Homeಮುಖಪುಟರಾಜ್‌ಕೋಟ್‌ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್‌ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ

ರಾಜ್‌ಕೋಟ್‌ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್‌ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ

'ಅತ್ಯಾಚಾರಿಗಳಿಗೆ ಹಾರ ಹಾಕಿದ ಬಿಜೆಪಿಯವರೇ ಪ್ರತಿದಿನ ವಂದೇ ಮಾತರಂ ಎಂದು ಕೂಗುತ್ತಾರೆ..'

- Advertisement -
- Advertisement -

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಏಳು ವರ್ಷದ ಬಾಲಕಿ ಅತ್ಯಾಚಾರ ಹಾಗೂ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್‌ ಮೇವಾನಿ; ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಘಟನೆ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಅವರು, “ರಾಜ್‌ಕೋಟ್‌ನಲ್ಲಿ ನಡೆದ ಭೀಕರ ಘಟನೆಯಿಂದ ಹೃದಯ ವಿದ್ರಾವಕವಾಗಿದ್ದು, ಕೋಪ ಹುಟ್ಟುಹಾಕಿದೆ. 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಕಬ್ಬಿಣದ ರಾಡ್‌ನಿಂದ ಕ್ರೂರವಾಗಿ ಹಲ್ಲೆ ಮಾಡಲಾಗಿದೆ. ಆರೋಪಿಗೆ ಕಾನೂನಿನಡಿಯಲ್ಲಿ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಇಂತಹ ಅಪರಾಧಗಳನ್ನು ತಡೆಯುವ ವಿಷಯದಲ್ಲಿ ಗುಜರಾತ್ ಸರ್ಕಾರ ಮತ್ತು ಪೊಲೀಸರು ಎಲ್ಲಿದ್ದರು? ಇದು ಮತ್ತೆ ಮತ್ತೆ ಸಂಭವಿಸಲು ಯಾವ ರೀತಿಯ ವ್ಯವಸ್ಥೆ ಅವಕಾಶ ನೀಡುತ್ತದೆ? ಇದನ್ನು ನಾವು ಮರೆಯಬಾರದು: ಬಿಲ್ಕಿಸ್ ಬಾನೋ ಅತ್ಯಾಚಾರಿಗಳಿಗೆ ಹಾರ ಹಾಕಿದ ಅದೇ ಬಿಜೆಪಿಯ ಇದೇ ಜನರು ಪ್ರತಿದಿನ ‘ವಂದೇ ಮಾತರಂ’ ಎಂದು ಕೂಗುತ್ತಾರೆ. ಆದರೆ, ಈ ನೈಜ ವಿಷಯಗಳ ಬಗ್ಗೆ ಬಾಯಿ ಮುಚ್ಚಿರುತ್ತಾರೆ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

“ನಮ್ಮ ‘ಮಾ’ ಮಾತೃಭೂಮಿಯಾಗಿದ್ದರೆ, ನಿಜವಾದ ಮಾತೆ ನಮ್ಮ ಸಮಾಜದ ಮಹಿಳೆಯರು. ಹುಡುಗಿಯರು ಕೂಡ. ಅವರು ಗುಜರಾತ್‌ನಲ್ಲಿ ಸುರಕ್ಷಿತವಾಗಿಲ್ಲ, ಅದು ವಂದೇ ಮಾತರಂಗೆ ಮಾಡಿದ ದೊಡ್ಡ ಅವಮಾನ” ಎಂದು ಅವರು ಹೇಳಿದ್ದಾರೆ.

ಘಟನೆ ಹಿನ್ನಲೆ:

ಏಳು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಎರಡು ದಿನಗಳ ಹಿಂದೆ ನಡೆದಿತ್ತು. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ ಕೃಷಿ ಕಾರ್ಮಿಕನನ್ನು ಬಂಧಿಸುವ ಮೂಲಕ ಪೊಲೀಸರು ಆರೋಪಿಯನ್ನು ಅಲ್ಪಸಮಯದಲ್ಲೇ ಪತ್ತೆಹಚ್ಚಿದ್ದಾರೆ.

ದಾಹೋದ್ ಜಿಲ್ಲೆಯಲ್ಲಿ ಕುಟುಂಬವೊಂದು ಕೃಷಿ ಕಾರ್ಮಿಕರಾಗಿ ಕೆಲಸ ಮಾಡುತ್ತಿತ್ತು. ಡಿಸೆಂಬರ್ 4 ರಂದು ಮಗು ಹೊಲದ ಬಳಿ ಆಟವಾಡುತ್ತಿದ್ದಾಗ ಆಕೆಯ ಪೋಷಕರು ಹತ್ತಿರದಲ್ಲಿ ಕೆಲಸ ಮಾಡುತ್ತಿದ್ದರು. ಅಪರಿಚಿತ ವ್ಯಕ್ತಿಯೊಬ್ಬರು ಆಕೆಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಗು ಕಿರುಚಿದಾಗ, ದಾಳಿಕೋರ ಆಕೆಯ ಖಾಸಗಿ ಭಾಗಕ್ಕೆ ಲೋಹದ ರಾಡ್ ಅನ್ನು ತುರುಕಿ ತೀವ್ರ ರಕ್ತಸ್ರಾವವಾಗುವಂತೆ ಗಾಯಗೊಳಿಸಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದ.

