Homeಮುಖಪುಟದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ತಮ್ಮ ‘ಗುರು’ ಬಾಲಚಂದರ್‌ಗೆ ಅರ್ಪಿಸಿದ ಸೂಪರ್‌ಸ್ಟಾರ್‌

ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ತಮ್ಮ ‘ಗುರು’ ಬಾಲಚಂದರ್‌ಗೆ ಅರ್ಪಿಸಿದ ಸೂಪರ್‌ಸ್ಟಾರ್‌

ನಾನು ಬಸ್‌ ಕಂಡಕ್ಟರ್‌ ಆಗಿದ್ದಾಗ ನನ್ನಲ್ಲಿರುವ ನಟನಾ ಪ್ರತಿಭೆಯನ್ನು ಗುರುತಿಸಿ ಸಿನಿಮಾ ಸೇರಲು ಪ್ರೋತ್ಸಾಹಿಸಿದವರು ಕರ್ನಾಟಕದ ನನ್ನ ಸ್ನೇಹಿತ, ನನ್ನ ಸಹೋದ್ಯೋಗಿ ರಾಜ್‌ ಬಹದ್ದೂರ್‌...

- Advertisement -
- Advertisement -

’ಈ ಪ್ರಶಸ್ತಿಯನ್ನು ನಾನು ನನ್ನ ಮೆಂಟರ್‌, ಗುರು ಕೆ. ಬಾಲಚಂದರ್‌ ಅವರಿಗೆ ಅರ್ಪಿಸುತ್ತೇನೆ. ನಾನು ಅವರನ್ನು ಬಹಳ ಕೃತಜ್ಞತೆಯಿಂದ ಸ್ಮರಿಸುತ್ತೇನೆ. ನನ್ನ ತಂದೆಯಂತಿರುವ ನನ್ನ ಸಹೋದರ ಸತ್ಯನಾರಾಯಣ ರಾವ್‌ ಗಾಯಕ್ವಾಡ್‌ ಅವರು ನನಗೆ ಮೌಲ್ಯಗಳನ್ನು ಕಲಿಸುವ ಮತ್ತು ಆಧ್ಯಾತ್ಮಿಕತೆಯನ್ನು ಪರಿಚಯಿಸುವ ಮೂಲಕ ನನ್ನನ್ನು ಬೆಳೆಸಿದರು’ ಎಂದು ದಾದಾ ಸಾಹೇಬ್‌ ಪ್ರಶಸ್ತಿ ಸ್ವೀಕರಿಸಿದ ರಜನಿಕಾಂತ್‌ ಅವರು ತನ್ನ ಜೀವನದಲ್ಲಿ ಪ್ರಮುಖ ಪಾತ್ರವಹಿಸಿದವರೆಲ್ಲರಿಗೂ ಕೃತಜ್ಞತೆಗಳನ್ನು ತಿಳಿಸಿದರು.

ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಗೌರವಿಸುವ ಸಮಾರಂಭದಲ್ಲಿ ಸೂಪರ್‌ ಸ್ಟಾರ್‌ ರಜನಿಕಾಂತ್‌ ಅವರಿಗೆ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿಂದ ಗೌರವ ಸ್ವೀಕರಿಸಲು ವೇದಿಕೆಯೆಡೆಗೆ ಹೆಜ್ಜೆಹಾಕಿದ ಸೂಪರ್‌ಸ್ಟಾರ್‌ಗೆ ಎಲ್ಲರೂ ಗೌರವ ಸೂಚಿಸಿ ಎದ್ದುನಿಂತು ಚಪ್ಪಾಳೆಯ ಮೂಲಕ ಅಭಿನಂದನೆ ಸಲ್ಲಿಸಿದರು. ಪ್ರಶಸ್ತಿ ಸ್ವೀಕರಿಸುವ ಮೊದಲು ಮೋಹನ್‌ಲಾಲ್‌, ಖುಷ್ಬು, ಅಮಿತಾಬ್‌ ಬಚ್ಚನ್‌ ಮತ್ತು ಸಂಗೀತ ನಿರ್ದೇಶಕ ಎ.ಆರ್‌. ರೆಹಮಾನ್‌ರ ವಿಶೇಷ ಸಂದೇಶಗಳನ್ನು ಹೊಂದಿದ್ದ ವೀಡಿಯೋವನ್ನು ಪ್ಲೇ ಮಾಡಲಾಯಿತು. ಈ ಸಮಾರಂಭದಲ್ಲಿ ರಜನಿಕಾಂತ್‌ ಅವರ ಪತ್ನಿ ಲತಾ ಮತ್ತು ಅಳಿಯ ಧನುಷ್‌ ಕಾರ್ಯಕ್ರಮದಲ್ಲಿ ಹಾಜರಿದ್ದರು. ಅಸುರನ್‌ ಸಿನಿಮಾದ ನಟೆನೆಗಾಗಿ ಧನುಷ್‌ ಅವರು ಅತ್ಯುತ್ತಮ ನಟ ವಿಭಾಗದಲ್ಲಿ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದರು.

