Homeಕರ್ನಾಟಕರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಸ್ಥಿತಿ ಗಂಭೀರ: ಕರ್ನಾಟಕ ಬಿಜೆಪಿ ಸ್ಪಷ್ಟನೆ

ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಸ್ಥಿತಿ ಗಂಭೀರ: ಕರ್ನಾಟಕ ಬಿಜೆಪಿ ಸ್ಪಷ್ಟನೆ

ಆರೋಗ್ಯ ಸಚಿವ ಶ್ರೀರಾಮುಲು ಕೂಡಾ ಸಂಸದ ನಿಧನರಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದು ಇದೀಗ ಟ್ವೀಟ್ ಡಿಲೀಟ್ ಮಾಡಿದ್ದಾರೆ.

- Advertisement -
- Advertisement -

ಜುಲೈ ತಿಂಗಳಲ್ಲಿ ರಾಜ್ಯಸಭೆಗೆ ಆಯ್ಕೆಯಾಗಿದ್ದ ಬಿಜೆಪಿ ಸಂಸದ ಅಶೋಕ್ ಗಸ್ತಿ ಕೊರೊನಾದಿಂದ ಪಟ್ಟಿದ್ದಾರೆ ಎಂಬುವುದು ಸುದ್ದಿ ಸುಳ್ಳು ಎಂದು ರಾಜ್ಯ ಬಿಜೆಪಿ ಸ್ಪಷ್ಟಪಡಿಸಿದೆ.

“ರಾಜ್ಯ ಸಭಾ ಸದಸ್ಯರಾದ ಶ್ರೀ ಅಶೋಕ್ ಗಸ್ತಿ ಅವರ ಆರೋಗ್ಯ ಕುರಿತು ಕೆಲವು ವರದಿಗಳು ಪ್ರಸಾರವಾಗುತ್ತಿದೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಸ್ಥಿತಿ ಗಂಭೀರವಾಗಿದ್ದು, ಅವರು ಮರುಜನ್ಮ ಪಡೆದು ಆರೋಗ್ಯವಂತರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸೋಣ.” ಎಂದು ರಾಜ್ಯ ಬಿಜೆಪಿ ಸ್ಪಷ್ಟನೆ ನೀಡಿದೆ.

ಇದನ್ನೂಓದಿ: ರಾಜ್ಯಸಭಾ ಚುನಾವಣೆ: ರಾಜ್ಯ ಘಟಕದ ಶಿಫಾರಸ್ಸು ತಿರಸ್ಕರಿಸಿ ಬೇರೆ ಹೆಸರನ್ನು ಘೋಷಿಸಿದ ಬಿಜೆಪಿ ಹೈಕಮಾಂಡ್

ಅವರ ಕುಟುಂಬದ ಸದಸ್ಯರು, “ಅವರಿಗೆ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವು ಸಾಮಾಜಿಕ ಜಾಲತಾಣ ಹಾಗೂ ಖಾಸಗಿ ವಾಹಿನಿಗಳಲ್ಲಿ ನಿಧನರಾಗಿದ್ದಾರೆ ಎಂದು ಸುಳ್ಳು ಸುದ್ದಿ ಹರಡುತ್ತಿದ್ದಾರೆ” ಎಂದು ಹೇಳಿದ್ದಾಗಿ ಪ್ರಜಾವಾಣಿ ವರದಿ ಮಾಡಿದೆ.

ಅಷ್ಟೇ ಅಲ್ಲದೆ ರಾಯಚೂರ್‌ ಜಿಲ್ಲಾಧಿಕಾರಿ ಆರ್‌. ವೆಂಕಟೇಶ್‌ ಕುಮಾರ್,‌ “ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ರಾಜ್ಯಸಭೆ ಸದಸ್ಯ ಅಶೋಕ ಗಸ್ತಿ ಅವರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ” ಎಂದು ತಿಳಿಸಿದ್ದಾಗಿ ಪತ್ರಿಕೆ ಹೇಳಿದೆ.

ಆರೋಗ್ಯ ಸಚಿವ ಶ್ರೀರಾಮುಲು, “ಅಶೋಕ್ ಗಸ್ತಿ ಅವರು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು ತೀವ್ರ ದುಃಖ ನೀಡಿದೆ. ಅವರು ಕಳೆದ 15 ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಭಗವಂತ ನೀಡಲಿ.” ಎಂದು ಟ್ವೀಟ್ ಮಾಡಿದ್ದರು. ಆದರೆ ನಂತರ ಇದನ್ನು ಅವರು ಡಿಲೀಟ್ ಮಾಡಿದ್ದಾರೆ.

ಅಷ್ಟೇ ಅಲ್ಲದೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಕೂಡಾ ಸಂಸದ ನಿಧನಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದರು.

ಇದರ ಆರ್ಕೈವ್ ಇಲ್ಲಿದೆ.

ಜೊತೆಗೆ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್‌ ಕೂಡಾ ಸಂಸದರ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದರು.

ಇದರ ಆರ್ಕೈವ್ ಇಲ್ಲಿದೆ.

ಅಷ್ಟೆ ಅಲ್ಲದೆ ನಾನುಗೌರಿ.ಕಾಮ್ ಕೂಡಾ ಆರೋಗ್ಯ ಸಚಿವ ಶ್ರೀರಾಮುಲು ಅವರ ಹೇಳಿಕೆಯ ಆಧಾರದಲ್ಲಿ ಸಂಸದ ಅಶೋಕ್‌ ನಿಧನ ಎಂಬ ಸುದ್ದಿಯನ್ನು ಪ್ರಕಟಿಸಿದ್ದು ತಪ್ಪು ಮಾಹಿತಿಗಾಗಿ ವಿಷಾದಿಸುತ್ತೇವೆ.

ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ಕರ್ನಾಟಕದಿಂದ ಖರ್ಗೆ, ದೇವೇಗೌಡರು ಸೇರಿ ನಾಲ್ವರ ಅವಿರೋಧ ಆಯ್ಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...