Homeಮುಖಪುಟರಾಜಸ್ಥಾನ: ಶಿಕ್ಷಕನಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ: ಸಂಬಂಧಿಕರು ಆರೋಪ

ರಾಜಸ್ಥಾನ: ಶಿಕ್ಷಕನಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಕೊಲೆ: ಸಂಬಂಧಿಕರು ಆರೋಪ

- Advertisement -
- Advertisement -

ರಾಜಸ್ಥಾನದಲ್ಲಿ ಬಾಲಕಿಯರ ವಿರುದ್ಧದ ಮತ್ತೊಂದು ಅಪರಾಧ ಬೆಳಕಿಗೆ ಬಂದಿದೆ. ಗುರುವಾರ ಸವಾಯಿ ಮಾಧೋಪುರ್ ಜಿಲ್ಲೆಯ ಬಾವಿಯಲ್ಲಿ 12ನೇ ತರಗತಿಯ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ. ಬಾಲಕಿಯ ಮೇಲೆ ಅವರ ಶಾಲಾ ಶಿಕ್ಷಕರೇ ಅತ್ಯಾಚಾರ ಮಾಡಿ ನಂತರ ಹತ್ಯೆ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಆರೋಪಿ ವಿರುದ್ಧ ಬೋನ್ಲಿ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ದಾಖಲಾಗಿದೆ. ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯಾಗಿದ್ದ 16 ವರ್ಷದ ಬಾಲಕಿ ಆಗಸ್ಟ್ 8ರಂದು ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ಶಾಲೆಯ ಶಿಕ್ಷಕ ರಾಮರತನ್ ಮೀನಾ ವಿರುದ್ಧ ಬಾಲಕಿಯ ತಂದೆ ದೂರು ನೀಡಿದ್ದಾರೆ ಎಂದು ಬೋನ್ಲಿ ವೃತ್ತದ ಅಧಿಕಾರಿ ಬೋನ್ಲಿ ಮೀನಾ ಅವರನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಈ ಘಟನೆಯಿಂದ ನೊಂದ ಬಾಲಕಿಯ ಸಂಬಂಧಿಕರು ಮತ್ತು ಗ್ರಾಮಸ್ಥರು, ಶಾಲಾ ಆಟದ ಮೈದಾನದಲ್ಲಿ ಶವವನ್ನು ಇಟ್ಟು ಪ್ರತಿಭಟನೆ ನಡೆಸಿದರು. ”ಪರಿಹಾರ ನೀಡಬೇಕು, ಇಡೀ ಶಾಲೆಯ ಸಿಬ್ಬಂದಿಯನ್ನು ತೆಗೆದುಹಾಕಬೇಕು, ಹಿರಿಯ ಪೊಲೀಸ್ ಅಧಿಕಾರಿಗಳಿಂದ ತನಿಖೆ ನಡೆಸಿ ಆರೋಪಿಗಳನ್ನು ತಕ್ಷಣ ಬಂಧಿಸಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಿಂದಾಗಿ ಶವದ ಮರಣೋತ್ತರ ಪರೀಕ್ಷೆ ನಡೆಸಲಾಗಲಿಲ್ಲ. ಆರೋಪಿ ಶಿಕ್ಷಕ ರಾಮರತನ್ ಮೀನಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಆತನನ್ನು ಶಾಲೆಯಿಂದ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆ ಶಾಲೆಯ ಎಲ್ಲಾ ಪುರುಷ ಸಿಬ್ಬಂದಿಯನ್ನು ಸಹ ತೆಗೆದುಹಾಕಲಾಗಿದೆ ಎಂದು ಸಿಒ ಹೇಳಿದ್ದಾರೆ. ಘಟನೆಯ ಕುರಿತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ರಾಜೇಂದ್ರ ರಾಥೋಡ್, ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದಲ್ಲಿ ಮಹಿಳೆಯರ ಮೇಲಿನ ಅಪರಾಧಗಳು ಹೆಚ್ಚಿವೆ ಎಂದು ಹೇಳಿದ್ದಾರೆ.

”ಕಾಂಗ್ರೆಸ್ ಆಡಳಿತದಲ್ಲಿ ಮಹಿಳೆಯರ ಸುರಕ್ಷತೆ ಇಂದು ದೊಡ್ಡ ಪ್ರಶ್ನೆಯಾಗಿದೆ. ಸವಾಯಿ ಮಾಧೋಪುರದಲ್ಲಿ ಮತ್ತೊಬ್ಬ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಲಾಗಿದೆ. ಮೃತದೇಹವನ್ನು ಬಾವಿಗೆ ಎಸೆದಿರುವ ಈ ಘಟನೆ ಮಾನವೀಯತೆಗೆ ನಾಚಿಕೆಗೇಡು. ಈ ಘಟನೆಯೂ ರಾಜ್ಯದ ಕಾನೂನು ಸುವ್ಯವಸ್ಥೆಯ ಮೇಲೆ ಪ್ರಶ್ನಾರ್ಥಕ ಚಿಹ್ನೆಯಾಗಿದೆ” ಎಂದು ಅವರು ಹೇಳಿದರು.

ಆಗಸ್ಟ್ 2 ರಂದು ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ 14 ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರವೆಸಗಿ ಆಕೆಯ ದೇಹವನ್ನು ಸುಟ್ಟು ಹಾಕಿರುವ ಘಟನೆ ನಡೆದಿತ್ತು. ಈ ಪ್ರಕರಣದಲ್ಲಿ ಏಳು ಜನರನ್ನು ಬಂಧಿಸಲಾಗಿದೆ.

ಮತ್ತೊಂದು ಇತ್ತೀಚಿನ ಘಟನೆಯಲ್ಲಿ, ಪಾಲಿ ಜಿಲ್ಲೆಯಲ್ಲಿ ಎಂಟು ವರ್ಷದ ಬಾಲಕಿಯೊಬ್ಬಳು ಮಂಗಳವಾರ ಸಂಜೆ ಮಜ್ಜಿಗೆ ಕುಡಿಯಲು ತನ್ನ ನೆರೆಯ ಮನೆಗೆ ಹೋದಾಗ 25 ವರ್ಷದ ವ್ಯಕ್ತಿಯಿಂದ ಅತ್ಯಾಚಾರವೆಸಗಿದ್ದಾಳೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಸಂಜೆ ಖಿನ್ವಾರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬುಧವಾರ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಅಪ್ರಾಪ್ತ ಬಾಲಕಿಯ ಸಾಮೂಹಿಕ ಅತ್ಯಾಚಾರ ಪ್ರಕರಣ: ಪೊಲೀಸರ ಕರ್ತವ್ಯಲೋಪವೆಂದು ಕುಟುಂಬಸ್ಥರ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...