Homeಮುಖಪುಟರಾಜೀವ್ ಗಾಂಧಿಯ ರಾಜಕೀಯ ಜೀವನ ಕ್ರೂರ ರೀತಿಯಲ್ಲಿ ಕೊನೆಗೊಂಡಿದೆ: ಸೋನಿಯಾ ಗಾಂಧಿ

ರಾಜೀವ್ ಗಾಂಧಿಯ ರಾಜಕೀಯ ಜೀವನ ಕ್ರೂರ ರೀತಿಯಲ್ಲಿ ಕೊನೆಗೊಂಡಿದೆ: ಸೋನಿಯಾ ಗಾಂಧಿ

- Advertisement -
- Advertisement -

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ತನ್ನ ಅಲ್ಪಾವಧಿಯ ರಾಜಕೀಯ ಜೀವನದಲ್ಲಿ ಬಹುದೊಡ್ಡ ಸಾಧನೆಯನ್ನು ಮಾಡಿದ್ದು, ಅವರ ರಾಜಕೀಯ ಜೀವನವನ್ನು ಅತ್ಯಂತ ಕ್ರೂರವಾಗಿ ಅಂತ್ಯಗೊಳಿಸಲಾಯಿತು ಎಂದು ಕಾಂಗ್ರೆಸ್ ಮಾಜಿ ಅಧ್ಯೆಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

25ನೇ ರಾಜೀವ್ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ  ದಿವಂಗತ ರಾಜೀವ್ ಗಾಂಧಿ ಅವರ ಪತ್ನಿ ಸೋನಿಯಾ ಗಾಂಧಿ, ರಾಜೀವ್ ಅವರ ರಾಜಕೀಯ ಜೀವನವು “ಅತ್ಯಂತ ಕ್ರೂರ ರೀತಿಯಲ್ಲಿ” ಕೊನೆಗೊಂಡಿತು. ಆದರೆ ಅವರು ಅಲ್ಪಾವಧಿಯಲ್ಲಿ ಹಲವಾರು ಸಾಧನೆಗಳನ್ನು ಮಾಡಿದ್ದಾರೆ. ಮಹಿಳಾ ಸಬಲೀಕರಣ ಸೇರಿದಂತೆ ದೇಶದ ಸೇವೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ರಾಜೀವ್ ಗಾಂಧಿ ಅಲ್ಪಾವಧಿಯಲ್ಲಿ ಅನೇಕ ಮೈಲಿಗಲ್ಲುಗಳನ್ನು ಸಾಧಿಸಿದರು. ಅವರು ದೇಶದ ವೈವಿಧ್ಯತೆಯ ಬಗ್ಗೆ ಬಹಳ ಸಂವೇದನಾಶೀಲರಾಗಿದ್ದರು. ಮಹಿಳಾ ಸಬಲೀಕರಣ ಮಾಡಿದ್ದಾರೆ. ಪಂಚಾಯತ್ ಮತ್ತು ಪುರಸಭೆಗಳಲ್ಲಿ 1/3 ಮಹಿಳಾ ಮೀಸಲಾತಿಗಾಗಿ ಅವರು ಹೋರಾಟ ಮಾಡಿದರು. ಇದರಿಂದಾಗಿ ಇಂದು 15 ಲಕ್ಷಕ್ಕೂ ಹೆಚ್ಚು ಚುನಾಯಿತ ಮಹಿಳಾ ಪ್ರತಿನಿಧಿಗಳು ಗ್ರಾಮೀಣ ಮತ್ತು ನಗರ ಸಂಸ್ಥೆಗಳಲ್ಲಿ ಇದ್ದಾರೆ. ಅದು ರಾಜೀವ್ ಗಾಂಧಿಯವರ ಕಠಿಣ ಪರಿಶ್ರಮ ಮತ್ತು ದೂರದೃಷ್ಟಿಯಿಂದ ಮಾತ್ರ ಸಾಧ್ಯವಾಗಿದೆ ಎಂದು ಅವರು ಹೇಳಿದ್ದಾರೆ. ತಮ್ಮ ಸರ್ಕಾರವು ಮತದಾನದ ವಯಸ್ಸನ್ನು 21 ವರ್ಷದಿಂದ 18 ವರ್ಷಕ್ಕೆ ಇಳಿಸಿದೆ ಎಂದು ಸೋನಿಯಾ ಗಾಂಧಿ ಇದೇ ವೇಳೆ ಹೇಳಿದ್ದಾರೆ.

1984ರಲ್ಲಿ ತಮ್ಮ ತಾಯಿ ಮತ್ತು ಆಗಿನ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯ ನಂತರ ರಾಜೀವ್ ಗಾಂಧಿ ಅವರು ಕಾಂಗ್ರೆಸ್ ನ ನಾಯಕತ್ವ ವಹಿಸಿಕೊಂಡರು. ಅಕ್ಟೋಬರ್ 1984ರಲ್ಲಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಾಗ ಅವರಿಗೆ 40 ವರ್ಷ ವಯಸ್ಸಾಗಿತ್ತು. ಅವರು ಭಾರತದ  ಅತ್ಯಂತ ಕಿರಿಯ ಪ್ರಧಾನಿ ಎಂಬ ಹೆಸರನ್ನು ಗಳಿಸಿದರು. ಅವರು ಡಿಸೆಂಬರ್ 2, 1989 ರವರೆಗೆ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು ಎಂದು ಹೇಳಿದ್ದಾರೆ.

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...