Homeದಲಿತ್ ಫೈಲ್ಸ್ರಾಜಸ್ಥಾನ: ಪಾತ್ರೆ ಮುಟ್ಟಿದ ದಲಿತ ಬಾಲಕನನ್ನು ಥಳಿಸಿ ಕೊಂದ ಶಿಕ್ಷಕ; ಎಫ್‌ಐಆರ್‌ ದಾಖಲು

ರಾಜಸ್ಥಾನ: ಪಾತ್ರೆ ಮುಟ್ಟಿದ ದಲಿತ ಬಾಲಕನನ್ನು ಥಳಿಸಿ ಕೊಂದ ಶಿಕ್ಷಕ; ಎಫ್‌ಐಆರ್‌ ದಾಖಲು

- Advertisement -
- Advertisement -

9 ವರ್ಷದ ದಲಿತ ಬಾಲಕನನ್ನು ಶಿಕ್ಷಕನೊಬ್ಬ ಥಳಿಸಿ ಕೊಂದಿರುವ ಘಟನೆ ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ನಡೆದಿದೆ. ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಅಹಮದಾಬಾದ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನನ್ನಪ್ಪಿದೆ.

ಜುಲೈ 20 ರಂದು ಶಿಕ್ಷಕ ಹಲ್ಲೆ ನಡೆಸಿದ್ದನು ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಸವರ್ಣಿಯರಿಗೆ ಮೀಸಲಿರಿಸಿದ್ದ ಪಾತ್ರೆಯಲ್ಲಿದ್ದ ನೀರನ್ನು ಕುಡಿದ ಕಾರಣ ದಲಿತ ಮಗುವಿಗೆ ಭೀಕರವಾಗಿ ಶಿಕ್ಷಕ ಥಳಿಸಿದ್ದಾನೆ.

ಆರೋಪಿ ಶಿಕ್ಷಕನನ್ನು ಬಂಧಿಸಿ ಕೊಲೆ ಪ್ರಕರಣ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ಕೊಲೆ (ಐಪಿಸಿ) ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಸೇರಿದಂತೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ. ಬಾಲಕನ ಮರಣೋತ್ತರ ಪರೀಕ್ಷೆ ನಡೆಯಲಿದ್ದು, ಪೊಲೀಸ್ ತಂಡವನ್ನು ಅಹಮದಾಬಾದ್‌ಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂದು ಜಾಲೋರ್ ಎಸ್ಪಿ ಹರ್ಷವರ್ಧನ್ ಅಗರವಾಲಾ ತಿಳಿಸಿದ್ದಾರೆ.

“ಜಲೋರ್‌ನ ಸರಸ್ವತಿ ವಿದ್ಯಾಮಂದಿರದಲ್ಲಿ 3ನೇ ತರಗತಿಯ ವಿದ್ಯಾರ್ಥಿಯಾಗಿದ್ದ ನನ್ನ ಮಗ ಇಂದ್ರ ಕುಮಾರ್, ಸಿಂಗ್‌ಗಳಿಗೆ ಮೀಸಲಾಗಿದ್ದ ಮಣ್ಣಿನ ಪಾತ್ರೆಯಲ್ಲಿದ್ದ ನೀರು ಕುಡಿದ ಕಾರಣ ಶಿಕ್ಷಕ ಚೈಲ್ ಸಿಂಗ್ ಥಳಿಸಿದನು. ಈ ಮಡಕೆ ಮೇಲ್ಜಾತಿಗೆ ಸೇರಿದ ಸಿಂಗ್‌ಗಳಿಗೆ ಮೀಸಲಾಗಿದೆ ಎಂದು ನನ್ನ ಮಗನಿಗೆ ತಿಳಿದಿರಲಿಲ್ಲ” ಎಂದು ಮಗುವಿನ ತಂದೆ ಮತ್ತು ಜಲೋರ್ ಜಿಲ್ಲೆಯ ಸುರಾನಾ ಗ್ರಾಮದ ನಿವಾಸಿ ದೇವರಾಮ್ ಮೇಘವಾಲ್ ಸಂಕಟ ವ್ಯಕ್ತಪಡಿಸಿದ್ದಾರೆ.

