Homeಮುಖಪುಟರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

- Advertisement -
- Advertisement -

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು ‘ಕಿಂಗ್ ಮೇಕರ್’ ಆಗಿ ಹೊರಹೊಮ್ಮಿದೆ.

ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ 41 ಶಾಸಕರ ಬೆಂಬಲ ಅಗತ್ಯವಿದೆ. ಪ್ರಸ್ತುತ ವಿಧಾನಸಭೆಯಲ್ಲಿ ಆಡಳಿತಾರೂಢ ಎನ್‌ಡಿಎ ಒಕ್ಕೂಟವು 202 ಶಾಸಕರನ್ನು ಹೊಂದಿದ್ದು, ನಾಲ್ಕು ಸ್ಥಾನಗಳನ್ನು ಸುಲಭವಾಗಿ ಗೆಲ್ಲಬಹುದು.

ಐದನೇ ಸ್ಥಾನವನ್ನು ಗೆಲ್ಲಲು ಎನ್‌ಡಿಎಗೆ ಇನ್ನೂ 3 ಶಾಸಕರ ಬೆಂಬಲದ ಕೊರತೆಯಿದೆ. ಮತ್ತೊಂದೆಡೆ, ಆರ್‌ಜೆಡಿ ನೇತೃತ್ವದ ಮಹಾಘಟಬಂಧನವು ಕೇವಲ 35 ಶಾಸಕರನ್ನು ಹೊಂದಿದ್ದು, ಗೆಲುವಿಗಾಗಿ ಓವೈಸಿ ಪಕ್ಷದ 5 ಶಾಸಕರ ಹಾಗೂ ಒಬ್ಬ ಬಿಎಸ್‌ಪಿ ಶಾಸಕನ ಬೆಂಬಲವನ್ನು ಅವಲಂಬಿಸಿದೆ.

ಎಐಎಂಐಎಂ ಪಕ್ಷವು ಐದನೇ ಸ್ಥಾನಕ್ಕೆ ತನ್ನದೇ ಆದ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಘೋಷಿಸಿದೆ. ಇದು ವಿರೋಧ ಪಕ್ಷಗಳ ಒಗ್ಗಟ್ಟಿಗೆ ಹಿನ್ನಡೆಯುಂಟುಮಾಡಿದ್ದು, ಎನ್‌ಡಿಎಗೆ ಲಾಭವಾಗುವ ಸಾಧ್ಯತೆಯನ್ನು ಹೆಚ್ಚಿಸಿದೆ.

ಎಐಎಂಐಎಂನ 5 ಶಾಸಕರು ಯಾವ ಕಡೆ ವಾಲುತ್ತಾರೋ ಅಥವಾ ಅವರು ಸ್ವತಂತ್ರವಾಗಿ ಸ್ಪರ್ಧಿಸಿದರೆ ಮತಗಳು ಹೇಗೆ ವಿಭಜನೆಯಾಗುತ್ತವೆಯೋ ಎಂಬುದು ಐದನೇ ಸೀಟಿನ ಫಲಿತಾಂಶವನ್ನು ನಿರ್ಧರಿಸಲಿದೆ.

ಸದ್ಯದ ರಾಜಕೀಯ ಬೆಳವಣಿಗೆಯ ಪ್ರಕಾರ, ಎಐಎಂಐಎಂ ಬೆಂಬಲವಿಲ್ಲದೆ ಯಾವುದೇ ಒಕ್ಕೂಟವು ಐದನೇ ಸ್ಥಾನವನ್ನು ಖಚಿತವಾಗಿ ಗೆಲ್ಲಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಏಪ್ರಿಲ್‌ 9ರಂದು ಬಿಹಾರದ ಐದು ರಾಜ್ಯಸಭಾ ಸದಸ್ಯರಾದ ಜೆಡಿ (ಯು)ನ ಹರಿವಂಶ್ ನಾರಾಯಣ್ ಸಿಂಗ್ ಮತ್ತು ರಾಮ್ ನಾಥ್ ಠಾಕೂರ್, ಆರ್‌ಜೆಡಿಯ ಪ್ರೇಮ್ ಚಂದ್ ಗುಪ್ತಾ ಮತ್ತು ಅಮರೇಂದ್ರ ಧಾರಿ ಸಿಂಗ್ ಹಾಗೂ ಆರ್‌ಎಲ್‌ಎಂನ ಉಪೇಂದ್ರ ಕುಶ್ವಾಹ ಅವರ ಅಧಿಕಾರವಧಿ ಮುಕ್ತಾಯಗೊಳ್ಳಲಿದೆ. ಈ ಪೈಕಿ ಹರಿವಂಶ್ ನಾರಾಯಣ್ ಸಿಂಗ್ ಪ್ರಸ್ತುತ ರಾಜ್ಯಸಭೆಯ ಉಪಾಧ್ಯಕ್ಷರಾಗಿದ್ದಾರೆ. ರಾಮ್ ನಾಥ್ ಠಾಕೂರ್ ಕೇಂದ್ರ ಸಚಿವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...