Homeಮುಖಪುಟರಾಜಸ್ಥಾನ: ಪ್ರಯಾಣಿಕರ ಮೇಲೆ ಗುಂಪು ಹಲ್ಲೆ

ರಾಜಸ್ಥಾನ: ಪ್ರಯಾಣಿಕರ ಮೇಲೆ ಗುಂಪು ಹಲ್ಲೆ

- Advertisement -
- Advertisement -

ರಾಜಸ್ಥಾನದ ಜೋಧ್‌ಪುರದಲ್ಲಿ ಆಘಾತಕಾರಿ ಘಟನೆ ನಡೆದಿದ್ದು, ಟ್ಲೋಲ್ ಪ್ಲಾಜಾದಲ್ಲಿ ಪ್ರಯಾಣಿಕರಿಗೆ ಕಾರು ತಡೆದು ಟೋಲ್‌ ಸಿಬ್ಬಂದಿಗಳ ಗುಂಪು ಹಲ್ಲೆ ನಡೆಸಿದ್ದು, ಈ ಕುರಿತ ಶಾಕಿಂಗ್‌ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಬುಧವಾರ ರಾತ್ರಿ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಪಾಲಿ ಜಿಲ್ಲೆಯ ಬಗ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ ಸತ್ಯನಾರಾಯಣ ಗುರ್ಜರ್ ಅವರು ಕಪ್ಪು ಮಹೀಂದ್ರಾ ಸ್ಕಾರ್ಪಿಯೊ ಎಸ್‌ಯುವಿಯಲ್ಲಿ ತಮ್ಮ ಸ್ನೇಹಿತರೊಂದಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಅವರಿಗೆ ಜಾದನ್ ಟೋಲ್ ಬೂತ್‌ನಲ್ಲಿ ಕೆಲ ಸಿಬ್ಬಂದಿಗಳ ಜೊತೆ ಸಣ್ಣ ವಾಗ್ವಾದ ನಡೆದಿತ್ತು. ಬಳಿಕ ಅವರು ಅಲ್ಲಿಂದ ತಮ್ಮ ಪ್ರಯಾಣವನ್ನು ಮುಂದುವರಿಸಿದ್ದರು. ಆದರೆ ಕಾರು ಖೇಜರ್ಲಿ ಟೋಲ್ ಬೂತ್ ತಲುಪಿದಾಗ ಸುಮಾರು 10-12 ಜನರು ಕೈಯಲ್ಲಿ ದೊಣ್ಣೆಗಳನ್ನು ಹಿಡಿದುಕೊಂಡು ಕಾರಿನ ಮೇಲೆ ಮತ್ತು ಅದರಲ್ಲಿದ್ದ ಪ್ರಯಾಣಿಕರ ಮೇಲೆ ದಾಳಿ ನಡೆಸಿದ್ದಾರೆ.

ಇಡೀ ಘಟನೆ ಟೋಲ್ ಪ್ಲಾಜಾದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಟೋಲ್ ಪ್ಲಾಜಾ ನಿರ್ವಾಹಕರ ದಾಳಿಯಲ್ಲಿ ಕಾರು ಚಲಾಯಿಸುತ್ತಿದ್ದ ನಾರಾಯಣ್ ಲಾಲ್ ಅವರಿಗೆ ಗಂಭೀರವಾಗಿ ಗಾಯಗಳಾಗಿದೆ.

