Homeಮುಖಪುಟರಾಜ್ಯಸಭೆ: ಸೋನಿಯಾ ಗಾಂಧಿ ಸೇರಿದಂತೆ 14 ಜನರಿಂದ ಪ್ರಮಾಣ ವಚನ ಸ್ವೀಕಾರ

ರಾಜ್ಯಸಭೆ: ಸೋನಿಯಾ ಗಾಂಧಿ ಸೇರಿದಂತೆ 14 ಜನರಿಂದ ಪ್ರಮಾಣ ವಚನ ಸ್ವೀಕಾರ

- Advertisement -
- Advertisement -

ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸೇರಿದಂತೆ 14 ಮಂದಿ ಗುರುವಾರ ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ನೂತನ ಸಂಸತ್ ಭವನದಲ್ಲಿ ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು.

ಸೋನಿಯಾ ಗಾಂಧಿ ಅವರು ರಾಜಸ್ಥಾನದ ಮೇಲ್ಮನೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ವೈಷ್ಣವ್ ಒಡಿಶಾದಿಂದ ಅದೇ ಸದನದ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಕರ್ನಾಟಕದಿಂದ ಕಾಂಗ್ರೆಸ್ ನಾಯಕರಾದ ಅಜಯ್ ಮಾಕನ್ ಮತ್ತು ಸೈಯದ್ ನಸೀರ್ ಹುಸೇನ್, ಉತ್ತರ ಪ್ರದೇಶದ ಬಿಜೆಪಿ ನಾಯಕ ಆರ್ ಪಿಎನ್ ಸಿಂಗ್ ಮತ್ತು ಪಶ್ಚಿಮ ಬಂಗಾಳದ ಬಿಜೆಪಿ ಸದಸ್ಯ ಸಮಿಕ್ ಭಟ್ಟಾಚಾರ್ಯ ಸೇರಿದಂತೆ 14 ಮಂದಿ ರಾಜ್ಯಸಭೆಯಲ್ಲಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ಜೆಡಿಯುನ ಸಂಜಯ್ ಕುಮಾರ್ ಝಾ ಬಿಹಾರದ ಸದಸ್ಯರಾಗಿಯೂ, ಬಿಜೆಡಿಯ ಸುಭಾಶಿಶ್ ಖುಂಟಿಯಾ ಮತ್ತು ದೇಬಾಶಿಶ್ ಸಮಂತರಾಯರೂ ಒಡಿಶಾದಿಂದ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಬಿಜೆಪಿಯ ಮದನ್ ರಾಥೋಡ್ ಅವರು ರಾಜಸ್ಥಾನವನ್ನು ಪ್ರತಿನಿಧಿಸುವ ಆರ್‌ಎಸ್‌ಎಸ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ವೈಎಸ್‌ಆರ್‌ಸಿಪಿ ನಾಯಕರಾದ ಗೊಲ್ಲ ಬಾಬುರಾವ್, ಮೇದಾ ರಘುನಾಥ ರೆಡ್ಡಿ, ಯರ್ರಂ ವೆಂಕಟ ಸುಬ್ಬಾ ರೆಡ್ಡಿ ಮತ್ತು ತೆಲಂಗಾಣದ ಬಿಆರ್‌ಎಸ್ ಮುಖಂಡ ರವಿಚಂದ್ರ ವಡ್ಡಿರಾಜು ಅವರು ಆಂಧ್ರಪ್ರದೇಶ ರಾಜ್ಯವನ್ನು ಪ್ರತಿನಿಧಿಸುವ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನಂತರ ಅವರೆಲ್ಲರೂ ರಾಜ್ಯಸಭಾ ಅಧ್ಯಕ್ಷರೊಂದಿಗೆ ಗುಂಪು ಛಾಯಾಚಿತ್ರ ತೆಗೆಸಿಕೊಂಡರು. ಒಡಿಶಾ ಮತ್ತು ರಾಜಸ್ಥಾನದ ಸದಸ್ಯರ ಅವಧಿ ಗುರುವಾರದಿಂದ ಆರಂಭವಾಗಿದೆ ಎಂದು ರಾಜ್ಯಸಭಾ ಕಾರ್ಯದರ್ಶಿಗಳು ತಿಳಿಸಿದೆ. ಉಳಿದವರೆಲ್ಲರೂ ಬುಧವಾರ ತಮ್ಮ ಅಧಿಕಾರಾವಧಿಯನ್ನು ಪ್ರಾರಂಭಿಸಿದರು.

ಸೋನಿಯಾ ಗಾಂಧಿ ಅವರು ಮೊದಲ ಬಾರಿಗೆ ರಾಜ್ಯಸಭಾ ಸದಸ್ಯರಾದರು. ಸಭಾನಾಯಕ ಪಿಯೂಷ್ ಗೋಯಲ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನ ಸ್ವೀಕಾರ ಸಂದರ್ಭದಲ್ಲಿ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಉಪಸ್ಥಿತರಿದ್ದರು. ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ಮತ್ತು ಪ್ರಧಾನ ಕಾರ್ಯದರ್ಶಿ ಪಿಸಿ ಮೋದಿ ಉಪಸ್ಥಿತರಿದ್ದರು.

ಇದನ್ನೂ ಓದಿ; ವಿಷಕಾರಿ ಹಾವನ್ನಾದರೂ ನಂಬಬಹುದು, ಕೇಸರಿ ಶಿಬಿರವನ್ನು ನಂಬುವುದಕ್ಕೆ ಸಾಧ್ಯವಿಲ್ಲ: ಮಮತಾ ಬ್ಯಾನರ್ಜಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...