Homeದಲಿತ್ ಫೈಲ್ಸ್ರಾಜಸ್ಥಾನ: ಕಾಣೆಯಾಗಿದ್ದ ಇಬ್ಬರು ಅಪ್ರಾಪ್ತ ದಲಿತ ಬಾಲಕಿಯರು ಶವವಾಗಿ ಪತ್ತೆ

ರಾಜಸ್ಥಾನ: ಕಾಣೆಯಾಗಿದ್ದ ಇಬ್ಬರು ಅಪ್ರಾಪ್ತ ದಲಿತ ಬಾಲಕಿಯರು ಶವವಾಗಿ ಪತ್ತೆ

ಮತ್ತೊಂದು ಪ್ರಕರಣ: ನಾಲ್ವರು ದಲಿತರನ್ನು ಕೊಂದಿದ್ದ ಅಪರಾಧಿಗೆ ಮರಣದಂಡನೆಯನ್ನು ರಾಜಸ್ಥಾನದ ಸ್ಥಳೀಯ ನ್ಯಾಯಾಲಯವೊಂದು ವಿಧಿಸಿದೆ.

- Advertisement -
- Advertisement -

ಎರಡು ದಿನಗಳಿಂದ ಕಾಣೆಯಾಗಿದ್ದ ಇಬ್ಬರು ಅಪ್ರಾಪ್ತ ದಲಿತ ಬಾಲಕಿಯರ ಶವಗಳು ರಾಜಸ್ಥಾನದ ಜಲೋರ್ ಜಿಲ್ಲೆಯ ಸಂಚೋರ್ ಪ್ರದೇಶದ ನರ್ಮದಾ ಕಾಲುವೆಯಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಸೋಮವಾರ ರಾತ್ರಿಯಿಂದ ಇಬ್ಬರು ಬಾಲಕಿಯರು ಕಾಣೆಯಾಗಿದ್ದರು.

ಬಾಲಕಿಯರ ಸಂಬಂಧಿಕರು ನೀಡಿದ ದೂರಿನನ್ವಯ ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೋ) ಮತ್ತು ಎಸ್‌ಸಿ/ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಎಫ್‌ಐಆರ್‌ ಆಗಿದೆ.

ಎಫ್‌ಐಆರ್ ಆಧಾರದ ಮೇಲೆ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಸರ್ಕಲ್ ಆಫೀಸರ್ (ಸಂಚೋರ್) ರೂಪ್ ಸಿಂಗ್ ಬುಧವಾರ ತಿಳಿಸಿರುವುದಾಗಿ ‘ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಮರಣೋತ್ತರ ಪರೀಕ್ಷೆಯನ್ನು ವೈದ್ಯಕೀಯ ಮಂಡಳಿಯು ಮಾಡಿದೆ. ಆದರೆ ಬಾಲಕಿಯರ ಕುಟುಂಬ ಸದಸ್ಯರು ಮೃತದೇಹಗಳನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ. ಸಂತ್ರಸ್ತ ಕುಟುಂಬಕ್ಕೆ ತಲಾ 50 ಲಕ್ಷ ರೂ. ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡಬೇಕೆಂಬ ಆಗ್ರಹ ಬಂದಿದೆ.

ಬಾಲಕಿಯರ ಸಂಬಂಧಿಕರು ಮತ್ತು ಸ್ಥಳೀಯ ನಿವಾಸಿಗಳು ತಮ್ಮ ಬೇಡಿಕೆಗಳಿಗೆ ಒತ್ತಾಯಿಸಿ ಉಪವಿಭಾಗಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದ್ದಾರೆ. ಪ್ರತಿಭಟನೆಯನ್ನು ಕೊನೆಗೊಳಿಸಲು ಬಾಲಕಿಯರ ಕುಟುಂಬ ಸದಸ್ಯರೊಂದಿಗೆ ಅಧಿಕಾರಿಗಳು ಮಾತುಕತೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಬಾಲಕಿಯರನ್ನು ಕೊಂದು ನಾಲೆಗೆ ಎಸೆಯಲಾಗಿದೆ ಎಂದು ಬಾಲಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ. “ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿಗೆ ನಿಜವಾದ ಕಾರಣ ತಿಳಿಯಲಿದೆ” ಎಂದು ಸಿಂಗ್ ಹೇಳಿದ್ದಾರೆ.

