Homeಮುಖಪುಟರಾಜ್ಯಸಭಾ ಚುನಾವಣೆ: ಸಾಕೇತ್ ಗೋಖಲೆ ಸೇರಿದಂತೆ 6 ಜನರ ಹೆಸರು ಸೂಚಿಸಿದ ಟಿಎಂಸಿ

ರಾಜ್ಯಸಭಾ ಚುನಾವಣೆ: ಸಾಕೇತ್ ಗೋಖಲೆ ಸೇರಿದಂತೆ 6 ಜನರ ಹೆಸರು ಸೂಚಿಸಿದ ಟಿಎಂಸಿ

- Advertisement -
- Advertisement -

ಮುಂಬರುವ ರಾಜ್ಯಸಭಾ ಚುನಾವಣೆಗೆ ಸೋಮವಾರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ತನ್ನ ರಾಷ್ಟ್ರೀಯ ವಕ್ತಾರ ಸಾಕೇತ್ ಗೋಖಲೆ ಸೇರಿದಂತೆ 6 ಜನರ ಹೆಸರನ್ನು ಅಭ್ಯರ್ಥಿಗಳಾಗಿ ಸೂಚಿಸಿದೆ.

ಸಾಕೇತ್ ಗೋಖಲೆ ಜೊತೆಗೆ ಟಿಎಂಸಿ ರಾಜ್ಯಸಭಾ ಸಂಸದ ಡೆರೆಕ್ ಒ’ಬ್ರೇನ್, ಸಂಸದರಾದ ಡೋಲಾ ಸೇನ್, ಸುಖೇಂದು ಶೇಖರ್ ರೇ, ಟಿಎಂಸಿ ಸದಸ್ಯರಾದ ಸಮೀರುಲ್ ಇಸ್ಲಾಂ ಮತ್ತು ಪ್ರಕಾಶ್ ಚಿಕ್ ಬರಾಕ್ ಅವರನ್ನು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಹೆಸರಿಸಿದೆ.

ಓ’ಬ್ರೇನ್, ಸೇನ್ ಮತ್ತು ರೇಗೆ ಇದು ಪುನರಾವರ್ತಿತ ಆಯ್ಕೆಯಾಗಿದೆ. ಆದರೆ ಗೋಖಲೆಯವರು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ನಾಮನಿರ್ದೇಶನಗೊಂಡಿರುವುದು ಇದೇ ಮೊದಲು. ಗೋಖಲೆ ಅವರ ಜೊತೆಗೆ, ಇತರ ಇಬ್ಬರು ಹೊಸ ಮುಖಗಳು ಇಸ್ಲಾಂ, ಬಾಂಗ್ಲಾ ಸಂಸ್ಕೃತಿ ಮಂಚ ಅಧ್ಯಕ್ಷ ಸಮೀರುಲ್ ಇಸ್ಲಾಂ ಮತ್ತು ಟಿಎಂಸಿಯ ಅಲಿಪುರ್ದೂರ್ ಜಿಲ್ಲಾ ಅಧ್ಯಕ್ಷ ಪ್ರಕಾಶ್ ಚಿಕ್ ಬರಾಕ್ ನಾಮನಿರ್ದೇಶನಗೊಂಡಿದ್ದಾರೆ.