ಆರೋಪಿಗಳ ವಿರುದ್ಧ ಲೂನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಪ್ರಕಾರ, ಟೋಲ್ ಪ್ಲಾಜಾ ನಿರ್ವಾಹಕರು ಯುವಕರ ಮೇಲೆ ಹಲ್ಲೆ ನಡೆಸಿ ಅಮಾನುಷವಾಗಿ ಥಳಿಸಿದ್ದಾರೆ ಮತ್ತು ಘಟನೆಯ ಸಮಯದಲ್ಲಿ ಕಾರಿನಲ್ಲಿಟ್ಟಿದ್ದ 2.9 ಲಕ್ಷ ರೂ.ಗಳನ್ನು ದೋಚಿದ್ದಾರೆ. ಸತ್ಯನಾರಾಯಣ ಅವರು ಧರಿಸಿದ್ದ ಚಿನ್ನದ ಸರವನ್ನೂ ಆರೋಪಿಗಳು ಒಡೆದಿದ್ದಾರೆ. ಈ ಬಗ್ಗೆ ವಿಷ್ಣು, ಮಂಜು, ರವಿ ಬಬಲ್, ಸುರೇಶ್ ಅಲಿಯಾಸ್ ಸೂಪಾ, ಪ್ರದೀಪ್ ಮತ್ತು ರಾಕೇಶ್ ವಿರುದ್ಧ ದೂರು ಸಲ್ಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾವುದೇ ಬಂಧನ ನಡೆದಿಲ್ಲ. ಟೋಲ್ ಪ್ಲಾಜಾದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳು ಮತ್ತು ಮೊದಲು ಮಾತಿನ ಚಕಮಕಿ ನಡೆದ ಟೋಲ್ ಪ್ಲಾಜಾದಲ್ಲಿ ಅಳವಡಿಸಲಾಗಿರುವ ಕ್ಯಾಮೆರಾಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಟೋಲ್ ನಿರ್ವಾಹಕರೇ ದಾಳಿಕೋರರು, ಯುವಕರನ್ನು ಅಮಾನುಷವಾಗಿ ಥಳಿಸಿ ಅವರ ಕಾರನ್ನು ಜಖಂಗೊಳಿಸಿದ್ದಾರೆ. ಈ ಗೂಂಡಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವ್ಯಾಪಕವಾದಂತಹ ಆಕ್ರೋಶ ವ್ಯಕ್ತವಾಗಿದೆ.

ರಾಜಸ್ಥಾನದಲ್ಲಿ ಇತ್ತೀಚೆಗೆ ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಮುಖ್ಯಸ್ಥ ಸುಖದೇವ್‌ ಸಿಂಗ್‌ ಗೊಗಾಮೆಡಿ ಅವರ ಹತ್ಯೆ ನಡೆದಿತ್ತು. ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಬೆನ್ನಲ್ಲೇ ನಡೆದ ಹತ್ಯೆ ರಾಜ್ಯದಲ್ಲಿ ಭಾರೀ ಪ್ರತಿಭಟನೆ ಮತ್ತು ರಾಜಕೀಯ ಚರ್ಚೆಗೆ ಕಾರಣವಾಗಿತ್ತು. ಇದೀಗ ರಾಜಸ್ಥಾನದ ಹೆದ್ದಾರಿಯೊಂದರಲ್ಲಿ ಟೋಲ್‌ ಸಿಬ್ಬಂದಿಗಳು ನಡೆಸಿದ ಗುಂಪು ಹಲ್ಲೆ ಮತ್ತೆ ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಶ್ನೆಯನ್ನು ಮೂಡಿಸಿದೆ.

ಇದನ್ನು ಓದಿ: ಕೇರಳ: ಕಾಂಗ್ರೆಸ್‌ ಆಯೋಜಿಸಿದ್ದ ಪ್ರತಿಭಟನೆ ವೇಳೆ ಉದ್ವಿಗ್ನ: ಪೊಲೀಸರಿಂದ ಅಶ್ರುವಾಯು ಪ್ರಯೋಗ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಬಿಜೆಪಿಗೆ ಮತ ಹಾಕುವಂತೆ...

0
ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಅಧೀರ್ ರಂಜನ್ ಚೌಧರಿ ಅವರಿ ಬಿಜೆಪಿ ಪರ ಮಾತನಾಡಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ. ವಿಡಿಯೋದಲ್ಲಿ " ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷಕ್ಕೆ ಮತ...