Homeಮುಖಪುಟ'ಸಂಘಿ' ಅಲ್ಲ 'ರಜನಿಕಾಂತ್‌' ಬಗ್ಗೆ ಪುತ್ರಿ ಐಶ್ವರ್ಯಾ ಹೇಳಿಕೆ

‘ಸಂಘಿ’ ಅಲ್ಲ ‘ರಜನಿಕಾಂತ್‌’ ಬಗ್ಗೆ ಪುತ್ರಿ ಐಶ್ವರ್ಯಾ ಹೇಳಿಕೆ

- Advertisement -
- Advertisement -

ಚಿತ್ರ ಲಾಲ್ ಸಲಾಮ್‌ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್, ತಮ್ಮ ತಂದೆ ಬಿಜೆಪಿ ಮತ್ತು ಆರೆಸ್ಸೆಸ್‌ಗೆ ಬೆಂಬಲವಾಗಿದ್ದಾರೆ ಎಂಬ ಟೀಕೆಗಳ ವಿರುದ್ಧ ಪ್ರತಿಕ್ರಿಯಿಸಿದ್ದು, ಆತ ‘ಸಂಘಿ’ ಆಗಿದ್ದರೆ ಲಾಲ್‌ ಸಲಾಂ ಸಿನಿಮಾ ಮಾಡುತ್ತಿರಲಿಲ್ಲ ಎಂದೂ ಹೇಳಿದ್ದಾರೆ.

‘ಸಂಘಿ’ ಎಂಬುದು ಕೆಲವೊಮ್ಮೆ ಸಂಘಪರಿವಾರದ ಹಿಂದುತ್ವ ಸಿದ್ಧಾಂತದ ಬೆಂಬಲಿಗರ ವಿರುದ್ಧ ಬಳಸುವ ಪದವಾಗಿದೆ. ಇದೇ ಪದವನ್ನು ಐಶ್ವರ್ಯಾ ರಜನಿಕಾಂತ್ ಅವರು ಟ್ವೀಟ್‌ನಲ್ಲಿ ಬಳಸಿದ್ದು, ತಂದೆಯ ಪರ ಬೆಂಬಲವನ್ನು ಸೂಚಿಸಿದ್ದಾರೆ.

ಫೆಬ್ರವರಿ 9ರಂದು ಲಾಲ್ ಸಲಾಮ್‌ ಚಿತ್ರ ಬಿಡುಗಡೆಯಾಗಲಿದ್ದು, ಚಿತ್ರದಲ್ಲಿ ರಜನಿಕಾಂತ್ ಮುಸ್ಲಿಂ ಪಾತ್ರದ ‘ಮೊಯ್ದೀನ್ ಭಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.

ನಾನು ಸಾಮಾಜಿಕ ಮಾಧ್ಯಮದಿಂದ ದೂರವಿರಲು ಪ್ರಯತ್ನಿಸುತ್ತೇನೆ. ಆದರೆ ನನ್ನ ತಂಡವು ಜನರು ಏನು ಮಾತನಾಡುತ್ತಾರೆ ಎಂಬುದನ್ನು ನನಗೆ ತೋರಿಸುತ್ತಲೇ ಇರುತ್ತಾರೆ. ಇತ್ತೀಚೆಗ ರಜನಿಕಾಂತ್‌ಗೆ ಜನರು ‘ಸಂಘಿ’ ಎಂಬ ಒಂದು ಪದವನ್ನು ಹೇಳುತ್ತಿದ್ದಾರೆ ಮತ್ತು ಜನರು ಅವರನ್ನು ಏಕೆ ಆ ರೀತಿ ಕರೆಯುತ್ತಾರೆಂದು ನನಗೆ ಅರ್ಥವಾಗುತ್ತಿಲ್ಲ. ನಾನು ಇದನ್ನು ಹೇಳುತ್ತೇನೆ, ಸೂಪರ್‌ಸ್ಟಾರ್ ರಜನಿಕಾಂತ್ ‘ಸಂಘಿ’ ಅಲ್ಲ. ‘ಸಂಘಿ’ ಆಗಿದ್ದರೆ ಲಾಲ್ ಸಲಾಂ ಮಾಡುತ್ತಿರಲಿಲ್ಲ. ಈ ಸಿನಿಮಾವನ್ನು ಮಾನವೀಯತೆ ಇರುವ ವ್ಯಕ್ತಿಯಿಂದ ಮಾತ್ರ ಮಾಡಲು ಸಾಧ್ಯ ಎಂದು ಹೇಳಿದ್ದಾರೆ.