”ಮುಂಬರುವ ರಾಜ್ಯಸಭಾ ಚುನಾವಣೆಗೆ ಸಂಸದ ಡೆರೆಕ್ ಒ’ಬ್ರೇನ್, ಸಂಸದ ಡೋಲಾ ಸೇನ್, ಸುಖೇಂದು ಶೇಖರ್ ರೇ, ಸಮೀರುಲ್ ಇಸ್ಲಾಂ, ಪ್ರಕಾಶ್ ಚಿಕ್ ಬರಾಕ್ ಮತ್ತು ಸಾಕೇತ್ ಗೋಖಲೆ ಅವರ ಉಮೇದುವಾರಿಕೆಯನ್ನು ಘೋಷಿಸಲು ನಾವು ಬಹಳ ಸಂತೋಷಪಡುತ್ತೇವೆ. ಅವರು ಜನರಿಗೆ ಇನ್ನಷ್ಟು ಸೇವೆ ಸಲ್ಲಿಸುವುದನ್ನು ಮುಂದುವರೆಸಲಿ. ಎಲ್ಲರಿಗೂ ನಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತೇವೆ” ಎಂದು ಟಿಎಂಸಿ ಟ್ವೀಟ್ ಮಾಡಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರಿಗೆ ಟ್ವೀಟ್ ಮಾಡಿ ಕೃತಜ್ಞತೆ ಸಲ್ಲಿಸಿದ ಗೋಖಲೆ ಅವರು, ”ನನ್ನ ಮೇಲಿನ ನಂಬಿಕೆ ಮತ್ತು ರಾಜಕೀಯೇತರ ಹಿನ್ನೆಲೆಯಿಂದ ಬಂದ ಮಧ್ಯಮ ವರ್ಗದ ಯುವಕನಿಗೆ ಈ ಅವಕಾಶವನ್ನು ನೀಡಿದ್ದಕ್ಕಾಗಿ ನಾನು ಅವರಿಗೆ ಕೃತಜ್ಞನಾಗಿದ್ದೇನೆ. ಅವರು ನನ್ನ ಶಕ್ತಿಯ ಮೂಲವಾಗಿದ್ದಾರೆ, ಸಾರ್ವಜನಿಕ ಸೇವೆಗಾಗಿ ನನ್ನ ಸ್ಫೂರ್ತಿ ಮತ್ತು ಕಠಿಣ ಸಮಯದಲ್ಲಿ ನನ್ನ ಮತ್ತು ನನ್ನ ಕುಟುಂಬಕ್ಕೆ ಬೆಂಬಲವಾಗಿ ನಿಂತ ಗಟ್ಟಿಯಾದ ಕಂಬಗಳಾಗಿದ್ದಾರೆ” ಎಂದು ಹೇಳಿದ್ದಾರೆ.

ಓ’ಬ್ರೇನ್ ಅವರನ್ನು ”ಮಾರ್ಗದರ್ಶಿ ಮತ್ತು ರಕ್ಷಾಕವಚ” ಎಂದು ಗೋಖಲೆ ಕರೆದಿದ್ದಾರೆ. ”ಡೆರೆಕ್ ಒ’ಬ್ರೇನ್ ಅವರು ನನಗೆ ರಾಜಕೀಯದ ಪಾಠವನ್ನು ಕಲಿಸಿದ್ದಾರೆ ಮತ್ತು ಜೀವನದ ಪ್ರತಿ ಹಂತದಲ್ಲೂ ನನ್ನ ಸಲಹೆಗಾರರಾಗಿದ್ದಾರೆ” ಎಂದು ಗೋಖಲೆ ಹೇಳಿದ್ದಾರೆ.

”ಓ’ಬ್ರೇನ್, ರೇ ಮತ್ತು ಸೇನ್ ಅವರಲ್ಲದೆ, ಕಾಂಗ್ರೆಸ್ ಸಂಸದ ಪ್ರದೀಪ್ ಭಟ್ಟಾಚಾರ್ಯ, ಟಿಎಂಸಿಯ ಅಸ್ಸಾಂ ನಾಯಕಿ ಸುಶ್ಮಿತಾ ದೇವ್ ಮತ್ತು ಅದರ ಡಾರ್ಜಿಲಿಂಗ್ ನಾಯಕಿ ಶಾಂತಾ ಛೆಟ್ರಿ ಅವರ ಅಧಿಕಾರಾವಧಿ ಕೊನೆಗೊಂಡಿದ್ದು, ಈ ಸ್ಥಾನಗಳು ಇದೀಗ ಒಟ್ಟು ಆರು ಸ್ಥಾನಗಳು ಖಾಲಿಯಾದವು.

ಗೋವಾದ ಮಾಜಿ ಮುಖ್ಯಮಂತ್ರಿ ಲುಜಿನ್ಹೋ ಫಲೈರೊ ಏಪ್ರಿಲ್‌ನಲ್ಲಿ ಟಿಎಂಸಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಪಶ್ಚಿಮ ಬಂಗಾಳದಿಂದ ಏಳನೇ ರಾಜ್ಯಸಭಾ ಸ್ಥಾನವೂ ಖಾಲಿಯಾಗಿದೆ. ಜುಲೈ 24 ರಂದು ಈ ಆರು ಸ್ಥಾನಗಳಿಗೆ ಚುನಾವಣೆಯೊಂದಿಗೆ ಆ ಸ್ಥಾನಕ್ಕೂ ಉಪಚುನಾವಣೆ ನಡೆಯಲಿದೆ.

