Homeಮುಖಪುಟ101 ರಕ್ಷಣಾ ವಸ್ತುಗಳ ಆಮದು ನಿಷೇಧ: ರಕ್ಷಣಾ ಸಚಿವ ರಾಜನಾಥ್ ಸಿಂಗ್

101 ರಕ್ಷಣಾ ವಸ್ತುಗಳ ಆಮದು ನಿಷೇಧ: ರಕ್ಷಣಾ ಸಚಿವ ರಾಜನಾಥ್ ಸಿಂಗ್

ಫಿರಂಗಿ ಬಂದೂಕುಗಳು, ಆಕ್ರಮಣಕಾರಿ ಬಂದೂಕುಗಳು, ಕಾರ್ವೆಟ್‌ಗಳು, ಸೋನಾರ್ ವ್ಯವಸ್ಥೆಗಳು, ಸಾರಿಗೆ ವಿಮಾನಗಳು, ಲಘು ಯುದ್ಧ ಹೆಲಿಕಾಪ್ಟರ್‌ಗಳು, ರಾಡಾರ್‌ಗಳು ಮತ್ತು ಇತರ ಅನೇಕ ವಸ್ತುಗಳು ವಸ್ತುಗಳು ಆಮದು ನಿರ್ಬಂಧ ಪಟ್ಟಿಯಲ್ಲಿ ಸೇರಿವೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಆತ್ಮ ನಿರ್ಭಾರ ಭಾರತ (ಸ್ವಾವಲಂಬಿ ಭಾರತ) ಧ್ಯೇಯದ ಪ್ರಕಾರ ‘ಸ್ಥಳೀಯ ಉತ್ಪಾದನೆಯನ್ನು ಹೆಚ್ಚಿಸಲು ರಕ್ಷಣಾ ಸಚಿವಾಲಯವು 101 ವಸ್ತುಗಳನ್ನು ಆಮದು ಮಾಡಿಕೊಳ್ಳುವುದನ್ನು ನಿರ್ಬಂಧಿಸಲಾಗುವುದು ಎಂದು ಕೇಂದ್ರ ರಕ್ಷಣಾ ಸಚಿವ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಮುಂದಿನ 6-7 ವರ್ಷಗಳಲ್ಲಿ ದೇಶೀಯ ಉದ್ಯಮವು ಸುಮಾರು 4 ಲಕ್ಷ ಕೋಟಿ ಮೌಲ್ಯದ ಒಪ್ಪಂದಗಳನ್ನು ಪಡೆಯಲಿದೆ. ಈ ನಿರ್ಬಂಧವನ್ನು 2020 ಮತ್ತು 2024 ರ ನಡುವೆ ಹಂತ ಹಂತವಾಗಿ ಜಾರಿಗೊಳಿಸಲಾಗುವುದು ಎಂದು ರಕ್ಷಣಾ ಸಚಿವರು ಹೇಳಿದ್ದಾರೆ.

 

ಸಶಸ್ತ್ರ ಪಡೆ, ಸಾರ್ವಜನಿಕ ಮತ್ತು ಖಾಸಗಿ ಉದ್ಯಮ ಸೇರಿದಂತೆ ಎಲ್ಲಾ ಮಧ್ಯಸ್ಥಗಾರರೊಂದಿಗೆ ಸಮಾಲೋಚಿಸಿದ ನಂತರ ಈ ಪಟ್ಟಿಯನ್ನು ರಕ್ಷಣಾ ಸಚಿವಾಲಯ ಸಿದ್ಧಪಡಿಸಿದೆ ಎಂದು ಹೇಳಿದೆ.

“ಈ ನಿರ್ಧಾರವು ಭಾರತೀಯ ರಕ್ಷಣಾ ಉದ್ಯಮಕ್ಕೆ ತಮ್ಮದೇ ಆದ ವಿನ್ಯಾಸ ಮತ್ತು ಅಭಿವೃದ್ಧಿ ಸಾಮರ್ಥ್ಯಗಳನ್ನು ಬಳಸಿಕೊಂಡು, ನಿರ್ಬಂಧದ ಪಟ್ಟಿಯಲ್ಲಿರುವ ವಸ್ತುಗಳನ್ನು ತಯಾರಿಸಲು ಅಥವಾ ಅಗತ್ಯತೆಗಳನ್ನು ಪೂರೈಸಲು ಡಿಆರ್‌ಡಿಒ ವಿನ್ಯಾಸಗೊಳಿಸಿದ ಮತ್ತು ಅಭಿವೃದ್ಧಿಪಡಿಸಿದ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಉತ್ತಮ ಅವಕಾಶವನ್ನು ನೀಡುತ್ತದೆ” ಎಂದು ಸಚಿವರು ಹೇಳಿದ್ದಾರೆ.

ಫಿರಂಗಿ ಬಂದೂಕುಗಳು, ಆಕ್ರಮಣಕಾರಿ ಬಂದೂಕುಗಳು, ಕಾರ್ವೆಟ್‌ಗಳು, ಸೋನಾರ್ ವ್ಯವಸ್ಥೆಗಳು, ಸಾರಿಗೆ ವಿಮಾನಗಳು, ಲಘು ಯುದ್ಧ ಹೆಲಿಕಾಪ್ಟರ್‌ಗಳು, ರಾಡಾರ್‌ಗಳು ಮತ್ತು ಇತರ ಅನೇಕ ವಸ್ತುಗಳು ವಸ್ತುಗಳು ಆಮದು ನಿರ್ಬಂಧ ಪಟ್ಟಿಯಲ್ಲಿ ಸೇರಿವೆ.


ಇದನ್ನೂ ಓದಿ: 5 ರಫೇಲ್ ಯುದ್ಧವಿಮಾನಗಳ ಆಗಮನ: ಚೀನಾ ಹೆಸರಿಸದೆ ಎಚ್ಚರಿಕೆ ಕೊಟ್ಟ ರಾಜನಾಥ್‌ಸಿಂಗ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಚುನಾವಣೆಯನ್ನು ನಿಯಂತ್ರಿಸಲು ಸಾಧ್ಯವಿಲ್ಲ..’; ಇವಿಎಂ-ವಿವಿಪ್ಯಾಟ್ ಪರಿಶೀಲನೆ ಆದೇಶವನ್ನು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

0
'ಇವಿಎಂ-ವಿವಿಪ್ಯಾಟ್ ಪರಿಶೀಲನಾ ಅರ್ಜಿ' ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ಕಾಯ್ದಿರಿಸಿದ್ದು, 'ಮತ್ತೊಂದು ಸಾಂವಿಧಾನಿಕ ಪ್ರಾಧಿಕಾರದಿಂದ ನಡೆಸಬೇಕಾದ ಚುನಾವಣೆಗಳನ್ನು ನಿಯಂತ್ರಿಸಲು ಸಾಧ್ಯವಿಲ್ಲ' ಎಂದು ನ್ಯಾಯಾಲಯವು ಹೇಳಿತು. 2024ರ ಲೋಕಸಭಾ ಚುನಾವಣೆಯ ಎರಡನೇ ಹಂತವು...