Homeಕರ್ನಾಟಕರಾಜ್ಯಸಭಾ ಚುನಾವಣೆ: ಅಡ್ಡ ಮತದಾನ ಮಾಡಿದ ಎಸ್‌.ಟಿ ಸೋಮಶೇಖರ್: ವರದಿ

ರಾಜ್ಯಸಭಾ ಚುನಾವಣೆ: ಅಡ್ಡ ಮತದಾನ ಮಾಡಿದ ಎಸ್‌.ಟಿ ಸೋಮಶೇಖರ್: ವರದಿ

- Advertisement -
- Advertisement -

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಅಡ್ಡಮತದಾನ ಮಾಡಿದ್ದಾರೆ ಎಂದು ವರದಿಯಾಗಿದೆ.

ಮಂಗಳವಾರ ವಿಧಾನಸೌಧದಲ್ಲಿ ಮತ ಚಲಾಯಿಸಿದ ಬಳಿಕ‌ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್ ಗೆ ತೋರಿಸಿದ್ದೇನೆ” ಎಂದಿದ್ದಾರೆ.

“ಯಾರು ನನ್ನ ಕ್ಷೇತ್ರಕ್ಕೆ ಅನುದಾನ ಕೊಡುವುದಾಗಿ ಭರವಸೆ ನೀಡಿದ್ದಾರೋ, ಅವರಿಗೆ ಮತ ಹಾಕಿದ್ದೇನೆ. ಇದುವರೆಗೆ ಪಕ್ಷ ಹೇಳಿದ ಹಾಗೆ ಕೇಳಿದ್ದೇನೆ. ಆದರೆ, ಈ ಬಾರಿ ನನ್ನ ಕ್ಷೇತ್ರದ ಅಭಿವೃದ್ದಿಗೆ ಅನುದಾನ ಕೊಡುವುದಾಗಿ ಭರವಸೆ ನೀಡಿದವರ ಪರ ಮತ ಚಲಾಯಿಸಿದ್ದೇನೆ ಎಂದು ಹೇಳಿದ್ದಾರೆ.

ಮತದಾನಕ್ಕೆ ತೆರಳುವ ಮುನ್ನ ಮಾತನಾಡಿದ ಸೋಮಶೇಖರ್, “ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎಂಬ ಬೇಧಬಾವ ಇಲ್ಲ. ಯಾರು ನನ್ನ ಕ್ಷೇತ್ರಕ್ಕೆ ಅನುದಾನ ಕೊಡುವುದಾಗಿ ಭರವಸೆ ನೀಡಿದ್ದಾರೋ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ಹಾಕುತ್ತೇನೆ. ವಿಪ್ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ. ನಾವು 45 ಜನರು ಒಬ್ಬ ಅಭ್ಯರ್ಥಿಗೆ ಮತ ಹಾಕಿ ರಾಜ್ಯಸಭೆಗೆ ಕಳಿಸುತ್ತೇವೆ. ಅವರಿಗೆ ಸಂಸದರ ನಿಧಿಯಿಂದ 6 ವರ್ಷದಲ್ಲಿ ಸುಮಾರು 30 ಕೋಟಿ ರೂ ಅನುದಾನ ಬರುತ್ತದೆ. ಆದರೆ, ಅದರಿಂದ ನಮ್ಮ ಕ್ಷೇತ್ರಕ್ಕೆ ಯಾವುದೇ ಲಾಭವಾಗುತ್ತಿಲ್ಲ. ಹಾಗಾಗಿ, ಕ್ಷೇತ್ರದ ಅಭಿವೃದ್ದಿಯ ವಿಷಯದಲ್ಲಿ ಯಾರು ನನ್ನನ್ನು ಅಪ್ರೋಚ್ ಮಾಡುತ್ತಾರೋ ಅವರಿಗೆ ನನ್ನ ಮತ” ಎಂದಿದ್ದಾರೆ.

ಸೋಮಶೇಖರ್ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಚಲಾಯಿಸಿದ ಬಗ್ಗೆ ಖಚಿತವಾಗಿ ಹೇಳಿಲ್ಲ. ಆದರೆ, ಅವರ ಹೇಳಿಕೆ ಮತ್ತು ಇತ್ತೀಚಿನ ರಾಜಕೀಯ ಬೆಳವಣಿಗೆ ನೋಡಿದರೆ, ಅವರು ಕಾಂಗ್ರೆಸ್ ಪರ ಮತ ಚಲಾಯಿಸಿದ ಸಾಧ್ಯತೆ ಇದೆ ಹೇಳಲಾಗುತ್ತಿದೆ. ಸೋಮಶೇಖರ್ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಆಪ್ತರು. ಇತ್ತೀಚಿಗೆ ಡಿಕೆಶಿ ಜೊತೆ ಎಸ್‌ಟಿಸಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ : ರಾಜ್ಯಸಭಾ ಚುನಾವಣೆ: ಮತದಾನ ಆರಂಭ, ಉತ್ತರ ಪ್ರದೇಶ, ಕರ್ನಾಟಕದಲ್ಲಿ ಅಡ್ಡ ಮತದಾನದ ಭೀತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಧಾನಿ ಮೋದಿ ಪ್ರಚಾರಕ್ಕೆ ಸಿಂಗಾಪುರದ ರೈಲ್ವೆ ನಿಲ್ದಾಣದ ಫೋಟೋ ಬಳಸಿದ ಬಿಜೆಪಿ

0
ಬಿಜೆಪಿಯ ವಿವಿಧ ರಾಜ್ಯ ಮತ್ತು ಜಿಲ್ಲಾ ಘಟಕಗಳ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಇತ್ತೀಚೆಗೆ ಪೋಸ್ಟರ್ ಒಂದನ್ನು ಹಂಚಿಕೊಳ್ಳಲಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಫೋಟೋ ಮತ್ತು ಹಿಂಭಾಗದಲ್ಲಿ ಮೆಟ್ರೋ ರೈಲು ಸಾಗುತ್ತಿರು ಚಿತ್ರವಿರುವ ಈ ಪೋಸ್ಟರ್‌...