ಭಾರತದ ಚುನಾವಣಾ ಆಯೋಗವು ಗುಜರಾತ್, ಪಶ್ಚಿಮ ಬಂಗಾಳ ಮತ್ತು ಗೋವಾ ಸೇರಿ ಒಟ್ಟು ಹತ್ತು ರಾಜ್ಯಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಪ್ರಕಟಿಸಿತ್ತು. ಜುಲೈ 24 ರಂದು ಮತದಾನ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆಯಲಿದೆ. ಚುನಾವಣಾ ಸಮಿತಿಯು ಬಿಡುಗಡೆ ಮಾಡಿದ ಅಧಿಸೂಚನೆಯ ಪ್ರಕಾರ, ಆಯಾ ಸದಸ್ಯರ ನಿವೃತ್ತಿಯಿಂದಾಗಿ ಈ ಮೂರು ರಾಜ್ಯಗಳಲ್ಲಿ 10 ರಾಜ್ಯಸಭಾ ಸ್ಥಾನಗಳು ಖಾಲಿಯಾಗುತ್ತಿವೆ.

ಪಶ್ಚಿಮ ಬಂಗಾಳದಿಂದ, ಟಿಎಂಸಿ ಪಕ್ಷದ ಸದಸ್ಯರಲ್ಲಿ ಡೆರೆಕ್ ಒ’ಬ್ರೇನ್, ಡೋಲಾ ಸೇನ್, ಸುಶ್ಮಿತಾ ದೇವ್, ಶಾಂತಾ ಛೆಟ್ರಿ ಮತ್ತು ಸುಖೇಂದು ಶೇಖರ್ ರೇ ಸೇರಿದಂತೆ ಅವರ ಅವಧಿ ಮುಗಿಯುತ್ತಿದೆ. ಮಾಜಿ ಕಾಂಗ್ರೆಸ್ ಸದಸ್ಯರಾದ ದೇವ್ ಮತ್ತು ಛೆಟ್ರಿ ಅವರನ್ನು ಸದ್ಯಕ್ಕೆ ಹೊರಗಿಡಲಾಗಿದೆ.

ಇದನ್ನೂ ಓದಿ: ಟ್ವಿಟರ್‌ಗೆ ಮೋದಿ ಸರ್ಕಾರ ಬೆದರಿಕೆ ಹಾಕಿದ ವಿಚಾರ: ದಾಖಲೆ ಸಮೇತ ಮಾಹಿತಿ ಹಂಚಿಕೊಂಡ ಟಿಎಂಸಿ ವಕ್ತಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ; 14 ಸಾವು, ಹಲವರಿಗೆ ಗಂಭೀರ ಗಾಯ

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಶೀತಲಾ ಮಾತಾ ದೇವಸ್ಥಾನದ ಬಳಿ ನವರಾತ್ರಿ ಉತ್ಸವದ ಸಂಭ್ರಮದಲ್ಲಿದ್ದ ಭಕ್ತಾದಿಗಳ ಮೇಲೆ ಅತಿವೇಗವಾಗಿ ಬಂದ ಲಾರಿಯೊಂದು ನುಗ್ಗಿದ ಪರಿಣಾಮ ಕನಿಷ್ಠ 14 ಜನರು ದಾರುಣವಾಗಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ...

ಕೋಲ್ಕತ್ತಾ ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 19ಕ್ಕೆ ಏರಿಕೆ; ಏಳು ಮಂದಿಯ ಬಂಧನ

ಕೋಲ್ಕತ್ತಾದ ಸಮುದಾಯ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಶನಿವಾರ (ಅ.17) ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಸುಮಾರು 25 ಮಂದಿ ಗಾಯಗೊಂಡಿದ್ದು, ಕೋಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ...

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...