ದಲಿತ ಕಾರ್ಮಿಕರ ಹತ್ಯೆ: ಅಪರಾಧಿಗೆ ಮರಣದಂಡನೆ ವಿಧಿಸಿದ ರಾಜಸ್ಥಾನ ಸ್ಥಳೀಯ ಕೋರ್ಟ್

2008ರಲ್ಲಿ ಘಟಿಸಿದ ನಾಲ್ವರು ದಲಿತ ಕಾರ್ಮಿಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಧೋಲ್ಪುರ್ ಸ್ಥಳೀಯ ನ್ಯಾಯಾಲಯ ವ್ಯಕ್ತಿಯೊಬ್ಬನಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಪ್ರಕರಣಗಳ ವಿಶೇಷ ನ್ಯಾಯಾಧೀಶರಾದ ನರೇಂದ್ರ ಮೀನಾ ಅವರು ಬುಧವಾರ ಶಿಕ್ಷೆ ಘೋಷಿಸಿದ್ದು, ಅಪರಾಧಿ ಕೀರ್ತಿ ರಾಮ್ ಗುರ್ಜಾರ್‌ ಎಂಬಾತನಿಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸೈಯದ್ ಮಹಿರ್ ಹಸನ್ ರಿಜ್ವಿ ಮಾಹಿತಿ ನೀಡಿದ್ದಾರೆ.

ಇಲ್ಲಿನ ಬ್ಯಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಇನ್ನೂ ಮೂವರು ಆರೋಪಿಗಳು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದು, ಅವರ ವಿಚಾರಣೆ ನಡೆಯುತ್ತಿದೆ ಎಂದು ರಿಜ್ವಿ ಹೇಳಿದ್ದಾರೆ.

ಜುಲೈ 9, 2008ರಂದು ಸಂತ್ರಸ್ತ ಜೈಪಾಲ್ ಸಿಂಗ್ ದೂರು ನೀಡಿದ್ದರು. “ನಮ್ಮ ತಂದೆ ರತನ್ ಲಾಲ್, ಚಿಕ್ಕಪ್ಪರಾದ ನತ್ತಿಲಾಲ್, ರಾಮಸ್ವರೂಪ್, ಸಹೋದರರಾದ ಭನ್ವರ್ ಲಾಲ್ ಮತ್ತು ಪಪ್ಪು ಅವರು ನರೇಗಾ ಅಡಿಯಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡಲು ಹೋಗಿದ್ದರು. ಹಳೆ ದ್ವೇಷದಿಂದ ಕೀರ್ತಿ ರಾಮ್ ಗುರ್ಜರ್, ಸುರೇಶ್, ಬಿರ್ಮಾ, ಚಂದ್ರಭಾನ್ ಅಲಿಯಾಸ್ ಅಟ್ಟಾ, ಪುರಾನ್ ಮತ್ತು ಭಗವಾನ್ ಸಿಂಗ್ ಇತರರು ಅಲ್ಲಿಗೆ ಬಂದು ಜಾತಿ ನಿಂದನೆ ಮಾಡಿದರು. ದಲಿತ ಕಾರ್ಮಿಕರ ಮೇಲೆ ಮನಬಂದಂತೆ ಗುಂಡು ಹಾರಿಸಿದರು” ಎಂದು ದೂರಿನಲ್ಲಿ ತಿಳಿಸಿದ್ದರು.

ಇದನ್ನೂ ಓದಿರಿ: ತುಮಕೂರು: ದಲಿತ ಅರ್ಚಕನ ಮೇಲೆ ಸವರ್ಣೀಯರಿಂದ ಮಾರಣಾಂತಿಕ ಹಲ್ಲೆ

ಗುಂಡಿನ ದಾಳಿಯಲ್ಲಿ ರತನ್ ಲಾಲ್, ನತ್ತಿಲಾಲ್, ರಾಮಸ್ವರೂಪ್ ಮತ್ತು ರಾಮ್‌ವೀರ್ ಸಾವನ್ನಪ್ಪಿದ್ದು, ಆರೋಪಿಗಳು ಪರಾರಿಯಾಗಿದ್ದರು.

ಬುಧವಾರ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಧೀಶರು ಕೀರ್ತಿ ರಾಮ್ ಗುರ್ಜರ್‌ನನ್ನು ಹತ್ಯೆಗೈದ ಅಪರಾಧಿ ಎಂದು ತೀರ್ಮಾನಿಸಿದ್ದಾರೆ. ಜೊತೆಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಮರಣದಂಡನೆಯನ್ನು ವಿಧಿಸಿದರು.

ಇತರ ಮೂವರು ಆರೋಪಿಗಳಾದ ಸುರೇಶ್, ಬಿರ್ಮಾ ಮತ್ತು ಭಗವಾನ್ ಸಿಂಗ್ ಅವರು ಧೋಲ್ಪುರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ ಮತ್ತು ಅವರ ವಿಚಾರಣೆ ನಡೆಯುತ್ತಿದೆ ಎಂದು ರಿಜ್ವಿ ತಿಳಿಸಿದ್ದಾರೆ.

ಏಪ್ರಿಲ್ 15, 1982 ರಂದು ಧೋಲ್ಪುರ್ ಜಿಲ್ಲೆ ರಚನೆಯಾಯಿತು. ಇಲ್ಲಿನ ಜಿಲ್ಲೆಯ ನ್ಯಾಯಾಲಯವು ಮರಣದಂಡನೆ ವಿಧಿಸಿದ ಮೊದಲ ಪ್ರಕರಣ ಇದಾಗಿದೆ ಎಂದು ರಿಜ್ವಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...