ರಾಜಸ್ಥಾನ| ದಲಿತ ವ್ಯಕ್ತಿಯನ್ನು ಮರಕ್ಕೆ ತಲೆಕೆಳಗಾಗಿ ಕಟ್ಟಿ ಥಳಿಸಿದ ಮೂವರ ಬಂಧನ

ಬಾರ್ಮರ್ ಜಿಲ್ಲೆಯಲ್ಲಿ ದಲಿತ ವ್ಯಕ್ತಿಯನ್ನು ಮರಕ್ಕೆ ತಲೆಕೆಳಗಾಗಿ ಕಟ್ಟಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಘಟನೆಯ ವಿಡಿಯೋ ಶನಿವಾರ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ನಂತರ ಐದರಿಂದ ಆರು ಜನರ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆ, 1989 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶುಕ್ರವಾರ ಹಳ್ಳಿಯೊಂದರಲ್ಲಿ ಶ್ರಾವಣ್ ಮೇಘವಾಲ್ ಅವರನ್ನು ಮರಕ್ಕೆ ತಲೆಕೆಳಗಾಗಿ ಕಟ್ಟಿ ಥಳಿಸಲಾಗಿದೆ ಎಂದು ಸ್ಟೇಷನ್ ಹೌಸ್ ಆಫೀಸರ್ ಗುಡಮಲಾನಿ ಮುಕ್ತಾ ಪರೀಕ್ ಹೇಳಿದ್ದಾರೆ. … Continue reading ರಾಜಸ್ಥಾನ| ದಲಿತ ವ್ಯಕ್ತಿಯನ್ನು ಮರಕ್ಕೆ ತಲೆಕೆಳಗಾಗಿ ಕಟ್ಟಿ ಥಳಿಸಿದ ಮೂವರ ಬಂಧನ