ಜನವರಿ 22ರಂದು ತಮಿಳು ನಟ ಧನುಷ್ ಮತ್ತು ರಜನಿಕಾಂತ್ ಅವರು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಇದು ವ್ಯಾಪಕ ಟೀಕೆ ಮತ್ತು ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಕೆಲವು ದಿನಗಳ ನಂತರ ಐಶ್ವರ್ಯಾ ರಜನಿಕಾಂತ್ ಅವರು ಸ್ಪಷ್ಟನೆ ನೀಡಿದ್ದಾರೆ. ಇದು ಸೂಪರ್‌ಸ್ಟಾರ್‌ನ ರಾಜಕೀಯ ಒಲವಿನ ಮೇಲೆ ಮತ್ತೆ ಗಮನ ಸೆಳೆಯಿತು. ತಮಿಳು ನಿರ್ದೇಶಕ ಪಾ ರಂಜಿತ್ ಅವರು ಈ ಕಾರ್ಯಕ್ರಮಕ್ಕೆ ಹಾಜರಾಗುವುದು ವೈಯಕ್ತಿಕ ಆಯ್ಕೆ ಎಂದು ಹೇಳಿದ್ದರು. 500 ವರ್ಷಗಳಷ್ಟು ಹಳೆಯದಾದ ಸಮಸ್ಯೆ ಕೊನೆಗೊಂಡಿದೆ. ಆದರೆ ಆ ಸಮಸ್ಯೆಯ ಹಿಂದಿನ ರಾಜಕೀಯವನ್ನು ನಾವು ಪ್ರಶ್ನಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ರಜನಿಕಾಂತ್ ತಮ್ಮ ಹಿಂದಿನ ಬ್ಲಾಕ್‌ಬಸ್ಟರ್ ‘ಜೈಲರ್’ ವಿಶೇಷ ಪ್ರದರ್ಶನದಲ್ಲಿ ಆಗಸ್ಟ್ 18ರಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಲಕ್ನೋದಲ್ಲಿ ಭಾಗವಹಿಸಿದ್ದರು. ಅವರು ಯೋಗಿಯ ಪಾದಗಳನ್ನು ಮುಟ್ಟಿ ನಮಸ್ಕರಿಸಿದ್ದರು. ಇದು ತಮಿಳುನಾಡಿನ ಜನರಿಂದ ವ್ಯಾಪಕವಾದ ಟೀಕೆಗೆ ಕಾರಣವಾಗಿತ್ತು. ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ರಜನಿಕಾಂತ್, ಯೋಗಿಗಳು ಮತ್ತು ಸನ್ಯಾಸಿಗಳು ನನಗಿಂತ ಚಿಕ್ಕವರಾಗಿದ್ದರೂ ಅವರ ಆಶೀರ್ವಾದಕ್ಕಾಗಿ ಅವರ ಪಾದಗಳನ್ನು ಸ್ಪರ್ಶಿಸುವುದು ಅಭ್ಯಾಸವಾಗಿದೆ ಎಂದು ಸಮರ್ಥಿಸಿದ್ದರು. ನವೆಂಬರ್ 2019 ರಲ್ಲಿ, ರಜನಿಕಾಂತ್ ಅವರು ಬಿಜೆಪಿಗೆ ಸೇರಲು ಆಹ್ವಾನದ ಕುರಿತ ಸುದ್ದಿಯನ್ನು ತಳ್ಳಿಹಾಕಿದ್ದರು. ಮಾಧ್ಯಮದ ಒಂದು ವಿಭಾಗ ಮತ್ತು ಕೆಲವು ವ್ಯಕ್ತಿಗಳು ಕೇಸರಿ ಬಣ್ಣ ಬಳಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದರು.

ಇದನ್ನು ಓದಿ: ಗಣರಾಜ್ಯೋತ್ಸವ ದಿನ ‘ಸೆಕ್ಯುಲರ್’, ‘ಸಮಾಜವಾದಿ’ ಪದವಿಲ್ಲದೆ ಸಂವಿಧಾನದ ಪೀಠಿಕೆ ಹಂಚಿಕೊಂಡ ಕೇಂದ್ರ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...