Homeಮುಖಪುಟನಟ ರಜನಿಕಾಂತ್ ಅವರ ಬಹುನಿರೀಕ್ಷಿತ ಹೊಸ ಪಕ್ಷ ಜನವರಿಯಲ್ಲಿ ಆರಂಭ

ನಟ ರಜನಿಕಾಂತ್ ಅವರ ಬಹುನಿರೀಕ್ಷಿತ ಹೊಸ ಪಕ್ಷ ಜನವರಿಯಲ್ಲಿ ಆರಂಭ

ನಿನ್ನೆ ನಟ ರಜನಿಕಾಂತ್ ತಮ್ಮ ರಜಿನಿ ಮಕ್ಕಳ್ ಮಂದ್ರಮ್ ವೇದಿಕೆಯ ಹಿರಿಯ ಪದಾಧಿಕಾರಿಗಳನ್ನು ಭೇಟಿಯಾಗಿದ್ದಾರೆ.

- Advertisement -
- Advertisement -

ಸೂಪರ್‌ಸ್ಟಾರ್ ರಜನಿಕಾಂತ್ ಜನವರಿಯಲ್ಲಿ ತಮ್ಮ ಹೊಸ ಪಕ್ಷವನ್ನು ಆರಂಭಿಸುವುದಾಗಿ ಅಧಿಕೃತ ಘೋಷಣೆ ಮಾಡಿದ್ದಾರೆ. ಪಕ್ಷ ಆರಂಭದ ವಿಚಾರಕ್ಕೆ ಸಂಬಂಧಿಸಿದ ವಿಚಾರಗಳನ್ನು ಡಿಸೆಂಬರ್‌ 31 ರಂದು ತಿಳಿಸಲಾಗುವುದು ಎಂದು ತಮ್ಮ ಟ್ವಿಟರ್‌ ಖಾತೆಯಲ್ಲಿ ದೃಢಪಡಿಸಿದ್ದಾರೆ.

ತಮಿಳುನಾಡು ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇರುವಾಗ ನಟ ರಜನಿಕಾಂತ್ ತಮ್ಮ ಹೊಸ ಪಕ್ಷವನ್ನು ಘೋಷಣೆ ಮಾಡುತ್ತಿದ್ದಾರೆ. ಈಗಾಗಲೇ ತಮಿಳುನಾಡಿನಲ್ಲಿ ಚುನಾವಣಾ ಕಣ ರಂಗೇರುತ್ತಿದೆ.

ನಿನ್ನೆ ನಟ ರಜನಿಕಾಂತ್ ತಮ್ಮ ರಜಿನಿ ಮಕ್ಕಳ್ ಮಂದ್ರಮ್ ವೇದಿಕೆಯ ಹಿರಿಯ ಪದಾಧಿಕಾರಿಗಳನ್ನು ಭೇಟಿಯಾದ್ದರು. ನಂತರ ಸುದ್ದಿಗಾರರೊಂದಿಗೆ ಚುನಾವಣಾ ರಾಜಕೀಯದ ಯೋಜನೆಗಳ ಕುರಿತು ಶೀಘ್ರದಲ್ಲೇ ನನ್ನ ನಿರ್ಧಾರವನ್ನು ಪ್ರಕಟಿಸುತ್ತೇನೆ ಎಂದು ಹೇಳಿದ್ದರು. ಇಂದು ಈ ಕುರಿತು ಅಧಿಕೃತ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಚುನಾವಣೆಯಲ್ಲಿ ಖಾತೆ ತೆರೆಯಲು ಬಿಜೆಪಿ ಶತಪ್ರಯತ್ನ!

“ಜಿಲ್ಲಾ ಪದಾಧಿಕಾರಿಗಳು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ನಾನು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಅವರ ಒಪ್ಪಿಗೆಯಿದೆ ಎಂದು ಹೇಳಿದ್ದಾರೆ. ನನ್ನ ನಿರ್ಧಾರವನ್ನು ಆದಷ್ಟು ಬೇಗ ಪ್ರಕಟಿಸುತ್ತೇನೆ” ಎಂದು ಚೆನ್ನೈನ ಪೋಯಸ್ ಗಾರ್ಡನ್ ನಿವಾಸದ ಹೊರಗೆ ಸುದ್ದಿಗಾರರಿಗೆ ತಿಳಿಸಿದ್ದರು.