ಕುಟುಂಬವು ಆಕೆಯನ್ನು ಹುಡುಕಲು ಪ್ರಾರಂಭಿಸಿತು, ಆಕೆ ಹೊಲದ ಬಳಿ ಗಾಯಗೊಂಡಿರುವುದು ಕಂಡುಬಂದಿದೆ. ಕೂಡಲೇ ಮಗುವನ್ನು ರಾಜ್‌ಕೋಟ್‌ನ ಜನ್ನಾ ಆಸ್ಪತ್ರೆಗೆ ಸಾಗಿಸಲಾಯಿತು. ಆಸ್ಪತ್ರೆ ಮೂಲಗಳ ಪ್ರಕಾರ, ಆಕೆಯ ಸ್ಥಿತಿ ಪ್ರಸ್ತುತ ಸ್ಥಿರವಾಗಿದ್ದು, ಮುಂದಿನ ಎರಡು ಮೂರು ದಿನಗಳಲ್ಲಿ ಆಕೆಯನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪುಸ್ತಕ ಮನೆʼಯ ಅಂಕೇಗೌಡ ಸೇರಿ ರಾಜ್ಯದ ಮೂವರಿಗೆ ಪದ್ಮಶ್ರೀ ಪ್ರಶಸ್ತಿ

ಕರ್ನಾಟಕದ ಮೂವರು ಸೇರಿದಂತೆ ದೇಶದ ಒಟ್ಟು 45 ಸಾಧಕರನ್ನು 2026ನೇ ಸಾಲಿನ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ. ಮಂಡ್ಯ ಮೂಲದ ಪುಸ್ತಕ ಪ್ರೇಮಿ ಅಂಕೇಗೌಡ, ದಾವಣಗೆರೆಯ ಹಿಮೋಫಿಲಿಯಾ ಸೊಸೈಟಿಯ ವೈದ್ಯ...

ದೆಹಲಿ ಲೆಫ್ಟಿನೆಂಟ್ ಗವರ್ನರ್ ಮಾನನಷ್ಟ ಪ್ರಕರಣ : ಹೋರಾಟಗಾರ್ತಿ ಮೇಧಾ ಪಾಟ್ಕರ್ ಖುಲಾಸೆ

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು 20 ವರ್ಷಗಳ ಹಿಂದಿನ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನು ದೆಹಲಿ ನ್ಯಾಯಾಲಯ ಶನಿವಾರ (ಜ.24) ಖುಲಾಸೆಗೊಳಿಸಿದೆ ಎಂದು ಬಾರ್...

ಆರ್‌ಜೆಡಿ ರಾಷ್ಟ್ರೀಯ ಕಾರ್ಯಕಾರಿ ಸಭೆ; ಕಾರ್ಯಕಾರಿ ಅಧ್ಯಕ್ಷರಾಗಿ ತೇಜಸ್ವಿ ನೇಮಕ

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಅವರ ಕಿರಿಯ ಪುತ್ರ ತೇಜಸ್ವಿ ಯಾದವ್ ಅವರನ್ನು, ಇಂದು (ಜ.25) ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಪಕ್ಷದ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. 'ಮಹಾಘಟಬಂಧನ್' 36...

ಹಿಂದುತ್ವ ಗುಂಪಿನಿಂದ ಕಿರುಕುಳ : ಪಿಜ್ಜಾ ಔಟ್‌ಲೆಟ್‌ನ ಎರಡನೇ ಮಹಡಿಯಿಂದ ಜಿಗಿದ ಜೋಡಿ

ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಹಿಂದುತ್ವ ಗುಂಪು ಕಿರುಕುಳ ನೀಡಿದ್ದರಿಂದ ಜೋಡಿಯೊಂದು ಪಿಜ್ಜಾ ಔಟ್‌ಲೆಟ್‌ನ ಎರಡನೇ ಮಹಡಿಯಿಂದ ಜಿಗಿದಿದ್ದು, ಈ ಸಂಬಂಧ ಎಂಟು ಮಂದಿಯ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ದಿ ನ್ಯೂ...

