Homeಮುಖಪುಟರಾಜ್‌ದೀಪ್ ಸರ್ದೇಸಾಯಿ ಪ್ರಕರಣ | ಬಿಜೆಪಿ ನಾಯಕಿ ಶಾಝಿಯಾ ಇಲ್ಮಿಗೆ 25,000 ರೂ. ದಂಡ ವಿಧಿಸಿದ...

ರಾಜ್‌ದೀಪ್ ಸರ್ದೇಸಾಯಿ ಪ್ರಕರಣ | ಬಿಜೆಪಿ ನಾಯಕಿ ಶಾಝಿಯಾ ಇಲ್ಮಿಗೆ 25,000 ರೂ. ದಂಡ ವಿಧಿಸಿದ ದೆಹಲಿ ಹೈಕೋರ್ಟ್

- Advertisement -
- Advertisement -

ಇಂಡಿಯಾ ಟುಡೇ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ವಿರುದ್ಧದ ಮಾನನಷ್ಟ ಪ್ರಕರಣದಲ್ಲಿ ಸತ್ಯ ಮುಚ್ಚಿಟ್ಟಿದ್ದಕ್ಕಾಗಿ ದೆಹಲಿ ಹೈಕೋರ್ಟ್ ಶುಕ್ರವಾರ (ಏ.4) ಬಿಜೆಪಿ ನಾಯಕಿ ಶಾಝಿಯಾ ಇಲ್ಮಿಗೆ 25 ಸಾವಿರ ರೂಪಾಯಿ ದಂಡ ವಿಧಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಇಂಡಿಯಾ ಟುಡೇ ಚಾನೆಲ್‌ನಲ್ಲಿ ಆಯೋಜಿಸಿದ್ದ ಚರ್ಚಾ ಕಾರ್ಯಕ್ರಮದಿಂದ ಶಾಝಿಯಾ ಇಲ್ಮಿ ಹೊರನಡೆದ ನಂತರ ರಾಜ್‌ದೀಪ್ ಸರ್ದೇಸಾಯಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಾಕಿದ್ದ ವಿಡಿಯೋ ಪೋಸ್ಟ್ ವಿರುದ್ದ ಇಲ್ಮಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಇಲ್ಮಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಭಾಗಶಃ ಮಾನ್ಯ ಮಾಡಿದ್ದಾರೆ. ಆದರೆ, ಅರ್ಜಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಎರಡು ಎಕ್ಸ್‌ ಪೋಸ್ಟ್‌ಗಳನ್ನು ಇಲ್ಮಿ ಮುಚ್ಚಿಟ್ಟಿರುವುದು ಕಂಡು ಬಂದಿದೆ ಎಂದ ನ್ಯಾಯಾಲಯ ದಂಡ ವಿಧಿಸಿದೆ ಎಂದು ವರದಿ ಹೇಳಿದೆ.

ರಾಜ್‌ದೀಪ್ ಸರ್ದೇಸಾಯಿ ಪೋಸ್ಟ್ ಮಾಡಿದ್ದ, ಇಲ್ಮಿ ಮತ್ತು ಇಂಡಿಯಾ ಟುಡೇ ವಿಡಿಯೋ ಪತ್ರಕರ್ತನ ನಡುವಿನ ವಾಗ್ವಾದವನ್ನು ತೋರಿಸುವ 18 ಸೆಕೆಂಡುಗಳ ವಿಡಿಯೋ ತುಣುಕನ್ನು ತೆಗೆದು ಹಾಕುವಂತೆ ನಿರ್ದೇಶಿಸಿದ್ದ ಈ ಹಿಂದಿನ ಮಧ್ಯಂತರ ಆದೇಶವನ್ನು ನ್ಯಾಯಾಲಯ ಸಮರ್ಥಿಸಿಕೊಂಡಿದೆ.

