Homeಕರ್ನಾಟಕರಾಜ್ಯಸಭೆ ಅವಹೇಳನ ಆರೋಪ: ರಂಜನ್‌ ಗೊಗೊಯ್‌‌ ವಿರುದ್ಧ ನೋಟಿಸ್ ಸಲ್ಲಿಕೆ

ರಾಜ್ಯಸಭೆ ಅವಹೇಳನ ಆರೋಪ: ರಂಜನ್‌ ಗೊಗೊಯ್‌‌ ವಿರುದ್ಧ ನೋಟಿಸ್ ಸಲ್ಲಿಕೆ

- Advertisement -
- Advertisement -

ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಭಾರತದ ಮಾಜಿ ಸಿಜೆಐ, ರಾಜ್ಯಸಭಾ ಸದಸ್ಯ ರಂಜನ್ ಗೊಗೊಯ್ ಅವರ ನೀಡಿದ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಸಂಸತ್ತಿನಲ್ಲಿ ವಿಶೇಷ ಹಕ್ಕು ನೋಟಿಸ್‌ಗೆ ಕಾರಣವಾಗಿವೆ.

“ನನಗೆ ಅನಿಸಿದಾಗಲೆಲ್ಲಾ ನಾನು ರಾಜ್ಯಸಭೆಗೆ ಹೋಗುತ್ತೇನೆ” ಎಂದು ನ್ಯಾಯಮೂರ್ತಿ ಗೊಗೊಯ್ ಎನ್‌ಡಿಟಿವಿಗೆ ಸಂದರ್ಶನದಲ್ಲಿ ಹೇಳುತ್ತಾ ತಮ್ಮ ಆತ್ಮಚರಿತ್ರೆಯಾದ “ಜಸ್ಟೀಸ್ ಫಾರ್ ದಿ ಜಡ್ಜ್” ಕುರಿತು ಮಾತನಾಡಿದ್ದರು.

“ನ್ಯಾಯಮೂರ್ತಿ ಗೊಗೊಯ್ ಅವರ ಹೇಳಿಕೆಗಳು ರಾಜ್ಯಸಭೆಯನ್ನು ಅವಹೇಳನ ಮಾಡಿವೆ. ಸದನದ ಘನತೆಗೆ ಧಕ್ಕೆ ತರುತ್ತದೆ ಮತ್ತು ವಿಶೇಷ ಹಕ್ಕುಗಳ ಉಲ್ಲಂಘನೆಯಾಗಿದೆ” ಎಂದು ತೃಣಮೂಲ ಕಾಂಗ್ರೆಸ್ ನೋಟೀಸ್ ಸಲ್ಲಿಸಿದೆ. ರಂಜನ್‌ ಗೊಗೊಯ್‌ ನೀಡಿದ ವಿವಾದಾತ್ಮಕ ಹೇಳಿಕೆಗಳನ್ನು ಈ ನೋಟಿಸ್‌ ಪ್ರಸ್ತಾಪಿಸಿದೆ.

“ಒಂದು ಅಥವಾ ಎರಡು ಸೆಷನ್‌ಗಳಿಗೆ ಕೋವಿಡ್‌ ಕಾರಣದಿಂದಾಗಿ (ವೈದ್ಯಕೀಯ ಸಲಹೆಯ ಆಧಾರದ ಮೇಲೆ) ನಾನು ಅಧಿವೇಶನಕ್ಕೆ ಹಾಜರಾಗಿಲ್ಲ. ಇವತ್ತಿಗೂ ನಾನು ಈ ವಿಚಾರವಾಗಿ ಆರಾಮವಾಗಿ ಇಲ್ಲ ಎನ್ನುತ್ತೇನೆ. ಸಾರ್ವಜನಿಕ ಅಂತರದ ನಿಯಮಗಳನ್ನು ಜಾರಿಗೊಳಿಸಲಾಗಿದೆ, ಆದರೆ ಅವುಗಳನ್ನು ಪಾಲಿಸಲಾಗುತ್ತಿಲ್ಲ. ಕುಳಿತುಕೊಳ್ಳಲು ಮಾಡಲಾಗಿರುವ ವ್ಯವಸ್ಥೆ ನನಗೆ ಆರಾಮದಾಯಕವೆನಿಸುತ್ತಿಲ್ಲ. ಇದನ್ನು ಒತ್ತು ಹೇಳುವುದಾದರೆ ನಾನು ರಾಜ್ಯಸಭಾಕ್ಕೆ ನನಗೆ ಅನಿಸಿದಾಗ ಹೋಗುತ್ತೇನೆ” ಎಂದಿದ್ದರು ಗೊಗೊಯ್‌.