ಹಿಂದಿ ಚಿತ್ರಗಳು ತಮ್ಮ ಬೇರುಗಳನ್ನು ಕಳೆದುಕೊಂಡಿವೆ, ಹಣ ಆಧಾರಿತವಾಗಿವೆ: ಪ್ರಕಾಶ್ ರಾಜ್

ದೃಢ, ವಿಷಯಾಧಾರಿತ ಕಥೆ ನಿರೂಪಣೆಯಿಂದ ಪ್ರಶಂಸಿಸಲಾದ ಮಲಯಾಳಂ ಮತ್ತು ತಮಿಳು ಸಿನಿಮಾಗಳಿಗಿಂತ ಭಿನ್ನವಾಗಿ, ಹಿಂದಿ ಸಿನಿಮಾ ತನ್ನ ಬೇರುಗಳನ್ನು ಕಳೆದುಕೊಂಡಿದೆ. ಹೆಚ್ಚು ಹೆಚ್ಚು ನಕಲಿ ಮತ್ತು ಹಣ-ಆಧಾರಿತವಾಗುತ್ತಿದೆ ಎಂದು ನಟ ಪ್ರಕಾಶ್ ರಾಜ್...

ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂ. ದರೋಡೆ: ಏನಿದು ಪ್ರಕರಣ..ಬೆಳಗಾವಿ ಎಸ್ಪಿ ಹೇಳಿದ್ದೇನು?

ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಯಲ್ಲಿರುವ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಚೋರ್ಲಾ ಘಾಟ್‌ನಲ್ಲಿ ಬರೋಬ್ಬರಿ 400 ಕೋಟಿ ರೂಪಾಯಿ ಹಣ ಸಾಗಿಸುತ್ತಿದ್ದ ಕಂಟೇನರ್‌ಗಳನ್ನು ದರೋಡೆ ಮಾಡಲಾಗಿದೆ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ...

‘ಅಲೈಡ್ ಹೆಲ್ತ್ ಕೋರ್ಸ್‌ಗಳ ನೀಟ್ ಪರೀಕ್ಷೆಯಿಂದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ..’; ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ಅಲೈಡ್ ಹೆಲ್ತ್ ಕೋರ್ಸ್‌ಗಳ ಪ್ರವೇಶದಿಂದ ಹೊರಗಿಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು...

ಬಾಂಗ್ಲಾದೇಶ| ಗ್ಯಾರೇಜ್ ಒಳಗೆ ಮಲಗಿದ್ದ ಹಿಂದೂ ಯುವಕ ಜೀವಂತ ದಹನ

ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ನರಸಿಂಗ್ಡಿಯಲ್ಲಿ ಗ್ಯಾರೇಜ್ ಒಳಗೆ ಮಲಗಿದ್ದ 23 ವರ್ಷದ ಹಿಂದೂ ವ್ಯಕ್ತಿ ಜೀವಂತವಾಗಿ ದಹನಗೊಂಡ ಘಟನೆ ನಡೆದಿದ್ದು, ಈ ಘಟನೆಯು ರಾಷ್ಟ್ರೀಯ ಚುನಾವಣೆಗೂ ಮುನ್ನ...

ಚುನಾವಣಾ ಆಯೋಗ ನಿರಂತರ ಒತ್ತಡ ಎದುರಿಸುತ್ತಿದೆ, ಅದರ ಸ್ವಾತಂತ್ರ್ಯ ರಕ್ಷಿಸಬೇಕಿದೆ : ಮಲ್ಲಿಕಾರ್ಜುನ ಖರ್ಗೆ

ಇತ್ತೀಚಿನ ದಿನಗಳಲ್ಲಿ, ಚುನಾವಣಾ ಆಯೋಗದಂತಹ ಸಂಸ್ಥೆಗಳು ನಿರಂತರ ಒತ್ತಡವನ್ನು ಎದುರಿಸುತ್ತಿವೆ. ಆದ್ದರಿಂದ ಪ್ರಜಾಪ್ರಭುತ್ವವು ಕೇವಲ ಉಳಿಯುವುದಲ್ಲದೆ, ನಿಜವಾಗಿಯೂ ಅಭಿವೃದ್ಧಿ ಹೊಂದುವಂತೆ ಅವುಗಳ ಸ್ವಾತಂತ್ರ್ಯವನ್ನು ರಕ್ಷಿಸುವುದು 'ನಮ್ಮ ಜವಾಬ್ದಾರಿ' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...

ಗುಜರಾತ್ ಸೇರಿದಂತೆ ಇತರ ರಾಜ್ಯಗಳಲ್ಲಿ ‘ಮತ ಕಳ್ಳತನ’ಕ್ಕೆ ಎಸ್‌ಐಆರ್‌ ಬಳಕೆ: ರಾಹುಲ್ ಗಾಂಧಿ

ದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ ಕುರಿತ ತಮ್ಮ ವಾಗ್ದಾಳಿಯನ್ನು ಲೋಕಸಭೆ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತೀವ್ರಗೊಳಿಸಿದ್ದಾರೆ. ಗುಜರಾತ್ ಸೇರಿದಂತೆ ಇತರ ರಾಜ್ಯಗಳಲ್ಲಿ...