Homeಮುಖಪುಟಕರ್ನಾಟಕ ಸೇರಿ 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ

ಕರ್ನಾಟಕ ಸೇರಿ 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ

- Advertisement -
- Advertisement -

ದೇಶದ 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಫೆಬ್ರವರಿ 27ರಂದು ಚುನಾವಣೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಸೋಮವಾರ ಪ್ರಕಟಿಸಿದೆ.

13 ರಾಜ್ಯಗಳ 50 ರಾಜ್ಯಸಭಾ ಸದಸ್ಯರ ಅಧಿಕಾರಾವಧಿಯು ಏಪ್ರಿಲ್ 2 ರಂದು ಮುಕ್ತಾಯಗೊಳ್ಳಲಿದ್ದು, ಎರಡು ರಾಜ್ಯಗಳ ಉಳಿದ ಆರು ಸದಸ್ಯರು ಏಪ್ರಿಲ್ 3 ರಂದು ನಿವೃತ್ತರಾಗಲಿದ್ದಾರೆ. ರಾಜ್ಯಸಭಾ ಸದಸ್ಯರ ಅಧಿಕಾರಾವಧಿ ಆರು ವರ್ಷಗಳಾಗಿವೆ.

ರಾಜ್ಯಸಭಾ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಗುಜರಾತ್, ಆಂಧ್ರ ಪ್ರದೇಶ, ತೆಲಂಗಾಣ, ರಾಜಸ್ಥಾನ, ಕರ್ನಾಟಕ, ಉತ್ತರಾಖಂಡ, ಛತ್ತೀಸ್‌ಗಢ, ಒಡಿಶಾ, ಹರಿಯಾಣ ಮತ್ತು ಹಿಮಾಚಲ ಪ್ರದೇಶ ಸೇರಿವೆ.

ಉತ್ತರಪ್ರದೇಶದಲ್ಲಿ 10, ಬಿಹಾರ ಮತ್ತು ಮಹಾರಾಷ್ಟ್ರದ ತಲಾ 6, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳದ ತಲಾ 5, ಗುಜರಾತ್ ಮತ್ತು ಕರ್ನಾಟಕದ ತಲಾ 4, ಒಡಿಶಾ, ಆಂಧ್ರ ಪ್ರದೇಶ ಮತ್ತು ರಾಜಸ್ಥಾನದ ತಲಾ 3 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ರಾಜ್ಯಸಭೆಯ ಮೂರನೇ ಒಂದು ಭಾಗದಷ್ಟು ಸದಸ್ಯರು ಪ್ರತಿ ಎರಡು ವರ್ಷಗಳಿಗೊಮ್ಮೆ ನಿವೃತ್ತರಾಗುತ್ತಾರೆ. ಸಂಸತ್ತಿನ ಮೇಲ್ಮನೆಯ ಸದಸ್ಯರು ರಾಜ್ಯ ವಿಧಾನ ಸಭೆಗಳ ಚುನಾಯಿತ ಸದಸ್ಯರಿಂದ ಪರೋಕ್ಷವಾಗಿ ಚುನಾಯಿತರಾಗುತ್ತಾರೆ.

ಇದನ್ನೂ ಓದಿ: ಎನ್‌ಸಿಪಿ V/s ಎನ್‌ಸಿಪಿ: ಫೆ.15ರೊಳಗೆ ಶಾಸಕರ ಅನರ್ಹತೆ ನಿರ್ಧರಿಸಿ; ಮಹಾ ಸ್ಪೀಕರ್‌ಗೆ ಸುಪ್ರೀಂ ಸೂಚನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಂಧನ

0
ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಮತ್ತು ಮಾಜಿ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರನ್ನು ಶನಿವಾರ ದೆಹಲಿ...