Homeಕರೋನಾ ತಲ್ಲಣರಾಜಸ್ಥಾನ: ಲಸಿಕೆ ಪಡೆಯುವಂತೆ ಉತ್ತೇಜಿಸಲು ಬುಡಕಟ್ಟು ಜನರಿಗೆ ಪಡಿತರ ವಿತರಣೆ

ರಾಜಸ್ಥಾನ: ಲಸಿಕೆ ಪಡೆಯುವಂತೆ ಉತ್ತೇಜಿಸಲು ಬುಡಕಟ್ಟು ಜನರಿಗೆ ಪಡಿತರ ವಿತರಣೆ

- Advertisement -
- Advertisement -

ಕೊರೊನಾ ಲಸಿಕೆ ಬಗ್ಗೆ ಹಲವು ಅನುಮಾನಗಳನ್ನು ಹೊಂದಿರುವವರಲ್ಲಿ ಅರಿವು ಮೂಡಿಸಿ, ಲಸಿಕೆ ಪಡೆಯುವಂತೆ ಮನವೊಲಿಸುವ ಕೆಲಸ ಬೂತ್ ಮಟ್ಟದ ಅಧಿಕಾರಿಗಳದ್ದಾಗಿದೆ. ಹೀಗೆ ಲಸಿಕೆ ಪಡೆಯದ ಬುಡಕಟ್ಟು ಜನರ ಮನವೊಲಿಸಲು ಉಚಿತ ಪಡಿತರ ನೀಡುವುದು, ಕೋವಿಡ್ ಲಸಿಕಾ ಕೇಂದ್ರಗಳಿಗೆ ಉಚಿತ ಪ್ರಯಾಣ ಒದಗಿಸುವಂತಹ ಕೆಲಸಗಳನ್ನು ರಾಜಸ್ಥಾನದ ಉದಯಪುರ ಹಳ್ಳಿಯಲ್ಲಿ ಮಾಡಲಾಗುತ್ತಿದೆ.

ಜೂನ್ 21 ರಿಂದ ದೇಶದಲ್ಲಿ ಎಲ್ಲಾ ವಯಸ್ಕಿಗೆ ಉಚಿತ ಲಸಿಕೆ ನೀಡುವ ಅಭಿಯಾನ ಆರಂಭವಾಗಿದ್ದು, ಉದಯಪುರದ ಬುಡಕಟ್ಟು ಜನರನ್ನು ಮನವೊಲಿಸಲು ಬೂತ್ ಮಟ್ಟದ ಅಧಿಕಾರಿ ದಿನೇಶ್ ಚಂದ್ರ ಜೋಶಿ, ಉಚಿತ ಪಡಿತರ, ಉಚಿತ ಪ್ರಯಾಣ ವ್ಯವಸ್ಥೆ, ಬುಡಕಟ್ಟು ಜನರ ಪುರೋಹಿತರನ್ನು ಒಳಗೊಳ್ಳುವ ಕೆಲಸವನ್ನು ಮಾಡುತ್ತಿದ್ದಾರೆ.

ಉದಯಪುರದ ಹಳ್ಳಿಯ ಬುಡಕಟ್ಟು ಜನರಲ್ಲಿ ಕೊರೊನಾ ವ್ಯಾಕ್ಸಿನೇಷನ್‌ನಿಂದ ಜನರು ಸಾವನ್ನಪ್ಪುತ್ತಿದ್ದಾರೆ ಎಂಬ ಬಗ್ಗೆ ವದಂತಿಗಳಿವೆ. ಇದಕ್ಕೆ ಉತ್ತರಿಸಿರುವ ಅಧಿಕಾರಿ ದಿನೇಶ್ ಚಂದ್ರ ಜೋಶಿ,“ಇದು ಕೇವಲ ವದಂತಿಯಾಗಿದೆ. ಜನರು ಸತ್ತದ್ದು ಲಸಿಕೆಗಳಿಂದಲ್ಲ, ಕೊರೊನಾ ಸೋಂಕಿನಿಂದ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೀದಿಬದಿಯ ಬಡ ವ್ಯಾಪಾರಿಗಳ ಮೇಲೆ ದರ್ಪ ತೋರಿದ ಪಿಎಸ್‌ಐ ಅಮಾನತು

45 ವರ್ಷಕ್ಕಿಂತ ಮೇಲಪಟ್ಟವರಲ್ಲಿ ಲಸಿಕೆ ತೆಗೆದುಕೊಂಡ ಸರಾಸರಿ ಪ್ರಮಾಣ 78.3% ರಷ್ಟಿರುವ ರಾಜಸ್ಥಾನದಲ್ಲಿ, ಬುಡಕಟ್ಟು ಜಿಲ್ಲೆಗಳಾದ ಉದಯಪುರ (63.9%), ಡುಂಗರಪುರ (62.7%) ಮತ್ತು ಪ್ರತಾಪಗಢ (59.3%) ಜಿಲ್ಲೆಗಳು ಕಡಿಮೆ ಲಸಿಕೆ ಪ್ರಮಾಣ ದಾಖಲಿಸಿವೆ.

