Homeಮುಖಪುಟರಾಜೀವ್ ಗಾಂಧಿ ಖೇಲ್ ರತ್ನ ಇನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ: ಪ್ರಧಾನಿ

ರಾಜೀವ್ ಗಾಂಧಿ ಖೇಲ್ ರತ್ನ ಇನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ: ಪ್ರಧಾನಿ

- Advertisement -
- Advertisement -

ಭಾರತದ ಅತ್ಯುನ್ನತ ಕ್ರೀಡಾ ಗೌರವವಾದ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಇನ್ನು ಮುಂದೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಮರುನಾಮಕರಣ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಘೋಷಿಸಿದ್ದಾರೆ.

ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಮರುನಾಮಕರಣವು ಹಾಕಿ ಕ್ರೀಡೆಯ ದಂತಕಥೆ ಮೇಜರ್‌ ಧ್ಯಾನ್ ಚಂದ್ ಅವರನ್ನು ಗುರುತಿಸುತ್ತದೆ ಎಂದು ತಿಳಿಸಿದ್ದಾರೆ. ರಾಷ್ಟ್ರದಾದ್ಯಂತದ ಹಲವಾರು ಮನವಿಗಳನ್ನು ಬಮದ ಹಿನ್ನೆಲೆಯಲ್ಲಿ ಮರುನಾಮಕರಣ ಮಾಡಲಾಗಹಿದೆ ಎಂದು ಪ್ರಧಾನಿ ಹೇಳಿದ್ದಾರೆ.

“ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಎಂದು ಮರುನಾಮಕರಣ ಮಾಡಲು ಭಾರತದಾದ್ಯಂತ ಅನೇಕರಿಂದ ವಿನಂತಿಗಳನ್ನು ಪಡೆದಿದ್ದೇನೆ. ಅವರ ಅಭಿಪ್ರಾಯಗಳಿಗಾಗಿ ನಾನು ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: 41 ವರ್ಷಗಳ ಕಾಯುವಿಕೆ ಅಂತ್ಯ | ಕೊನೆಗೂ ಪದಕಕ್ಕೆ ಮುತ್ತಿಟ್ಟ ಭಾರತೀಯ ಹಾಕಿ ತಂಡ!

“ಅವರ ಭಾವನೆಯನ್ನು ಗೌರವಿಸಿ, ಈ ಮೂಲಕ ಖೇಲ್ ರತ್ನ ಪ್ರಶಸ್ತಿಯನ್ನು ಇನ್ನು ಮುಂದೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುತ್ತದೆ!” ಎಂದು ಪ್ರಧಾನ ಮಂತ್ರಿ ಟ್ವೀಟ್ ಮಾಡಿದ್ದಾರೆ.

’ಮೇಜರ್ ಧ್ಯಾನ್ ಚಂದ್ ಭಾರತದ ಅಗ್ರಗಣ್ಯ ಕ್ರೀಡಾಪಟುಗಳಲ್ಲಿ ಒಬ್ಬರು, ಅವರು ಭಾರತಕ್ಕೆ ಗೌರವ ಮತ್ತು ಹೆಮ್ಮೆಯನ್ನು ತಂದಿದ್ದಾರೆ. ನಮ್ಮ ರಾಷ್ಟ್ರದ ಅತ್ಯುನ್ನತ ಕ್ರೀಡಾ ಗೌರವಕ್ಕೆ ಅವರ ಹೆಸರನ್ನು ಇಡುವುದು ಸೂಕ್ತ’ ಎಂದು ಪ್ರಧಾನಿ ಹೇಳಿದ್ದಾರೆ.

’ಒಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತೀಯ ಆಟಗಾರರ ಅದ್ಭುತ ಪ್ರಯತ್ನಗಳಿಂದ ನಾವೆಲ್ಲರೂ  ಖುಷಿಪಟ್ಟಿದ್ದೇವೆ. ವಿಶೇಷವಾಗಿ ನಮ್ಮ ಮಕ್ಕಳು ಮತ್ತು ಹೆಣ್ಣು ಮಕ್ಕಳು ಹಾಕಿಯಲ್ಲಿ ತೋರಿಸಿದ ಇಚ್ಛಾಶಕ್ತಿ, ವಿಜಯದ ಕಡೆಗೆ ತೋರಿದ ಉತ್ಸಾಹವು ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಗೆ ಉತ್ತಮ ಸ್ಫೂರ್ತಿಯಾಗಿದೆ’ ಎಂದಿದ್ದಾರೆ.

ಶುಕ್ರವಾರ ಭಾರತ ಮಹಿಳಾ ಹಾಕಿ ತಂಡವು ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಉತ್ಸಾಹಭರಿತ ಪ್ರದರ್ಶನ ನೀಡಿ ಸೋಲು ಕಂಡಿದೆ. ಗುರುವಾರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿಗಾಗಿ ನಡೆದ ಪುರುಷರ ಹಾಕಿ ಪಂದ್ಯಾಟದಲ್ಲಿ ಭಾರತೀಯ ತಂಡವು ಜರ್ಮನಿ ವಿರುದ್ದ 5-4 ಅಂತರದಲ್ಲಿ ಗೆದ್ದು ಕೊಂಡಿತು. ಈ ಮೂಲಕ ಭಾರತೀಯ ತಂಡವು ಕಳೆದ 41 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದುಕೊಂಡಿದೆ.


ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ ಬಿಚ್ಚಿಟ್ಟ ರಾಣಿ ರಾಂಪಾಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಕಾ0ಗ್ರೆಸ್ ಮುಗಿಸ‌ಲು ಇದೂ ಒ0ದು ಕಾರ್ಯಕ್ರ‌ಮ‌.

    ಹಾಗೆಯೇ ಇ0ದಿರಾಗಾ0ಧಿ ಅ0ತ‌ರ್ ರಾಷ್ಟ್ರಿಯ‌ ವಿಮಾನ‌ನಿಲ್ದಾಣ‌ “ಹೆಡಿಗೆವಾರ್ ವಿಮಾನ‌ನಿಲ್ದಾಣ‌ವಾಗ‌ಲಿದೆ

    ಜ‌ವಾಹ‌ರಲಾಲ ಯುನಿವ‌ರ್ಸಿಟಿ “Vinayak Damodar Savarkar” ಯುನಿವ‌ರ್ಸಿಟಿ ಆಗ‌ಲಿದೆ

    ಹೀಗೆ ಕಾ0ಗ್ರೆಸ್ ನ‌ ಎಲ್ಲ‌ ಹೆಸ‌ರುಗ‌ಳು ರೆಪ್ಲೇಸ್ ಆಗ‌ಲಿವೆ.

LEAVE A REPLY

Please enter your comment!
Please enter your name here

- Advertisment -

Must Read

ಮುಂದುವರಿದ ಬಿಜೆಪಿ ನಾಯಕರ ದ್ವೇಷ ಭಾಷಣ; ‘ಕಾಂಗ್ರೆಸ್ ದೇಶದಲ್ಲಿ ಷರಿಯಾ ಕಾನೂನು ಜಾರಿಗೆ ತರಲಿದೆ’...

0
ಸಂಪತ್ತು ಮಹಿ ಹಂಚಿಕೆ ಕುರಿತು ದ್ವೇಷ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ನಂತರ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಮಂಗಳವಾರ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. 'ಕಾಂಗ್ರೆಸ್ ಪಕ್ಷವು...