Homeಮುಖಪುಟರಾಜಸ್ಥಾನ: ಅಧಿಕಾರಕ್ಕೆ ಬಂದ ಬೆನ್ನಲ್ಲಿ ಸಾವಿರಾರು ಯುವಕರ 'ಉದ್ಯೋಗ' ಕಸಿದುಕೊಂಡ ಬಿಜೆಪಿ ಸರಕಾರ

ರಾಜಸ್ಥಾನ: ಅಧಿಕಾರಕ್ಕೆ ಬಂದ ಬೆನ್ನಲ್ಲಿ ಸಾವಿರಾರು ಯುವಕರ ‘ಉದ್ಯೋಗ’ ಕಸಿದುಕೊಂಡ ಬಿಜೆಪಿ ಸರಕಾರ

- Advertisement -
- Advertisement -

ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬೆನ್ನಲ್ಲಿ ಹಿಂದಿನ ಕಾಂಗ್ರೆಸ್‌ ಸರಕಾರ ಜಾರಿಗೆ ತಂದಿದ್ದ ರಾಜೀವ್ ಗಾಂಧಿ ಯುವ ಮಿತ್ರ ಇಂಟರ್ನ್‌ಶಿಪ್ ಯೋಜನೆಯನ್ನು ಕೊನೆಗೊಳಿಸಿದ್ದು, 4,000ಕ್ಕೂ ಹೆಚ್ಚು ಯುವಕರು ಉದ್ಯೋಗವನ್ನು ಕಳೆದುಕೊಂಡು ನಿರುದ್ಯೋಗಿಗಳಾಗಿದ್ದಾರೆ.

ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯವು 5,000 ರಾಜೀವ್ ಗಾಂಧಿ ಯುವ ಮಿತ್ರರಿಗೆ ಉದ್ಯೋಗ ನೀಡಿತ್ತು. ಇದೀಗ ಯೋಜನೆಯನ್ನು ಕೊನೆಗೊಳಿಸಿರುವುದರಿಂದ ಯೋಜನೆಯಡಿಯಲ್ಲಿ ಯುವಕರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ.  ಸರಕಾರದ ನಿರ್ಧಾರದ ವಿರುದ್ಧ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಜೀವ್ ಗಾಂಧಿ ಯುವ ಮಿತ್ರ ಇಂಟರ್ನ್‌ಶಿಪ್ ಯೋಜನೆಯಡಿಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಹಲವು ಯೋಜನೆಗಳನ್ನು ಪ್ರಚಾರ ಮಾಡಬೇಕಿತ್ತು. ಈ ಯೋಜನೆಯಡಿ ಉದ್ಯೋಗ ಪಡೆದ ಯುವಕರಿಗೆ ಪ್ರತಿ ತಿಂಗಳು ಸುಮಾರು 17,500 ರೂ. ವೇತನ ಸಿಗುತ್ತಿತ್ತು. ಯೋಜನೆಯನ್ನು ಇದೀಗ ಕೇಂದ್ರ ಸರಕಾರ ರದ್ದುಪಡಿಸಿದ ಕಾರಣ ಸುಮಾರು 4,200 ಯುವಕರು ನಿರುದ್ಯೋಗಿಗಳಾಗಿದ್ದಾರೆ.  ರಾಜೀವ್ ಗಾಂಧಿ ಯುವ ಮಿತ್ರ ಇಂಟರ್ನ್‌ಶಿಪ್ ಯೋಜನೆಯಡಿಯಲ್ಲಿ ಸಿಕ್ಕ ಉದ್ಯೋಗದಿಂದ ನಮ್ಮ ಕುಟುಂಬದ ಜೀವನ ಸಾಗುತ್ತಿತ್ತು. ಸುಮಾರು ಒಂದು ತಿಂಗಳಿನಿಂದ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ಆದರೆ ಸರ್ಕಾರ ನಮ್ಮ ಮನವಿಗಳನ್ನು ಸ್ವೀಕರಿಸಿಲ್ಲ. ಗುತ್ತಿಗೆ ನೌಕರರಾಗಿ ಸರ್ಕಾರ ನಮ್ಮನ್ನು ಸೇರಿಸಿಕೊಳ್ಳಬೇಕು ಎಂದು ನಾವು ಬಯಸುತ್ತೇವೆ ಎಂದು ಪ್ರತಿಭಟನಾನಿರತ  25 ವರ್ಷದ ದಿಲೀಪ್ ಸಪೇರಾ ಹೇಳಿದ್ದಾರೆ.

