Homeಕರ್ನಾಟಕರಾಜ್ಯಸಭೆ: ಬಿಜೆಪಿ ಅಭ್ಯರ್ಥಿಯಾಗಿ ಡಾ.ಕೆ.ನಾರಾಯಣ ಆಯ್ಕೆ

ರಾಜ್ಯಸಭೆ: ಬಿಜೆಪಿ ಅಭ್ಯರ್ಥಿಯಾಗಿ ಡಾ.ಕೆ.ನಾರಾಯಣ ಆಯ್ಕೆ

ಇವರು ಸ್ಪ್ಯಾನ್ ಪ್ರಿಂಟ್ ಎಂಬ‌ ಮುದ್ರಣ ಸಂಸ್ಥೆ ಹೊಂದಿದ್ದು, ಬಿಜೆಪಿ ಮತ್ತು ಸಂಘ ಪರಿವಾರದ ಕರಪತ್ರಗಳನ್ನು ಮುದ್ರಿಸಿ ಕೊಡುತ್ತಿದ್ದರು

- Advertisement -
- Advertisement -

ಕರ್ನಾಟಕದ ರಾಜ್ಯಸಭಾ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಡಾ.ಕೆ.ನಾರಾಯಣ ಆಯ್ಕೆಯಾಗಿದ್ದು, ಅಶೋಕ್ ಗಸ್ತಿಯವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಗೆ ಇವರನ್ನು ಅಯ್ಕೆ ಮಾಡಲಾಗಿದೆ. ಈ ಸ್ಥಾನಕ್ಕೆ ಡಿಸಂಬರ್ 1 ರಂದು ಉಪಚುನಾವಣೆ ನಡೆಯಲಿದೆ.

ಈ ಕುರಿತು ಟ್ವೀಟ್ ಮಾಡಿರುವ ಡಾ.ಸುಧಾಕರ್, “ಕರ್ನಾಟಕದಿಂದ ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಡಾ.ಕೆ.ನಾರಾಯಣ (ಸ್ಪ್ಯಾನ್ ಪ್ರಿಂಟ್) ಅವರಿಗೆ ಹ್ರತ್ಪೂರ್ವಕ ಅಭಿನಂದನೆಗಳು” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿಯ 58 ದೇಶಗಳ ಭೇಟಿಗೆ 517 ಕೋಟಿ ವೆಚ್ಚ: ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರ

ಬೆಂಗಳೂರಿನಲ್ಲಿರುವ ಡಾ.ಕೆ.ನಾರಾಯಣ ದೇವಾಂಗ ಸಮುದಾಯದಕ್ಕೆ ಸೇರಿದವರಾಗಿದ್ದು, ಮುದ್ರಣ ಉದ್ಯಮ ನಡೆಸುತ್ತಿದ್ದಾರೆ.‌ ಸ್ಪ್ಯಾನ್ ಪ್ರಿಂಟ್ ಎಂಬ‌ ಮುದ್ರಣ ಸಂಸ್ಥೆ ಹೊಂದಿದ್ದು, ಬಿಜೆಪಿ ಮತ್ತು ಸಂಘ ಪರಿವಾರದ ಕರಪತ್ರಗಳನ್ನು ಮುದ್ರಿಸಿ ಕೊಡುತ್ತಿದ್ದರು.‌ ಬೆಂಗಳೂರಿನಲ್ಲಿ 1982ರಲ್ಲಿ ಮೊದಲ ಬಾರಿಗೆ ಮಲ್ಟಿ ಕಲರ್‌ ಪ್ರಿಂಟಿಂಗ್‌ ತಂತ್ರಜ್ಞಾನವನ್ನು ಪರಿಚಯಿಸಿ, 25 ವರ್ಷಗಳಿಂದ ಸಂಸ್ಕೃತ ಮಾಸ ಪತ್ರಿಕೆ ‘ಸಂಭಾಷಣ ಸಂದೇಶ’ವನ್ನು ಪ್ರಕಟಿಸುತ್ತಿದ್ದಾರೆ. ಹಿಂದೂ ಸೇವಾ ಪ್ರತಿಷ್ಠಾನದ ಖಜಾಂಚಿ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ಇವರಿಗೆ ಗೌರವ ಡಾಕ್ಟರೇಟ್ ಕೂಡ‌ ಬಂದಿದೆ.

ಇದನ್ನೂ ಓದಿ: ರಾಜ್ಯಸಭೆಯಲ್ಲಿ ಖರ್ಗೆ ಗಟ್ಟಿ ದನಿಯಾಗಲಿದ್ದಾರೆ: ನಾಮಪತ್ರ ಸಲ್ಲಿಕೆ ವೇಳೆ ಸಿದ್ದು ಹೇಳಿಕೆ

ರಾಜ್ಯಸಭೆ ಉಪಚುನಾವಣೆಗೆ ನವೆಂಬರ್‌ 18ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ನ.19 ರಂದು ನಾಮಪತ್ರ ಪರಿಶೀಲನೆ ಪ್ರಕ್ರಿಯೆ ನಡೆಯಲಿದೆ. ನಾಮಪತ್ರ ಹಿಂದಕ್ಕೆ ಪಡೆಯಲು ನ.23 ಕೊನೆಯ ದಿನವಾಗಿದೆ.

ಜೂನ್‌ 19ರಂದು ನಡೆಯಬೇಕಿದ್ದ ಕರ್ನಾಟಕದ ನಾಲ್ಕು ಸ್ಥಾನಗಳ ರಾಜ್ಯಸಭಾ ಚುನಾಚಣೆಯು ನಾಲ್ಕಕ್ಕಿಂತ ಹೆಚ್ಚು ನಾಮಪತ್ರಗಳು ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ನಿರೀಕ್ಷೆಯಿಂತೆ ಎಲ್ಲರೂ (ಕಾಂಗ್ರೆಸ್‌ನಿಂದ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್‌ನಿಂದ ಹೆಚ್.ಡಿ. ದೇವೇಗೌಡ ಮತ್ತು ಬಿಜೆಪಿಯ ಅಭ್ಯರ್ಥಿಗಳಾದ ಈರಣ್ಣ ಕಡಾಡಿ ಮತ್ತು ಅಶೋಕ ಗಸ್ತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅಧಿಕೃತವಾಗಿ ಘೋಷಿಸಿದ್ದರು.

ಇದನ್ನೂ ಓದಿ: ನೂತನ ಬಿಜೆಪಿ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ (55) ಕೊರೊನಾದಿಂದ ನಿಧನ

ಇವರಲ್ಲಿ ಬಿಜೆಪಿಯಿಂದ ಆಯ್ಕೆಯಾಗಿದ್ದ ಸಂಸದ ಅಶೋಕ್ ಗಸ್ತಿ (55) ಕೊರೊನಾದಿಂದ ಸೆಪ್ಟಂಬರ್ 17 ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಹಾಗಾಗಿ ಈ ಸ್ಥಾನಕ್ಕೆ ಈಗ ಉಪಚುನಾವಣೆ ನಡೆಯಲಿದೆ.


ಇದನ್ನೂ ಓದಿ: ಯಯಾತಿ, ಯಡಿಯೂರಪ್ಪ ಮತ್ತು ಬಿಜೆಪಿ: ಮುಂದಿನ ನಾಯಕತ್ವದ ಪ್ರಶ್ನೆಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...