ಮೇಲ್ಜಾತಿ ಜನರಿಗೆ ಮೀಸಲಾದ ಮಣ್ಣಿನ ಪಾತ್ರೆಯಲ್ಲಿದ್ದ ನೀರು ಕುಡಿದ ಕಾರಣ ಜಾತಿ ನಿಂದನೆ ಮಾಡಿ ಮಗುವನ್ನು ಶಿಕ್ಷಕ ಥಳಿಸಿದ್ದಾನೆ ಎಂದು ಕುಟುಂಬ ಸದಸ್ಯರು ಶನಿವಾರ ಸೈಲಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಿಂಗ್ ಹೊಡೆದಿದ್ದರಿಂದ ಮಗುವಿನ ಬಲ ಕಿವಿ ಮತ್ತು ಕಣ್ಣಿಗೆ ಗಾಯಗಳಾಗಿವೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

“ಮಗನ ಸ್ಥಿತಿ ಹದಗೆಟ್ಟಿತು. ಆಸ್ಪತ್ರೆಗೆ ಸೇರಿಸಲಾಯಿತು. ಆತನ ಕಿವಿಯಿಂದ ರಕ್ತಸ್ರಾವವಾಗಿತ್ತು. ದೇಹವನ್ನು ಮತ್ತೊಂದು ಮಗ್ಗಲಿಗೆ ಬದಲಿಸಲು ಆತನಿಗೆ ಸಾಧ್ಯವಾಗುತ್ತಿರಲಿಲ್ಲ. ಅವನ ಕಣ್ಣು ನೋಯುತ್ತಿತ್ತು. ಅಹಮದಾಬಾದ್‌ಗೆ ಕರೆತರುವ ಮೊದಲು ನಾವು ಆತನನ್ನು ಜಲೋರ್, ಭಿನ್ಮಾಲ್, ಉದಯಪುರದ ಆಸ್ಪತ್ರೆಗಳಿಗೆ ದಾಖಲಿಸಿದ್ದೆವು. ನನ್ನ ಮಗ ಇಂದು [ಶನಿವಾರ] ಮಧ್ಯಾಹ್ನ ಕೊನೆಯುಸಿರೆಳೆದನು. ಅವನ ಸಾವಿಗೆ ಜಾತಿ ತಾರತಮ್ಯವೇ ಕಾರಣ” ಎಂದು ಮೇಘವಾಲ್ ‘ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ಇದನ್ನೂ ಓದಿರಿ: ಯುಪಿ: ಮತಾಂತರ ಆರೋಪ ಮಾಡಿದ ವಿಎಚ್‌ಪಿ; ಆರು ಮಂದಿ ದಲಿತ-ಕ್ರಿಶ್ಚಿಯನ್‌ ಮಹಿಳೆಯರ ಮೇಲೆ ಎಫ್‌ಐಆರ್‌

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಈ ಕುರಿತು ಟ್ವೀಟ್ ಮಾಡಿದ್ದು, “ಜಲೋರ್‌ನ ಸೈಲಾ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕ ಮಗುವನ್ನು ಥಳಿಸಿದ ಕಾರಣ ಸಾವು ಸಂಭವಿಸಿದೆ. ಘಟನೆಯು ನೋವು ತಂದಿದೆ. ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ಕೊಲೆ ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಂತ್ರಸ್ತ ಕುಟುಂಬಕ್ಕೆ ಆದಷ್ಟು ಬೇಗ ನ್ಯಾಯ ಸಿಗುವಂತೆ ನೋಡಿಕೊಳ್ಳಲಾಗುವುದು. ಮಗುವಿನ ಕುಟುಂಬ ಸದಸ್ಯರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ₹ 5 ಲಕ್ಷ ಪರಿಹಾರ ನೀಡಲಾಗುವುದು” ಎಂದು ತಿಳಿಸಿದ್ದಾರೆ.