2021-22ರ ಬಜೆಟ್ ಭಾಷಣದಲ್ಲಿ ಮಾಜಿ ಸಿಎಂ ಗೆಹ್ಲೋಟ್ ಅವರು ಯುವ ಮಿತ್ರ ಇಂಟರ್ನ್‌ಶಿಪ್ ಯೋಜನೆಯನ್ನು ಘೋಷಿಸಿದ್ದರು. ಇದಕ್ಕೆ ಬಿಜೆಪಿಯು ವಿರೋಧ ಪಕ್ಷದಲ್ಲಿದ್ದಾಗ ಆಕ್ಷೇಪಣೆಗಳನ್ನು ಎತ್ತಿತ್ತು.  ಕಾಂಗ್ರೆಸ್‌ ಪಕ್ಷದ ಸಿದ್ಧಾಂತವನ್ನು ಪ್ರಚಾರ ಮಾಡಲು ಯುವಮಿತ್ರರನ್ನು ಬಳಸಿಕೊಂಡಿದೆ ಎಂದು ಬಿಜೆಪಿ ಆರೋಪಿಸಿತ್ತು.

ಕಾಂಗ್ರೆಸ್ ನಾಯಕ ಮತ್ತು ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಜೈಪುರದಲ್ಲಿ ಯುವ ಮಿತ್ರರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಯೋಜನೆಯ ರದ್ದತಿಯನ್ನು ಹಿಂಪಡೆಯುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಐದು ಸಾವಿರ ಯುವಕರನ್ನು ಅವರ ಕೆಲಸದಿಂದ ತೆಗೆದುಹಾಕಲಾಗಿದೆ. ಸರಕಾರದ ಈ ನಿರ್ಧಾರವನ್ನು ನಾನು ಖಂಡಿಸುತ್ತೇನೆ. ಈ ಬಗ್ಗೆ ಸರಕಾರ ಮರು ಪರಿಶೀಲಿಸಿ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಬಿಜೆಪಿ ಸರ್ಕಾರ ತನ್ನ ಚುನಾವಣಾ ಪ್ರಚಾರದ ಸಮಯದಲ್ಲಿ ನೀಡಿದ ಉದ್ಯೋಗದ ಭರವಸೆಗಳನ್ನು ಮರೆತಿದೆ. ಈಗ ಯುವಕರನ್ನು ಉದ್ಯೋಗದಿಂದಲೇ ತೆಗೆದುಹಾಕಿದೆ. ಯುವ ಸಮುದಾಯವನ್ನು ನಿರುದ್ಯೋಗಿಗಳನ್ನಾಗಿ ಮಾಡಿದೆ. ಈ ಬಗ್ಗೆ ಸದನದಲ್ಲಿ ಧ್ವನಿ ಎತ್ತುವುದಾಗಿ ಸಚಿನ್‌ ಪೈಲೆಟ್‌ ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ವಕ್ತಾರ ಸವರ್ಣಿಮ್ ಚತುರ್ವೇದಿ ಈ ಕುರಿತು ಪ್ರತಿಕ್ರಿಯಿಸಿದ್ದು, ಬಿಜೆಪಿ ಸರಕಾರ, ಹಿಂದಿನ ಗೆಹ್ಲೋಟ್ ಸರ್ಕಾರ ತಂದ ಕಲ್ಯಾಣ ಯೋಜನೆಗಳನ್ನು ನಿರ್ಲಕ್ಷಿಸಿ ಮಿಸಾ ಕೈದಿಗಳಿಗೆ ಪಿಂಚಣಿಯನ್ನು ಮರಳಿ ತರುವ ಮೂಲಕ ಬಿಜೆಪಿ ತನ್ನ ಸಿದ್ಧಾಂತದ ಜನರಿಗೆ ಲಾಭ ನೀಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಸರ್ಕಾರ ಆದೇಶವನ್ನು ಹಿಂಪಡೆಯಬೇಕು ಮತ್ತು ಉದ್ಯೋಗಗಳನ್ನು ಮತ್ತೆ ನೀಡಬೇಕು ಎನ್ನುವುದು ನಮ್ಮ ಪ್ರಾಥಮಿಕ ಬೇಡಿಕೆಯಾಗಿದೆ. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.

ಇದನ್ನು ಓದಿ: ವಿಜಯವಾಡದಲ್ಲಿ ವಿಶ್ವದ ಅತಿದೊಡ್ಡ ‘ಅಂಬೇಡ್ಕರ್’ ಪ್ರತಿಮೆ ಅನಾವರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...