Homeಮುಖಪುಟರಾಜಸ್ಥಾನ: ಕಾಂಗ್ರೆಸ್‌ ಅಭ್ಯರ್ಥಿ ಗುರ್ಮೀತ್ ಸಿಂಗ್ ನಿಧನ

ರಾಜಸ್ಥಾನ: ಕಾಂಗ್ರೆಸ್‌ ಅಭ್ಯರ್ಥಿ ಗುರ್ಮೀತ್ ಸಿಂಗ್ ನಿಧನ

- Advertisement -
- Advertisement -

ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಕರಣ್‌ಪುರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಹಾಲಿ ಶಾಸಕ ಗುರ್ಮೀತ್ ಸಿಂಗ್ ಕೂನರ್ ಮೃತಪಟ್ಟಿದ್ದಾರೆ.

75ವರ್ಷ ವಯಸ್ಸಿನ ಗುರ್ಮೀತ್ ಸಿಂಗ್ ಕೂನರ್, ಮೂತ್ರಪಿಂಡ ಸಮಸ್ಯೆ ಹಾಗೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು. ಅವರನ್ನು ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಆಸ್ಪತ್ರೆ ನೀಡಿದ ಮರಣ ಪ್ರಮಾಣಪತ್ರದಲ್ಲಿ ಕೂನರ್ ಅವರ ನಿಧನಕ್ಕೆ ಸೆಪ್ಟಿಕ್ ಆಘಾತ ಮತ್ತು ಮೂತ್ರಪಿಂಡದ ಕಾಯಿಲೆ ಕಾರಣ ಎಂದು ಉಲ್ಲೇಖಿಸಲಾಗಿದೆ.

ಕಾಂಗ್ರೆಸ್‌ ಅಭ್ಯರ್ಥಿ ನಿಧನಕ್ಕೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೂಟ್‌ ಸಂತಾಪವನ್ನು ಸೂಚಿಸಿದ್ದಾರೆ. ಕರಣ್‌ಪುರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗುರ್ಮೀತ್ ಸಿಂಗ್ ಕೂನರ್ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. ನಾನು ಅವರ ಸಾವಿಗೆ ಸಂತಾಪವನ್ನು ಸೂಚಿಸುತ್ತಿದ್ದೇನೆ. ಅನಾರೋಗ್ಯದಿಂದ ಇದ್ದರೂ ಗುರ್ಮೀತ್ ಅವರು ಸುದೀರ್ಘವಾಗಿ ಅಭಿವೃದ್ಧಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅವರ ಅಗಲಿಕೆ ಕಾಂಗ್ರೆಸ್‌ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲು ಮತ್ತು ಕುಟುಂಬಕ್ಕೆ ನಷ್ಟವನ್ನು ಭರಿಸುವ ಶಕ್ತಿ ನೀಡಲು ದೇವರ ಬಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಗೆ ಒಂದೇ ಹಂತದಲ್ಲಿ ನವೆಂಬರ್ 25 ರಂದು ಮತದಾನ ನಡೆಯಲಿದ್ದು, ಗುರ್ಮೀತ್ ಸಿಂಗ್ ಕೂನರ್ ಅವರು ನ.4ರಂದು ನಾಮಪತ್ರ ಸಲ್ಲಿಕೆ ಮಾಡಿದ್ದರು. ಕ್ಷೇತ್ರದಲ್ಲಿ ಬೆಂಬಲಿಗರ ಮೂಲಕ ಚುನಾವಣಾ ಪ್ರಚಾರ ನಡೆಸುತ್ತಿದ್ದರು.

ಡಿ.3ರಂದು ಮಧ್ಯಪ್ರದೇಶ, ಛತ್ತೀಸ್‌ಗಢ, ಮಿಜೋರಾಂ ಮತ್ತು ತೆಲಂಗಾಣ ಸೇರಿ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬರಲಿದೆ.

ಇದನ್ನು ಓದಿ: ಉಡುಪಿ: ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ; ಆರೋಪಿ ಅರೆಸ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಮಹಾಲಕ್ಷಿ ಮತ್ತು ಮೆಟ್ರೋ’: ತೆಲಂಗಾಣ ಸರ್ಕಾರ-ಎಲ್‌&ಟಿ ನಡುವೆ ಜೋರಾದ ಜಟಾಪಟಿ

0
ಹೈದರಾಬಾದ್ ಮಹಾನಗರ ಮೆಟ್ರೋ ಸೇವೆ ಸೇರಿದಂತೆ ತೆಲಂಗಾಣ ರಾಜ್ಯದ ಹಲವು ಬೃಹತ್ ಯೋಜನೆಗಳ ಅನುಷ್ಠಾನ ಮತ್ತು ನಿರ್ವಹಣೆ ಮಾಡುತ್ತಿರುವ 'ಲಾರ್ಸೆನ್ ಮತ್ತು ಟೂಬ್ರೊ (ಎಲ್ & ಟಿ)' ಕಂಪನಿ ಮತ್ತು ರಾಜ್ಯ ಸರ್ಕಾರದ...