ಸಿನಿಮಾದ ಬಗ್ಗೆ ಅವರಿಗಿದ್ದ ಪ್ರೇಮ, ಚಿತ್ರರಂಗ ಪರಿಚಯವಾದ ಮೊದಲ ದಿನಗಳ ಬಗ್ಗೆ ಮಾತನಾಡಿದ್ದ ರಜಿನಿಕಾಂತ್, ‘ಕರ್ನಾಟಕದ ನನ್ನ ಸ್ನೇಹಿತ, ನನ್ನ ಸಹೋದ್ಯೋಗಿ ರಾಜ್‌ ಬಹದ್ದೂರ್‌, ನಾನು ಬಸ್‌ ಕಂಡಕ್ಟರ್‌ ಆಗಿದ್ದಾಗ ನನ್ನಲ್ಲಿರುವ ನಟನಾ ಪ್ರತಿಭೆಯನ್ನು ಗುರುತಿಸಿ ಸಿನಿಮಾ ಸೇರಲು ಪ್ರೋತ್ಸಾಹಿಸಿದವರು. ನನ್ನೊಂದಿಗೆ ಕೆಲಸ ಮಾಡಿದ ನನ್ನ ಎಲ್ಲಾ ನಿರ್ಮಾಪಕರು, ನಿರ್ದೇಶಕರು, ತಂತ್ರಜ್ಞರು, ಸಹ ಕಲಾವಿದರು, ವಿತರಕರು, ನಿರ್ವಾಹಕರು, ಮಾಧ್ಯಮದವರು ಮತ್ತು ನನ್ನೆಲ್ಲಾ ಅಭಿಮಾನಿಗಳು ಹಾಗೂ ನನಗೆ ಜೀವ ನೀಡಿದ ತಮಿಳು ಜನರಿಗೆ ಧನ್ಯವಾದ ಹೇಳುತ್ತೇನೆ. ಜೈ ಹಿಂದ್‌!’  ಎಂದರು.

ರಜಿನಿಕಾಂತ್‌ ಅವರ ಪ್ರತಿಭೆಯನ್ನು ಪೋಷಿಸುವಲ್ಲಿ, ನಟನಾ ವೃತ್ತಿಯನ್ನು ಪ್ರೋತ್ಸಾಹಿಸುತ್ತಾ ಮತ್ತು  ಅವರನ್ನು ನಟನಾಗಿ ರೂಪಿಸಿದವರಲ್ಲಿ ಬಾಲಚಂದರ್‌ ಅವರದು ಬಹುದೊಡ್ಡ ಪಾತ್ರ. ರಜನಿಕಾಂತ್‌ ಅವರು ಅಪೂರ್ವ ರಾಗಂಗಲ್‌ ಚಿತ್ರದಲ್ಲಿ ಚಿಕ್ಕ ಪಾತ್ರ ನಿರ್ವಹಿಸುವ ಮೂಲಕ ಹಿರಿತೆರೆಗೆ ಪಾದಾರ್ಪಣೆ ಮಾಡಿದರು. 1975ರಿಂದ ರಜನಿಕಾಂತ್‌ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸುತ್ತಾ ಬಂದಿದ್ದಾರೆ. ಇದುವರೆಗೆ ತಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ 160ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ತಮಿಳು ಭಾಷೆಯ ಇವರ ಸಿನಿಮಾಗಳು ಅಚ್ಚಳಿಯದಂತೆ ಉಳಿದಿವೆ.

ಭಾನುವಾರ ದೆಹಲಿಗೆ ತೆರಳುವ ಮುನ್ನ, ಪೋಯಸ್ ಗಾರ್ಡನ್‌ನಲ್ಲಿರುವ ತಮ್ಮ ನಿವಾಸದ ಹೊರಗೆ ಮಾಧ್ಯಮಗಳೊಂದಿಗೆ ಸಂವಾದ ನಡೆಸಿದ ಅವರು, ಈ ಗೌರವವನ್ನು ಕೆ. ಬಾಲಚಂದರ್ ಅವರೊಂದಿಗೆ ಆಚರಿಸಲು ಸಾಧ್ಯವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

‘ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿಯನ್ನು ಸ್ವೀಕರಿಸಲು ನನಗೆ ತುಂಬಾ ಸಂತೋಷವಾಗಿದೆ. ಈ ಸಮಯದಲ್ಲಿ ಕೆ. ಬಾಲಚಂದರ್‌ (ಕೆ.ಬಿ) ಸರ್‌ ನಮ್ಮೊಂದಿಗೆ ಇಲ್ಲದಿರುವುದಕ್ಕೆ ಬೇಸರವಾಗಿದೆ’. ಪ್ರಶಸ್ತಿ ಸ್ವೀಕರಿಸಿದ ನಂತರ ಈ ಬಗ್ಗೆ ಮಾತನಾಡುವುದಾಗಿಯೂ ತಿಳಿಸಿದ್ದರು.

ರಜನಿಕಾಂತ್‌ ನಟನೆಯ ಶಿವ ನಿರ್ದೇಶನದ ಅಣ್ಣಾತೆ ಸಿನಿಮಾವು ತೆರೆಗೆ ಬರಲು ಕಾಯುತ್ತಿದ್ದು, ನವೆಂಬರ್‌ 4 ರಂದು ಈ ಸಿನಿಮಾ ತೆರೆಗೆ ಬರಲಿದೆ.


ಇದನ್ನೂ ಓದಿ: 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಧನುಷ್, ಮನೋಜ್ ಬಾಜಪೇಯಿ, ಕಂಗನಾ ರಣಾವತ್‌ಗೆ ಅತ್ಯುತ್ತಮ ನಟ,ನಟಿಯ ಗರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...