ಮುಂದುವರಿದು, “ಅತ್ಯಂತ ಮಹತ್ವದ ವಿಷಯಗಳ ಬಗ್ಗೆ ಮಾತನಾಡಬೇಕು ಎಂದು ನಾನು ಭಾವಿಸಿದಾಗ ಹೋಗುತ್ತೇನೆ. ನಾನು ನಾಮನಿರ್ದೇಶಿತ ಸದಸ್ಯ, ಯಾವುದೇ ಪಕ್ಷದ ವಿಪ್‌ಗೆ ನಾನು ಒಳಪಡುವುದಿಲ್ಲ. ಪಕ್ಷದ ಸದಸ್ಯರಿಗೆ ಬರಲು ಸೂಚಿಸಿದಾಗ ಅದು ನನಗೆ ಅನ್ವಯವಾಗುವುದಿಲ್ಲ. ನಾನು ನನ್ನ ಆಯ್ಕೆಯ ಮೇರೆಗೆ ಅಲ್ಲಿಗೆ ಹೋಗುತ್ತೇನೆ ಮತ್ತು ನನ್ನ ಆಯ್ಕೆಯ ಮೇಲೆ ಹೊರಬರುತ್ತೇನೆ” ಎಂದು ನ್ಯಾಯಮೂರ್ತಿ ಗೊಗೊಯ್ ಸಂದರ್ಶನದಲ್ಲಿ ಹೇಳಿದ್ದರು.

ನ್ಯಾಯಮೂರ್ತಿ ಗೊಗೊಯ್ ಅವರು ರಾಜ್ಯಸಭೆಗೆ ನಾಮನಿರ್ದೇಶನಗೊಂಡಾಗಿನಿಂದ ಅವರು ಅತ್ಯಂತ ಕಡಿಮೆ ಹಾಜರಾತಿ ಹೊಂದಿದ್ದಾರೆ ಎಂದು ಸಂದರ್ಶನದಲ್ಲಿ ಪ್ರಶ್ನಿಸಲಾಗಿತ್ತು. ಮಾರ್ಚ್ 2020ರಿಂದ ಈವರೆಗೆ ನಡೆದ ಎಲ್ಲಾ ಸಭೆಗಳಲ್ಲಿ ಶೇಕಡಾ 10ಕ್ಕಿಂತ ಕಡಿಮೆ ಹಾಜರಾತಿ ಹೊಂದಿದ್ದಾರೆ ಎಂದು ಸಂಸತ್ತಿನ ದಾಖಲೆಗಳು ತೋರಿಸುತ್ತವೆ.

ಸುಪ್ರೀಂ ಕೋರ್ಟ್‌ನಿಂದ ನಿವೃತ್ತರಾದ ನಾಲ್ಕು ತಿಂಗಳ ನಂತರ ರಾಜ್ಯಸಭೆಗೆ ಸೇರುವ ತಮ್ಮ ನಿರ್ಧಾರವನ್ನು ನ್ಯಾಯಮೂರ್ತಿ ಗೊಗೊಯ್ ತೆಗೆದುಕೊಂಡರು. ಇತ್ತೀಚೆಗೆ ಪ್ರಕಟಿಸಲಾಗಿರುವ ಅವರ ಆತ್ಮಚರಿತ್ರೆಯಲ್ಲೂ ಅದನ್ನು ಸಮರ್ಥಿಸಿಕೊಂಡಿದ್ದಾರೆ. ತಾನು ಸೇರಿರುವ ನ್ಯಾಯಾಂಗ ಮತ್ತು ಈಶಾನ್ಯ ಪ್ರದೇಶದ ಸಮಸ್ಯೆಗಳನ್ನು ಪ್ರಸ್ತಾಪಿಸಲು ಬಯಸಿದ್ದರಿಂದ ಹಿಂಜರಿಕೆಯಿಲ್ಲದೆ ಈ ಸ್ಥಾನವನ್ನು ಒಪ್ಪಿಕೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿರಿ: ನೀವು ಡಿನ್ನರ್‌ಗೆ ಹೋಗುವುದಿಲ್ಲವೇ?: ಅಯೋಧ್ಯೆ ತೀರ್ಪಿತ್ತ ದಿನದ ನಡೆ ಸಮರ್ಥಿಸಿಕೊಂಡ ನಿವೃತ್ತ ಸಿಜೆಐ ರಂಜನ್ ಗೊಗೊಯ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...