Homeರಾಷ್ಟ್ರೀಯನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ರಾಜೀನಾಮೆ

ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ರಾಜೀನಾಮೆ

- Advertisement -
- Advertisement -

ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಅವರು ತನ್ನ ಸ್ಥಾನಕ್ಕೆ ಹಠಾತ್ ರಾಜೀನಾಮೆಯ ನೀಡಿದ್ದಾರೆ. ಇದರ ನಂತರ ಒಕ್ಕೂಟ ಸರ್ಕಾರವು ಸುಮನ್ ಕೆ. ಬೆರಿ ಅವರನ್ನು ಆಯೋಗದ ಉಪಾಧ್ಯಕ್ಷರನ್ನಾಗಿ ಶುಕ್ರವಾರ ನೇಮಿಸಿದೆ. ಬೆರಿ ಅವರು ಮೇ 1, 2022 ರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಅಧಿಕೃತ ಆದೇಶ ತಿಳಿಸಿದೆ. ರಾಜೀವ್ ಕುಮಾರ್ ಅವರ ಅಧಿಕಾರಾವಧಿ ಏಪ್ರಿಲ್ 30ಕ್ಕೆ ಕೊನೆಗೊಳ್ಳಲಿದೆ.

ಖ್ಯಾತ ಅರ್ಥಶಾಸ್ತ್ರಜ್ಞರಾದ ರಾಜೀವ್‌‌ ಕುಮಾರ್ ಅವರು 2017ರ  ಆಗಸ್ಟ್ ತಿಂಗಳಲ್ಲಿ ನೀತಿ ಆಯೋದಗದ ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಅವರಿಗೂ ಮುಂಚೆ ಅರವಿಂದ್ ಪನಗಾರಿಯಾ ಅವರು ನೀತಿ ಆಯೋಗದ ಉಪಾಧ್ಯಕ್ಷರಾಗಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸರ್ಕಾರದ ಆದೇಶದ ಪ್ರಕಾರ, ರಾಜೀವ್‌ ಕುಮಾರ್ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದ್ದು, ಏಪ್ರಿಲ್ 30 ರಿಂದ ಜಾರಿಗೆ ಬರುವಂತೆ ಅವರನ್ನು ಹುದ್ದೆಯಿಂದ ಬಿಡುಗಡೆ ಮಾಡಲಾಗುತ್ತದೆ.

ಇದನ್ನೂ ಓದಿ: ಉಕ್ರೇನ್‌ ಸಂಘರ್ಷ & ದೆಹಲಿ ಗಲಭೆಗಳ ಪ್ರಸಾರದ ಕುರಿತು ಟಿವಿ ಚಾನೆಲ್‌ಗಳಿಗೆ ‘ಸಲಹೆ’ ನೀಡಿದ ಒಕ್ಕೂಟ ಸರ್ಕಾರ!

ಕೃಷಿ, ಆಸ್ತಿ ಹಣಗಳಿಕೆ, ಹೂಡಿಕೆ, ಎಲೆಕ್ಟ್ರಿಕ್ ವಾಹನಗಳ ಮೇಲೆ ಕೇಂದ್ರೀಕರಿಸಿ ನೀತಿ ಆಯೋಗದ ನೀತಿ ರಚನೆಯಲ್ಲಿ ರಾಜೀವ್‌ ಕುಮಾರ್ ಪ್ರಮುಖ ಪಾತ್ರ ವಹಿಸಿದ್ದರು. ಅವರು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಿಂದ ಅರ್ಥಶಾಸ್ತ್ರದಲ್ಲಿ ಡಿಪಿಲ್ ಮತ್ತು ಲಕ್ನೋ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪಡೆದಿದ್ದಾರೆ.

ರಾಜೀವ್‌ ಕುಮಾರ್‌ ಅವರು ಸೆಂಟರ್ ಫಾರ್ ಪಾಲಿಸಿ ರಿಸರ್ಚ್ (ಸಿಪಿಆರ್) ನಲ್ಲಿ ಹಿರಿಯ ಸಹೋದ್ಯೋಗಿಯಾಗಿದ್ದರು.

ಹೊಸದಾಗಿ ಅಧಿಕಾರ ವಹಿಸುತ್ತಿರುವ ಸುಮನ್ ಕೆ. ಬೆರಿ ಅವರು ಈ ಹಿಂದೆ ನವದೆಹಲಿಯ ನ್ಯಾಷನಲ್ ಕೌನ್ಸಿಲ್ ಆಫ್ ಅಪ್ಲೈಡ್ ಎಕನಾಮಿಕ್ ರಿಸರ್ಚ್ (NCAER) ನ ಡೈರೆಕ್ಟರ್-ಜನರಲ್ (ಮುಖ್ಯ ಕಾರ್ಯನಿರ್ವಾಹಕ) ಆಗಿ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ರೈಲಿನಲ್ಲಿ ದ್ವೇಷ ಹರಡುವ ಪತ್ರಿಕೆ ವಿತರಣೆ: ತನಿಖೆ ಪ್ರಾರಂಭಿಸಿದ ರೈಲ್ವೇ ಇಲಾಖೆ

ಅವರು ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ, ಅಂಕಿಅಂಶ ಆಯೋಗ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್‌ನ ಹಣಕಾಸು ನೀತಿಯ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರೂ ಆಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...

ಸಚಿವ ಸತೀಶ್ ಜಾರಕಿಹೊಳಿ, ಪುತ್ರಿ ಪ್ರಿಯಾಂಕಾ ನಿವಾಸಗಳ ಮೇಲೆ ಇಡಿ ದಾಳಿ: 18ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ

ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಪುತ್ರಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸೇರಿದ ನಿವಾಸಗಳು ಮತ್ತು ಆಸ್ತಿಪಾಸ್ತಿಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ)...

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...