ್ಶಿಗೆ ಕೇಳಿದೆ. ಅಲ್ಲದೆ ಆಯೋಗವು ಈಗಾಗಲೇ ಕೈಗೊಂಡಿರುವ ಕ್ರಮಗಳ ವಿವರಗಳನ್ನು ಕೇಳಿದ್ದು, ಅಂತಹ ಘಟನೆಗಳನ್ನು ತಡೆಗಟ್ಟಲು ಹೇಳಿದೆ.

ಇದನ್ನೂ ಓದಿ:  ಕೇಟ್ ಮಿಲ್ಲೆಟ್ ಅವರ ’ಸೆಕ್ಷುವಲ್ ಪಾಲಿಟಿಕ್ಸ್’ ಅನುವಾದದ ಒಂದು ಭಾಗ

ಮಾನವ ಹಕ್ಕುಗಳು ಹಾಗೂ ಹೆಣ್ಣು ಮತ್ತು ಮಹಿಳೆಯರ ಘನತೆಯ ಹಕ್ಕನ್ನು ತೊಡೆದುಹಾಕುವ ಜಾತಿ ಆಧಾರಿತ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಲು, ಸಂವಿಧಾನ ಮತ್ತು ಪಂಚಾಯತ್ ರಾಜ್ ಕಾಯ್ದೆಯ ಪ್ರಕಾರ ಗ್ರಾಮ ಸಭೆಗಳ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ವರದಿಯಲ್ಲಿ ವಿವರಿಸಬೇಕು ಎಂದು  ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಹೇಳಿದೆ.

ಅಂತಹ ಅಪರಾಧಗಳಲ್ಲಿ ಭಾಗಿಯಾಗುವವರು, ಅವರಿಗೆ ಕುಮ್ಮಕ್ಕು ನೀಡುವವರು ಮತ್ತು ಅವರಿಗೆ ಸಹಾನುಭೂತಿ ಹೊಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸುವ ಬಗ್ಗೆ ವಿವರವಾದ ವರದಿ ಸಲ್ಲಿಸುವಂತೆ ರಾಜಸ್ಥಾನ ಪೊಲೀಸ್ ಮುಖ್ಯಸ್ಥರಿಗೆ ಆಯೋಗ ನೋಟಿಸ್ ನೀಡಿದ್ದು, ಪ್ರಕರಣಗಳ ಸ್ಥಿತಿ, ಚಾರ್ಜ್ ಶೀಟ್‌ಗಳು, ಬಂಧನಗಳು ಇತ್ಯಾದಿಗಳ ವಿವರಗಳನ್ನು ಕೇಳಿದೆ.

ಇಂತಹ ಘಟನೆಗಳನ್ನು ತಡೆಯಲು ವಿಫಲರಾದ ಅಧಿಕಾರಿಗಳ ವಿರುದ್ಧ ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ಅಥವಾ ಕೈಗೊಳ್ಳಲು ಉದ್ದೇಶಿಸಿರುವ ಕ್ರಮಗಳ ಬಗ್ಗೆ ವಿವರಗಳನ್ನು ನೀಡುವಂತೆ ಕೂಡಾ ಆಯೋಗವು ಪೊಲೀಸ್ ಮುಖ್ಯಸ್ಥರನ್ನು ಕೇಳಿದೆ.

ಇದನ್ನೂ ಓದಿ: ನರ್ಸಿಂಗ್ ವಿದ್ಯಾರ್ಥಿಗಳಿಗೆ ‘ವರದಕ್ಷಿಣೆಯ ಉಪಯೋಗಗಳು’ ಎಂಬ ಪಠ್ಯ ಮುದ್ರಣ: ಕ್ರಮಕ್ಕೆ ಮಹಿಳಾ ಆಯೋಗ ಆಗ್ರಹ

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ವಿಶೇಷ ವರದಿಗಾರ ಉಮೇಶ್ ಕುಮಾರ್ ಶರ್ಮಾ ಕೂಡ ರಾಜಸ್ಥಾನಕ್ಕೆ ಭೇಟಿ ನೀಡಿ ಮೂರು ತಿಂಗಳೊಳಗೆ ವರದಿ ಸಲ್ಲಿಸಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...