“ಇಲ್ಮಿ ಚರ್ಚಾ ಕಾರ್ಯಕ್ರಮದಿಂದ ಹೊರನಡೆದ ನಂತರವೂ ವಿಡಿಯೋ ರೆಕಾರ್ಡಿಂಗ್ ಮಾಡಿರುವುದು, ಅವರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಿದೆ. ಹಾಗಾಗಿ, ಅದನ್ನು ಆನ್‌ಲೈನ್‌ನಲ್ಲಿ ಉಳಿಸಲು ಸಾಧ್ಯವಿಲ್ಲ” ಎಂದಿದೆ.

ವಿಡಿಯೋ ಪತ್ರಕರ್ತ ತನ್ನ ನಡವಳಿಕೆ ಮೂಲಕ ನನಗೆ  ಕೋಪ ಬರಿಸಿದರು ಎಂಬ ಇಲ್ಮಿ ವಾದವನ್ನು ತಿರಸ್ಕರಿಸಿದ ನ್ಯಾಯಾಲಯ, ಪತ್ರಕರ್ತನನ್ನು ವಿಕೃತ, ಕಾಮುಕ ಎಂದು ಹೇಳುವುದು ಸಮರ್ಥನೀಯವಲ್ಲ ಎಂದಿದೆ. ಸರ್ದೇಸಾಯಿ ಪೋಸ್ಟ್ ಮಾಡಿದ್ದ ವಿಡಿಯೋವನ್ನು ತಿರುಚಲಾಗಿದೆ ಎಂಬ ಇಲ್ಮಿ ಆರೋಪನ್ನೂ ನ್ಯಾಯಾಲಯ ತಳ್ಳಿ ಹಾಕಿದೆ.

ತನ್ನ ಮನೆಯಲ್ಲಿದ್ದ ಇಂಡಿಯಾ ಟುಡೇ ವಿಡಿಯೋ ಪತ್ರಕರ್ತನ ಮೇಲೆ ಇಲ್ಮಿ ದೌರ್ಜನ್ಯವೆಸಗಿದ್ದಾರೆ ಎಂದು ರಾಜ್‌ದೀಪ್ ಸರ್ದೇಸಾಯಿ ಎಕ್ಸ್ ಪೋಸ್ಟ್ ಮೂಲಕ ಮಾಡಿದ್ದ ಆರೋಪವನ್ನು ವಜಾಗೊಳಿಸಬೇಕೇ ಎಂದು ನ್ಯಾಯಾಲಯ ಪರಿಶೀಲಿಸಿದೆ.

“ಇಲ್ಮಿ ಮೈಕ್ ಕಿತ್ತು ಹಾಕಿದ್ದಾರೆ, ಪತ್ರಕರ್ತನನ್ನು ಮನೆಯಿಂದ ಹೊರದಬ್ಬಿದ್ದಾರೆ” ಎಂದು ಹೇಳುವುದು ಸಮರ್ಥನೀಯವಲ್ಲ ಎಂದು ನ್ಯಾಯಾಲಯ ಹೇಳಿದೆ.

ಆದಾಗ್ಯೂ, ರಾಜ್‌ದೀಪ್ ಅವರ ಅದೇ ಪೋಸ್ಟ್‌ನ ಉಳಿದ ಭಾಗಗಳು (ನಮ್ಮ ಪತ್ರಕರ್ತನನ್ನು ನಿಂದಿಸಲಾಗಿದೆ, ಕೆಟ್ಟ ನಡವಳಿಕೆಗೆ ಕ್ಷಮೆಯಿಲ್ಲ) ಪ್ರಾಥಮಿಕವಾಗಿ ರದ್ದುಗೊಳಿಸಬೇಕಿಲ್ಲ ಎಂದ ನ್ಯಾಯಾಲಯ, ಅವುಗಳಿಗೆ ಕೆಲವು ಆಧಾರಗಳಿವೆ ಎಂದು ತೋರುತ್ತದೆ ಎಂದಿದೆ.

ಏನಿದು ಪ್ರಕರಣ?