ಇದಕ್ಕೂ ಮೊದಲು, ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ. ಮಗುವಿನ ಸಾವಿನ ವಿಚಾರವಾಗಿ ಗೆಹ್ಲೋಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. “ಮುಖ್ಯಮಂತ್ರಿಗಳೇ, ಇದಕ್ಕೆ ಯಾರು ಹೊಣೆ? ನಿಮ್ಮ ಆಡಳಿತದಲ್ಲಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಸುರಕ್ಷಿತವಾಗಿಲ್ಲ. ನೊಂದ ಕುಟುಂಬಕ್ಕೆ ಸಹಾಯ ಮಾಡಬೇಕು. ಆರೋಪಿಗಳ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳಬೇಕು” ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸತೀಶ್ ಪೂನಿಯಾ ಶನಿವಾರ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಈ ಘಟನೆ ಕೇಳಿದರೆ ನಮಗೆ ಇಷ್ಟು ಕೋಪ ಆಕ್ರೋಶ ಮತ್ತು ನಾಚಿಕೆಯಿಂದ ತಲೆ ತಗ್ಗಿಸೋ ಹಾಗೆ ಆಗಿದೆ.
    ಅ ಜಾತಿ ಕ್ರಿಮಿ ಶಿಕ್ಷಕನಿಗೂ ಅದೇ ರೀತಿಯಲ್ಲಿ. ಹಲ್ಲೆ ನಡೆಸಿ ಕೊಲ್ಲೋ ಶಿಕ್ಷೆ ನೀಡಬೇಕು,ತಪ್ಪಿದರೆ ದಲಿತರೇ ಅ ಶಿಕ್ಷೆ ನೀಡಿದರೆ ಕನಿಷ್ಟ ಅ ಮಗುವಿನ ಪೋಷಕರಿಗೆ ಸಮಾಧಾನ ದೊರೇಕೀತು ಅವರು ಈ

  2. *ವಸುದೈವ ಕುಟುಂಬಕಂ..*

    ಮಡಕೆ ಮುಟ್ಟಿದ ಮಗುವನ್ನ ಮುಗಿಸಿಬಿಡುವ
    *ವಿಶ್ವ ಗುರುವನ್ನ* ಹುಟ್ಟಿಸಿದ್ದೇವೆ, “ವಸುದೈವ ಕುಟುಂಬಕಂ”ನ ಜನರು ನಾವು.

    ಯಾವ ಮನೆಯ ಮೇಲೆ ಬಾವುಟವಿಲ್ಲ ಅಂತ ಎಣಿಸುವ ಮನಸುಗಳ ಬೆಳೆಸಿದ್ದೇವೆ, ವಸುದೈವ ಕುಟುಂಬಕಂ ನ ಜನರು ನಾವು.

    ಯಾರು ದೇಶದವರು ಅಂತ ಸರ್ಟಿಫಿಕೇಟು ಕೊಡಲು ನೂರಾನಲವತ್ತು ಕೋಟಿ ಜನರ ಕಾಗದ ನೋಡುವ ಕಾನೂನು ತಂದಿದ್ದೇವೆ ವಸುದೈವ ಕುಟುಂಬಕಂ ನ ಜನರು ನಾವು.

    ಬಟ್ಟೆ ನೋಡಿಯೇ ಯಾರೆಂದು ತಿಳಿಯಬಲ್ಲ ದಿವ್ಯದರ್ಶಿ ಮೇಧಾವಿಯನ್ನ ಪ್ರಧಾನಿ ಮಾಡಿದ್ದೇವೆ,ವಸುದೈವ ಕುಟುಂಬಕಂ ಜನರು ನಾವು.

    ಮಾರುವುದೇ ಪರಮಾದರ್ಶ
    ಪ್ರದರ್ಶಿಸಿದ್ದೇ ಪರಮಸತ್ಯ
    ಲಕ್ಷ ಕೋಟಿಯ ಕ್ರೋನಿ ಕುಳಗಳೇ ಧರೆಗಿಳಿದ ದೇವತೆಗಳು.

    ಈ ನಮ್ಮ ವಸುದೈವ ಕುಟುಂಬದಲ್ಲಿ.

    ***
    ರಾಜಸ್ತಾನದ ಮಗುವಿನ ಕೊಲೆ ಮಾಡಿದ ಗುರುವಿನ ಸುದ್ದಿ ಓದಿದ ತಕ್ಷಣ ಬರೆದ ಕವನ

  3. ಎತ್ತ ಸಾಗುತ್ತಿದೆ ಈ ದೇಶ. ಮೂರನೇ ತರಗತಿಯ ಬಾಲಕನೊಬ್ಬನನ್ನು ಸಾಯುವಂತೆ ಹೊಡೆಯುವುದೇ? ಈ ರೀತಿಯಲ್ಲಿ ಶಿಕ್ಷಕರೇ ಕೊಲೆ ಪಾತಕರಾದರೆ, ನಮ್ಮ ಮುಂದಿನ ಪೀಳಿಗೆಯ ಗತಿ? ಈ ದೇಶಕ್ಕೆ ನಿಜಕ್ಕೂ ಒಳ್ಳೆಯ ಬವಿಶ್ಯ ಇದೆಯಾ?

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...