Homeಕರ್ನಾಟಕರಾಜ್ಯಸಭಾ ಚುನಾವಣೆ: ಕರ್ನಾಟಕದಿಂದ ಖರ್ಗೆ, ದೇವೇಗೌಡರು ಸೇರಿ ನಾಲ್ವರ ಅವಿರೋಧ ಆಯ್ಕೆ

ರಾಜ್ಯಸಭಾ ಚುನಾವಣೆ: ಕರ್ನಾಟಕದಿಂದ ಖರ್ಗೆ, ದೇವೇಗೌಡರು ಸೇರಿ ನಾಲ್ವರ ಅವಿರೋಧ ಆಯ್ಕೆ

- Advertisement -
- Advertisement -

ಜೂನ್‌ 19ರಂದು ನಡೆಯಬೇಕಿದ್ದ ಕರ್ನಾಟಕದ ನಾಲ್ಕು ಸ್ಥಾನಗಳ ರಾಜ್ಯಸಭಾ ಚುನಾಚಣೆಯು ನಾಲ್ಕಕ್ಕಿಂತ ಹೆಚ್ಚು ನಾಮಪತ್ರಗಳು ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ನಿರೀಕ್ಷೆಯಿಂತೆ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅಧಿಕೃತವಾಗಿ ಘೋಷಿಸಿದ್ದಾರೆ.

ಈ ನಿಟ್ಟಿನಲ್ಲಿ ಕಾಂಗ್ರೆಸ್‌ನಿಂದ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್‌ನಿಂದ ಹೆಚ್.ಡಿ. ದೇವೇಗೌಡ ಮತ್ತು ಬಿಜೆಪಿಯ ಅಭ್ಯರ್ಥಿಗಳಾದ ಈರಣ್ಣ ಕಡಾಡಿ ಮತ್ತು ಅಶೋಕ ಗಸ್ತಿಯವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಯಲ್ಲಿ ಸದ್ಯಕ್ಕೆ 222 ಸ್ಥಾನಗಳಿದ್ದು, ಎರಡು ಸ್ಥಾನಗಳು ಖಾಲಿ ಉಳಿದಿವೆ. ಒಬ್ಬ ಅಭ್ಯರ್ಥಿ ಗೆಲ್ಲಲು ಪ್ರಥಮ ಪ್ರಾಸಶ್ತ್ಯದ 48 ಮತಗಳ ಅಗತ್ಯವಿತ್ತು. ಜೆಡಿಎಸ್‌ 34, ಕಾಂಗ್ರೆಸ್‌ 68, ಬಿಜೆಪಿ 117, ಬಿಎಸ್‌ಪಿ 01 ಮತ್ತು 03 ಸ್ವತಂತ್ರ ಶಾಸಕರಿದ್ದಾರೆ. ಕಾಂಗ್ರೆಸ್‌ ಮಲ್ಲಿಕಾರ್ಜುನ ಖರ್ಗೆಯವರ ಜೊತೆಗೆ ಉಳಿದ ಮತಗಳನ್ನು ಜೆಡಿಎಸ್‌ನ ದೇವೇಗೌಡರಿಗೆ ನೀಡುವುದಾಗಿ ಮೊದಲೇ ಘೋಷಿಸಿತ್ತು. ನಾಲ್ಕು ಸ್ಥಾನಗಳಿಗೆ ನಾಲ್ಕು ನಾಮಪತ್ರಗಳು ಮಾತ್ರ ಸಲ್ಲಿಕೆಯಾದ್ದರಿಂದ ಚುನಾವಣೆ ನಡೆಸದೇ ಅವಿರೋಧ ಆಯ್ಕೆ ಮಾಡಲಾಗಿದೆ.

ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಈ ಕುರಿತ ಹೇಳಿಕೆ ನೀಡಿದ್ದು, “ರಾಜ್ಯಸಭಾ ಚುನಾವಣೆ-2020ರಲ್ಲಿ ಕರ್ನಾಟಕದಲ್ಲಿ ನಾಲ್ಕೂ ಜನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯಸಭೆ ಫಲಿತಾಂಶ ಘೋಷಣೆಯಾದ ನಂತರ ಬಿಜೆಪಿ ಪಕ್ಷದ ಅಭ್ಯರ್ಥಿಗಳಾದ ಈರಣ್ಣ ಕಡಾಡಿ, ಅಶೋಕ ಗಸ್ತಿ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಮಲ್ಲಿಕಾರ್ಜುನ ಖರ್ಗೆ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಂದ ಅಧಿಕೃತ ಘೋಷಣೆ ಪತ್ರವನ್ನ ಪಡೆದುಕೊಂಡಿದ್ದಾರೆ.

ನಂತರ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆಯವರು, ರಾಜ್ಯದ- ದೇಶದ ಸಮಸ್ಯೆಗಳನ್ನು ಸಮರ್ಥವಾಗಿ ಸಂಸತ್ತಿನಲ್ಲಿ ಪ್ರಸ್ತಾಪಿಸುತ್ತೇನೆ. ಆ ಮೂಲಕ ಜನಪರವಾಗಿ ಕೆಲಸ ಮಾಡುತ್ತೇನೆ ಎಂದಿದಾರೆ.

ಸೋನಿಯಾ ಗಾಂಧಿ ಅವರು ನನ್ನ ಮೇಲೆ ನಂಬಿಕೆ ಇಟ್ಟು ರಾಜ್ಯಸಭೆಗೆ ಕಳುಹಿಸಿದ್ದಾರೆ. ಅವರಿಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತೇನೆ ಎಂದಿದ್ದಾರೆ.

ಇನ್ನು ಬಿಜೆಪಿಯವರು ನನ್ನ ಆಯ್ಕೆಯನ್ನು ಹಿಂಭಾಗಿಲಿನ ಮೂಲಕ ರಾಜ್ಯಸಭೆಗೆ ಪ್ರವೇಶಿಸಿದ್ದಾರೆ ಎಂದು ಆರೋಪಿಸಿದ್ದಾರೆ. ನೇರವಾಗಿ ನನ್ನಷ್ಟು ವರ್ಷ ವಿಧಾನಸಭೆಗೆ ಆಯ್ಕೆಯಾದವರು ಬಿಜೆಪಿಯಲ್ಲಿ ಯಾರಿದ್ದಾರೆ ಎಂದು ಹೇಳಲಿ ಎಂದು ಸವಾಲು ಹಾಕಿದ್ದಾರೆ. ಬಿಜೆಪಿಯವರು ನನ್ನಷ್ಟು ವರ್ಷ ರಾಜಕಾರಣ ಮಾಡಲು ಅವಕಾಶ ಕೊಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.


ಇದನ್ನೂ ಓದಿ: ರಾಜಸ್ಥಾನದಲ್ಲಿ ಶಾಸಕರ ಖರೀದಿಗೆ ಮುಂದಾದ ಬಿಜೆಪಿ: ನಿಮ್ಮ ಬಳಿ ಸಂಖ್ಯೆಗಳಿವೆಯೇ ಎಂದ ಕಾಂಗ್ರೆಸ್‌ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...