ಈ ಪ್ರಕರಣವು, ಕಾರ್ಗಿಲ್ ವಿಜಯ್ ದಿವಸ್ ರಾಜಕೀಯ, ಅಗ್ನಿವೀರ್ ಮತ್ತು ರಕ್ಷಣಾ ಪಡೆಗಳ ರಾಜಕೀಯೀಕರಣ ಕುರಿತು ಇಂಡಿಯಾ ಟುಡೆಯಲ್ಲಿ ರಾಜ್‌ದೀಪ್ ಸರ್ದೇಸಾಯಿ ಅವರು ಜುಲೈ 26, 2024ರಂದು ನಡೆಸಿದ್ದ ಚರ್ಚೆಗೆ ಸಂಬಂಧಿಸಿದೆ.

ಚರ್ಚೆಯಲ್ಲಿ ಮೇಜರ್ ಜನರಲ್ (ನಿವೃತ್ತ) ಯಶ್ ಮೋರ್ ಅವರು ಅಗ್ನಿವೀರ್ ಯೋಜನೆಯಲ್ಲಿನ ನ್ಯೂನತೆಗಳನ್ನು ಎತ್ತಿ ತೋರಿಸುತ್ತಿದ್ದರು. ಈ ವೇಳೆ ಬಿಜೆಪಿ ವಕ್ತಾರೆ ಇಲ್ಮಿ ಮಧ್ಯ ಪ್ರವೇಶಿಸಿದ್ದರು. ಆಗ ಇಲ್ಮಿ ಮತ್ತು ಸರ್ದೇಸಾಯಿ ನಡುವೆ ವಾಗ್ವಾದ ನಡೆದಿತ್ತು. ಮಾಜಿ ಜನರಲ್ “ಕಠಿಣ ಸಂಗತಿಗಳನ್ನು ಮುಂದಿಡುತ್ತಿದ್ದಾರೆ” ಎಂದು ಸರ್ದೇಸಾಯಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಇಲ್ಮಿ, “ನಮಗೆ ಉಪದೇಶ ಕೊಡಬೇಡಿ” ಎಂದಿದ್ದರು.

ಸರ್ದೇಸಾಯಿ ಮತ್ತು ಇಲ್ಮಿ ನಡುವೆ ವಾಗ್ವಾದ ತಾರಕಕ್ಕೇರಿ, ಇಲ್ಮಿ ಕಾರ್ಯಕ್ರಮದಿಂದ ಹೊರ ನಡೆದಿದ್ದರು. ಅದೇ ದಿನ ರಾತ್ರಿ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಇಲ್ಮಿ “ಸರ್ದೇಸಾಯಿ ಶೋನಲ್ಲಿ ನನ್ನ ಧ್ವನಿ ಅಡಗಿಸಿದ್ದಾರೆ” ಎಂದು ಆರೋಪಿಸಿದ್ದರು.

ಇದಕ್ಕೆ ತಿರುಗೇಟು ಕೊಟ್ಟಿದ್ದ ಸರ್ದೇಸಾಯಿ ಮರುದಿನ ಬೆಳಿಗ್ಗೆ ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿ ಇಲ್ಮಿ ಅವರು ತಮ್ಮ ಮನೆಯಲ್ಲಿ ಇಂಡಿಯಾ ಟುಡೇಯ ವಿಡಿಯೋ ಪತ್ರಕರ್ತನನ್ನು ನಿಂದಿಸಿದ್ದಾರೆ ಎಂದು ಆರೋಪಿಸಿದ್ದರು.

ಸರ್ದೇಸಾಯಿ ಅವರ ಪೋಸ್ಟ್‌ಗೆ ಸಂಬಂಧಿಸಿದಂತೆ ಎಕ್ಸ್‌ನಲ್ಲೇ ಪ್ರತಿಕ್ರಿಯೆ ನೀಡಿದ್ದ ಇಲ್ಮಿ, ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದರು. ಅದರಂತೆ, ದೆಹಲಿ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಸಂಭಾಲ್‌ | ಶಾಹಿ ಮಸೀದಿಯಲ್ಲಿ ಹಿಂದೂ ಆಚರಣೆಗೆ ಯತ್ನಿಸಿದ ಮೂವರು ದುಷ್ಕರ್ಮಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...