Homeಕರ್ನಾಟಕನಾಳೆ ರಾಜ್ಯಸಭಾ ಚುನಾವಣೆ: ಕಾಂಗ್ರೆಸ್‌ಗೆ ಅಡ್ಡ ಮತದಾನ ಭೀತಿ

ನಾಳೆ ರಾಜ್ಯಸಭಾ ಚುನಾವಣೆ: ಕಾಂಗ್ರೆಸ್‌ಗೆ ಅಡ್ಡ ಮತದಾನ ಭೀತಿ

- Advertisement -
- Advertisement -

ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಾಳೆ(ಫೆ.27) ಚುನಾವಣೆ ನಡೆಯಲಿದೆ. ಇದಕ್ಕಾಗಿ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಮೈತ್ರಿ ಅಭ್ಯರ್ಥಿ ಕಣದಲ್ಲಿ ಇರುವುದರಿಂದ ಚುನಾವಣಾ ಕಣ ರಂಗೇರಿದೆ.

ಕಣದಲ್ಲಿ ಐವರು ಅಭ್ಯರ್ಥಿಗಳು :

ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಐವರು ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ಕಾಂಗ್ರೆಸ್‌ನಿಂದ ಅಜಯ್ ಮಾಕನ್, ಜಿಸಿ ಚಂದ್ರಶೇಖರ್, ಡಾ. ಸೈಯದ್ ನಾಸೀರ್ ಹುಸೇನ್, ಬಿಜೆಪಿಯಿಂದ ನಾರಾಯಣ ಎಸ್ ಭಾಂಡಗೆ, ಮೈತ್ರಿ ಅಭ್ಯರ್ಥಿಯಾಗಿ ಡಿ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ.

ವಿಧಾನಸಭೆಯಲ್ಲಿ ಕಾಂಗ್ರೆಸ್ ಬಲಾಬಲ 135 ಇತ್ತು. ಇದೀಗ ರಾಜಾ ವೆಂಕಟಪ್ಪ ನಾಯಕ ಮೃತಪಟ್ಟ ಹಿನ್ನೆಲೆಯಲ್ಲಿ ಸದ್ಯ ಕಾಂಗ್ರೆಸ್ ಬಲ 134 ಆಗಿದೆ. ಇನ್ನು ಬಿಜೆಪಿ 66, ಜೆಡಿಎಸ್ 19 ಸ್ಥಾನಗಳನ್ನು ಹೊಂದಿವೆ. ನಾಲ್ವರು ಪಕ್ಷೇತರ ಶಾಸಕರಿದ್ದಾರೆ.

ಪಕ್ಷೇತರರು ನಾಲ್ವರೂ ಕಾಂಗ್ರೆಸ್‌ ಅಭ್ಯರ್ಥಿಗೆ ಮತ ಹಾಕುವ ಸಾಧ್ಯತೆ ಇದೆ. ವಿಶೇಷವಾಗಿ ಗಾಲಿ ಜನಾರ್ದನ ರೆಡ್ಡಿ ಸೋಮವಾರ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅವರು ಯಾರನ್ನು ಬೆಂಬಲಿಸಲಿದ್ದಾರೆ ಎಂದು ಅಧಿಕೃತವಾಗಿ ತಿಳಿಸಿಲ್ಲ.

ಕೈ ಶಾಸಕರು ಹೋಟೆಲ್‌ಗೆ ಶಿಫ್ಟ್‌ :

ಬಿಜೆಪಿ-ಜೆಡಿಎಸ್ ಜಂಟಿಯಾಗಿ ಐದನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದರಿಂದ ಕಾಂಗ್ರೆಸ್‌ಗೆ ಅಡ್ಡ ಮತದಾನದ ಭೀತಿ ಎದುರಾಗಿದೆ. ಹಾಗಾಗಿ, ಕಾಂಗ್ರೆಸ್ ಶಾಸಕರನ್ನು ಖಾಸಗಿ ಹೋಟೆಲ್‌ಗೆ ಶಿಫ್ಟ್‌ ಮಾಡಲಾಗಿದೆ ಎಂದು ವರದಿಗಳು ಹೇಳಿವೆ.

