Homeಮುಖಪುಟರಾಜಸ್ಥಾನ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್-620, ಬಿಜೆಪಿ-548 ಸ್ಥಾನಗಳಲ್ಲಿ ಗೆಲುವು

ರಾಜಸ್ಥಾನ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್-620, ಬಿಜೆಪಿ-548 ಸ್ಥಾನಗಳಲ್ಲಿ ಗೆಲುವು

ಅಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್ 20 ರಂದು ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್ 21 ರಂದು ಮತದಾನ ನಡೆಯಲಿದೆ.

- Advertisement -
- Advertisement -

ರಾಜಸ್ಥಾನದ 50 ನಗರ ಸ್ಥಳೀಯ ಸಂಸ್ಥೆಯ 1,775 ವಾರ್ಡ್ ಕೌನ್ಸಿಲರ್ ಸ್ಥಾನಗಳ ಚುನಾವಣಾ ಫಲಿತಾಂಶಗಳನ್ನು ಘೋಷಿಸಲಾಗಿದ್ದು, ಇದರಲ್ಲಿ ಆಡಳಿತಾರೂಢ ಕಾಂಗ್ರೆಸ್ 620, ಬಿಜೆಪಿ 548 ಮತ್ತು 595 ಸ್ವತಂತ್ರ ಅಭ್ಯರ್ಥಿಗಳು ಜಯಗಳಿಸಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ರಾಜಸ್ಥಾನ: ವಿಮಾ ಕಂಪನಿ, ಬ್ಯಾಂಕ್ ವಿರುದ್ಧ ಸತತ 3 ವರ್ಷ ಹೋರಾಡಿ ವಿಮಾ ಹಕ್ಕು ಪಡೆದ ರೈತರು!

ರಾಜಸ್ಥಾನದ 12 ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಏಳು ಅಭ್ಯರ್ಥಿಗಳು, ಸಿಪಿಐ ಮತ್ತು ಸಿಪಿಐ(ಎಂ) ತಲಾ ಇಬ್ಬರು ಮತ್ತು ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷ (ಆರ್‌ಎಲ್‌ಪಿ)ದ ಒಬ್ಬರು ಗೆದ್ದಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗದ ವಕ್ತಾರರು ತಿಳಿಸಿದ್ದಾರೆ.

ಚುನಾವಣೆಗೆ 2,622 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು, ಒಟ್ಟು 14.32 ಲಕ್ಷ ಮತದಾರರು ತಮ್ಮ ಪ್ರತಿನಿಧಿಗಳನ್ನು ಚಲಾಯಿಸಲು ಅರ್ಹರಾಗಿದ್ದರು ಮತ್ತು 7,249 ಅಭ್ಯರ್ಥಿಗಳು ಕಣದಲ್ಲಿದ್ದರು.

ಈ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಸ್ಥಾನದ ಚುನಾವಣೆಯ ಅಧಿಸೂಚನೆಯನ್ನು ಇಂದು ಹೊರಡಿಸಲಾಗುತ್ತದೆ. ಅಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್ 20 ರಂದು ಮತ್ತು ಉಪಾಧ್ಯಕ್ಷ ಹುದ್ದೆಗೆ ಡಿಸೆಂಬರ್ 21 ರಂದು ಮತದಾನ ನಡೆಯಲಿದೆ ಎನ್ನಲಾಗಿದೆ.

ಇದನ್ನೂ ಓದಿ: ರಾಜಸ್ಥಾನ: ವೇಶ್ಯಾವಾಟಿಕೆ ನಡೆಸುತ್ತಿದ್ದ BJP ಮಹಿಳಾ ಮೋರ್ಚಾ ಅಧ್ಯಕ್ಷೆ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಆಂಧ್ರದಲ್ಲಿ ಎಸ್‌ಸಿ, ಎಸ್‌ಟಿ ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲಾಗಿದೆ ಎಂಬ...

0
"ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಲು ಕಾಂಗ್ರೆಸ್ ಆಂಧ್ರ ಪ್ರದೇಶದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿಯನ್ನು ಕಡಿಮೆ ಮಾಡಿದೆ. ಇದೊಂದು ಪ್ರಮುಖ ಯೋಜನೆಯಾಗಿದ್ದು, ಇದನ್ನು ಇಡೀ ದೇಶದಾದ್ಯಂತ ಜಾರಿಗೆ ತರಲು ಕಾಂಗ್ರೆಸ್ ಬಯಸಿದೆ" ಎಂದು ಟೋಂಕ್‌ನಲ್ಲಿ ಮಂಗಳವಾರ (ಏ.23)...