ಉದಯಪುರದ ಜೋದೊಲ್ ಬ್ಲಾಕ್‌ನಲ್ಲಿ ಕೇವಲ 34% ಲಸಿಕೆ ಪಡೆಯಲಾಗಿದೆ. ಹೀಗಾಗಿ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ (SDM) ಗುಂಜನ್ ಸಿಂಗ್ ಸುಮಾರು 2,000 ಉಚಿತ ಪಡಿತರ ಕಿಟ್‌ಗಳನ್ನು ವಿತರಿಸಿದ್ದಾರೆ. ಈ ಕಿಟ್‌ಗಳಲ್ಲಿ ಅಡುಗೆ ಎಣ್ಣೆ, ಅವಲಕ್ಕಿ, ಅಕ್ಕಿ, ದಾಲ್ ಮತ್ತು ಗೋಧಿ ಹಿಟ್ಟು ಸೇರಿವೆ. ಈ ಪಡಿತರ ಕಿಟ್‌ಗಳು, ಕೊರೊನಾ ಕಾರಣದಿಂದ ಮುಚ್ಚಲ್ಪಟ್ಟಿರುವ 12 ರಿಂದ 13 ಬುಡಕಟ್ಟು ಹಾಸ್ಟೆಲ್‌ಗಳಿಂದ ತರಲಾಗಿದೆ. ಜೊತೆಗೆ ಹಲವು ಎನ್‌ಜಿಒಗಳು ಸಹಾಯಕ್ಕೆ ನಿಂತಿವೆ ಎಂದು ಗುಂಜನ್ ಸಿಂಗ್ ಹೇಳಿದ್ದಾರೆ.

“ನಾವು ಹಳ್ಳಿಗಳಿಗೆ ಭೇಟಿ ನೀಡಿದಾಗ, ಜನರು ವ್ಯಾಕ್ಸಿನೇಷನ್ ಪಡೆದ ಬಳಿಕ ಸಾವು ಸಂಭವಿಸುವುದಿಲ್ಲವೇ ಎಂದು ಪ್ರಶ್ನಿಸುತ್ತಾರೆ. ಕೆಲವೊಮ್ಮೆ ನಮಗೆ ಹಳ್ಳಿ ಒಳಗೆ ಪ್ರವೇಶಿಸಲು ಅವಕಾಶ ಕೂಡ ನೀಡುವುದಿಲ್ಲ. ಲಸಿಕೆ ತೆಗೆದುಕೊಂಡ ಬಳಿಕ ಏನಾದರೂ ಸಂಭವಿಸಿದಲ್ಲಿ, ನಾವು ಪರಿಹಾರ ನೀಡುತ್ತೇವೆ ಎಂಬ ಆಶ್ವಾಸನೆ ನೀಡಿ, ಲಸಿಕೆ ನೀಡಲಾಗುತ್ತಿದೆ” ಎಂದು ಅಧಿಖಾರಿಯೊಬ್ಬರು ತಿಳಿಸಿದ್ದಾರೆ. ಜೊತೆಗೆ ಮುಂದಿನ ಎರಡು ವಾರಗಳಲ್ಲಿ 100% ಲಸಿಕೆ ನೀಡುವ ಪ್ರತಿಜ್ಞೆ ಮಾಡಿದ್ದಾರೆ.

ಇದು ಕೇವಲ ರಾಜಸ್ಥಾನದ ಹಳ್ಳಿಗಳ ಸ್ಥಿತಿಯಲ್ಲ. ದೇಶದ ಕುಗ್ರಾಮಗಳಲ್ಲಿ ಈಗಲೂ ಲಸಿಕೆ ಕುರಿತು ಇಂತಹದ್ದೇ ಅಭಿಪ್ರಾಯಗಳಿವೆ. ಉಚಿತ ಲಸಿಕೆ ನೀಡುವುದು ಮಾತ್ರ ಸರ್ಕಾರದ ಕೆಲಸವಲ್ಲ. ಇದರ ಜೊತೆಗೆ ಲಸಿಕೆ 100% ಸುರಕ್ಷಿತ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಡುವುದು ಅವಶ್ಯಕ ಎಂದು ಸಾಮಾಜಿಕ ಹೋರಾಟಗಾರರು ತಿಳಿಸುತ್ತಾರೆ.


 ಇದನ್ನೂ ಓದಿ: ಇಲ್ಲಿರುವ ಜಾತಿ ಸಮಸ್ಯೆಯನ್ನು ಮುಚ್ಚಿಡಬೇಕೆ? ಜಾತಿ ಬಗ್ಗೆ ಮಾತನಾಡಬಾರದೇ?: ಸತೀಶ್ ನಿನಾಸಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...