ವಿಧಾನಸೌಧದಲ್ಲಿ ಮಾತನಾಡಿದ ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್, “ಎಲ್ಲಾ ಕಾಂಗ್ರೆಸ್‌ ಶಾಸಕರಿಗೂ ವಿಪ್ ಕೊಟ್ಟಿದ್ದೇವೆ. ಸಂಜೆ 6 ಗಂಟೆಗೆ ಕಡ್ಡಾಯವಾಗಿ ಸಭೆಗೆ ಹಾಜರಾಗಲು ಹೇಳಿದ್ದೇವೆ. ಈ ಕುರಿತಾಗಿ ವಾಟ್ಸಾಪ್‌ಗೆ ಮೆಸೇಜ್ ಕಳಿಸಿದ್ದೇವೆ. ವೈಯುಕ್ತಿಕವಾಗಿ ಪೋನ್ ಮಾಡಿ ಹೇಳಿದ್ದೇವೆ. ಎಲ್ಲಾ ಶಾಸಕರು ರಾತ್ರಿ ಹೋಟೆಲ್‌ನಲ್ಲೇ ಉಳಿದುಕೊಳ್ಳುತ್ತೇವೆ. ಲಗೇಜ್ ಸಮೇತ ಎಲ್ಲಾ ಶಾಸಕರು ಬರ್ತಿದ್ದಾರೆ” ಎಂದು ತಿಳಿಸಿದ್ದಾರೆ.

“ನಾಳೆ ಬೆಳಿಗ್ಗೆ ಎಲ್ಲಾ ಶಾಸಕರು ಹೋಟೆಲ್‌ನಿಂದ ಬಸ್‌ನಲ್ಲಿ ಒಟ್ಟಿಗೆ ಬಂದು ಓಟ್ ಹಾಕಿ ಹೋಗುತ್ತೇವೆ.‌ ಓಟಿಂಗ್ ಪ್ಯಾಟ್ರನ್ ಟ್ರೈನಿಂಗ್ ಕೊಡೋಕೆ, ಯಾವ ರೀತಿ ಮಾರ್ಕ್ ಮಾಡಬೇಕು ಎಂದು ಮಾಹಿತಿ ನೀಡಲು ಸಿಎಲ್‌ಪಿ ಸಭೆ ಕರೆಯಲಾಗಿದೆ” ಎಂದು ಹೇಳಿದ್ದಾರೆ.

ರಾಜ್ಯ ಸಭೆಯ ಮತದಾನ ಮಂಗಳವಾರ ಬೆಳಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ವಿಧಾನಸೌಧದ 1ನೇ ಮಹಡಿಯ 106 ನೇ ಕೊಠಡಿಯಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ‌.

ಇದನ್ನೂ ಓದಿ : ಕೊಳೆ ಬಟ್ಟೆ ಧರಿಸಿ ಬಂದಿದ್ದ ವ್ಯಕ್ತಿಗೆ ‘ನಮ್ಮ ಮೆಟ್ರೋ’ ಪ್ರಯಾಣಕ್ಕೆ ನಿರಾಕರಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣಾ ಬಾಂಡ್‌: ಎಸ್ಒಪಿ ಮಾಹಿತಿ ನೀಡಲು ಮತ್ತೆ ನಿರಾಕರಿಸಿದ ಎಸ್‌ಬಿಐ

0
ದೇಶದಲ್ಲಿ ಭಾರೀ ಸದ್ದು ಮಾಡಿದ್ದ ಚುನಾವಣಾ ಬಾಂಡ್‌ಗೆ ಸಂಬಂಧಿಸಿದಂತೆ ಎಸ್‌ಒಪಿ ಮಾಹಿತಿಯನ್ನು ನೀಡಲು ಭಾರತೀಯ ಸ್ಟೇಟ್‌ ಬ್ಯಾಂಕ್‌ ಮತ್ತೆ ನಿರಾಕರಿಸಿದ್ದು, ಕೇಂದ್ರ ಮಾಹಿತಿ ಆಯೋಗಕ್ಕೆ (ಸಿಐಸಿ) ನಿರಾಕರಣೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ಆರ್‌ಟಿಐ...