ಕಳೆದ ತಿಂಗಳು, ಚುನಾವಣಾ ರಾಜಕೀಯಕ್ಕೆ ಅವರ ಪ್ರವೇಶ ವಿಳಂಬವಾಗಬಹುದು ಎಂದು ರಜನಿಕಾಂತ್ ಸುಳಿವು ನೀಡಿದ್ದರು. ನಟ ರಜನಿಕಾಂತ್‌ ಅವರಿಗೆ ಮೂತ್ರಪಿಂಡದ ಸಮಸ್ಯೆ ಇರುವುದರಿಂದ ಕೊರೊನಾ ಸೋಂಕಿಗೆ ಬೇಗ ಗುರಿಯಾಗಬಹುದು ಎಂಬ ಕಾರಣಕ್ಕೆ ಪ್ರಯಾಣ ಮಾಡದಂತೆ ವೈದ್ಯರು ಸೂಚಿಸಿದ್ದರು. ಆದರೆ, ಇವುಗಳೆಲ್ಲದರ ನಡುವೆಯೂ ನಟ ತಮ್ಮ ಪಕ್ಷವನ್ನು ಅಧಿಕೃತವಾಗಿ ಘೋಷಣೆ ಮಾಡುವುದಾಗಿ ಹೇಳಿದ್ದಾರೆ.

ಈಗಾಗಲೇ ತಮಿಳುನಾಡು ರಾಜಕೀಯದಲ್ಲಿ ನಟಿ, ರಾಜಕಾರಣಿ ಖುಷ್ಬೂ, ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿಗಳಾದ ಸಸಿಕಾಂತ್ ಸೆಂಥಿಲ್, ಅಣ್ಣಾಮಲೈ ಕೂಡ ರಾಜಕೀಯಕ್ಕೆ ಧುಮುಕಿದ್ದಾರೆ.

ಬಿಜೆಪಿ ತಮಿಳುನಾಡಿನಲ್ಲಿ ಸ್ಪಲ್ಪವಾದರೂ ಸ್ಥಾನ ಗಿಟ್ಟಿಸಿಕೊಳ್ಳಲು ವೆಟ್ರಿವೇಲ್ ಯಾತ್ರೆ ನಡೆಸಿ ಜನರಲ್ಲಿ ಧರ್ಮದ ರಾಜಕಾರಣ ಮಾಡಲು ಪ್ರಯತ್ನಿಸುತ್ತಿದೆ. ಇವುಗಳ ನಡುವೆ ನಟ ರಜನಿಕಾಂತ್ ಅವರ ಪಕ್ಷ ಯಾವ ರೀತಿಯ ಛಾಪು ಮೂಡಿಸಲು ಪ್ರಯತ್ನಿಸುವುದು ಎಂಬುದನ್ನು ನೋಡಬೇಕಾಗಿದೆ.


ಇದನ್ನೂ ಓದಿ: ವೆಟ್ರಿವೇಲ್ ಯಾತ್ರೆ: ಅನುಮತಿ ನಿರಾಕರಿಸಿದರೂ ಕೋಮುಪ್ರಚೋದನೆ ಆರಂಭಿಸಿದ ಬಿಜೆಪಿ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮುಂದುವರಿದ ಬಿಜೆಪಿ ನಾಯಕರ ದ್ವೇಷ ಭಾಷಣ; ‘ಕಾಂಗ್ರೆಸ್ ದೇಶದಲ್ಲಿ ಷರಿಯಾ ಕಾನೂನು ಜಾರಿಗೆ ತರಲಿದೆ’...

0
ಸಂಪತ್ತು ಮಹಿ ಹಂಚಿಕೆ ಕುರಿತು ದ್ವೇಷ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ನಂತರ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಮಂಗಳವಾರ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. 'ಕಾಂಗ್ರೆಸ್ ಪಕ್ಷವು...