Homeಮುಖಪುಟಕೇರಳದ ಕನ್ನಡಿಗ, ರಾಜ್ಯಸಭಾ ಸಂಸದ ವೀರೇಂದ್ರ ಕುಮಾರ್(83) ನಿಧನ

ಕೇರಳದ ಕನ್ನಡಿಗ, ರಾಜ್ಯಸಭಾ ಸಂಸದ ವೀರೇಂದ್ರ ಕುಮಾರ್(83) ನಿಧನ

'ದೆಹಲಿ ಕನ್ನಡಿಗ' ಮಾಸಿಕ 24 ನೇ ಕನ್ನಡ ಸಮ್ಮೇಳನಕ್ಕಾಗಿ 'ಅತ್ಯುತ್ತಮ ಹೊರರಾಜ್ಯದ ಕನ್ನಡಿಗ' ಆಗಿ ಅವರನ್ನು ಆಯ್ಕೆ ಮಾಡಿತ್ತು.

- Advertisement -
- Advertisement -

ಕೇರಳದ ಕನ್ನಡಿಗ, ಸಮಾಜವಾದಿ ನಾಯಕ, ರಾಜ್ಯಸಭಾ ಸಂಸದ ಹಾಗೂ ಮಾತೃಭೂಮಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವೀರೇಂದ್ರ ಕುಮಾರ್(83) ಅವರು ಕೊಝಿಕ್ಕೋಡ್ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಅವರನ್ನು ಗುರುವಾರ ರಾತ್ರಿ 8.30 ಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ವಲ್ಪ ಸಮಯದ ನಂತರ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಪತ್ನಿ, ಮಗ ಮತ್ತು ಮೂವರು ಹೆಣ್ಣು ಮಕ್ಕಳಿದ್ದಾರೆ.

ಕೇರಳದ ಪ್ರಸಿದ್ಧ ರಾಜಕಾರಣಿ ಮತ್ತು ಸಾಹಿತ್ಯಿಕ ವ್ಯಕ್ತಿ ವೀರೇಂದ್ರ ಕುಮಾರ್ ಅವರು ರಾಷ್ಟ್ರೀಯ ಮತ್ತು ರಾಜ್ಯ ರಾಜಕಾರಣ ಹಾಗೂ ಮಾಧ್ಯಮ ಮತ್ತು ಸಾಹಿತ್ಯ ಜಗತ್ತಿನಲ್ಲಿ ತಮ್ಮ ಪ್ರಭಾವವನ್ನು ಬೀರಿದ್ದಾರೆ. ಕೋಝಿಕೋಡ್‌ನಿಂದ ಎರಡು ಬಾರಿ ಲೋಕಸಭಾ ಸದಸ್ಯರಾಗಿದ್ದ ಇವರು ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ಸಚಿವರಾಗಿ ಸೇವೆ ಸಲ್ಲಿಸಿದ್ದರು.

2010 ರಲ್ಲಿ ಅವರ ಪ್ರವಾಸ ಕಥನ ‘ಹೈಮಾವತಾ ಭೋವಿಲ್’ ಕಾದಂಬರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನೂ ಪಡೆದಿದ್ದರು. ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅವರ ಸಾಹಿತ್ಯ ಕೃತಿಗಳಿಗಾಗಿ 100ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಗೆದ್ದಿದ್ದಾರೆ.

2007 ರಲ್ಲಿ ‘ದೆಹಲಿ ಕನ್ನಡಿಗ’ ಮಾಸಿಕ 24 ನೇ ಕನ್ನಡ ಸಮ್ಮೇಳನಕ್ಕಾಗಿ ‘ಅತ್ಯುತ್ತಮ ಹೊರರಾಜ್ಯದ ಕನ್ನಡಿಗ’ ಆಗಿ ಅವರನ್ನು ಆಯ್ಕೆ ಮಾಡಿತ್ತು.

ವೀರೇಂದ್ರ ಕುಮಾರ್

ಜಯಪ್ರಕಾಶ್ ನಾರಾಯಣ್ ನೇತೃತ್ವದ ರಾಜಕೀಯ ಚಳವಳಿಯ ಭಾಗವಾಗಿ ವೀರೇಂದ್ರ ಕುಮಾರ್ ರಾಜಕೀಯ ಪ್ರವೇಶಿಸಿದರು. ಕೇರಳದ ಮಲಬಾರ್ ಪ್ರದೇಶದಲ್ಲಿ ಜೆಪಿ ಚಳವಳಿಯನ್ನು ಬಲಪಡಿಸಿದರು. ಅವರು ತಮ್ಮ ರಾಜಕೀಯ ಜೀವನವನ್ನು ಸಮಾಜವಾದಿ ಪಕ್ಷದೊಂದಿಗೆ ಪ್ರಾರಂಭಿಸಿದರು. ಅವರು ಜನತಾದಳ ಮತ್ತು ಜನತಾದಳ (ಯುನೈಟೆಡ್) ಜೊತೆಗೆ ಕೂಡಾ ಇದ್ದರು.

ವಿರೇಂದ್ರ ಕುಮಾರ್ ಅವರು 1987 ರಲ್ಲಿ ತಮ್ಮ ಸ್ವಕ್ಷೇತ್ರ ಕಲ್ಪೆಟ್ಟದಿಂದ ಕೇರಳ ವಿಧಾನಸಭೆಗೆ ಆಯ್ಕೆಯಾದರು ಮತ್ತು 1991 ರವರೆಗೆ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಇವರು ಕೇರಳ ರಾಜ್ಯ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ, ಅಲ್ಲದೆ 11 ಮತ್ತು 13 ನೇ ಲೋಕಸಭೆಗೆ ಆಯ್ಕೆಯಾಗಿದ್ದರು. ಎರಡು ವರ್ಷ ಕೇಂದ್ರ ಸಚಿವರಾಗಿದ್ದರು. 1997 ರಲ್ಲಿ ಕೆಲವು ತಿಂಗಳು ರಾಜ್ಯ ಸಚಿವರೂ ಆಗಿದ್ದರು.

ಅವರ ರಾಜಕೀಯ ಕಾರ್ಯಕ್ಷೇತ್ರ ಹೆಚ್ಚಾಗಿ ಉತ್ತರ ಪ್ರದೇಶಕ್ಕೆ ಸೀಮಿತವಾಗಿತ್ತು. 2014 ರ ಲೋಕಸಭಾ ಚುನಾವಣೆಯಲ್ಲಿ ಒಮ್ಮೆ ಮಾತ್ರ ಪಾಲಕ್ಕಾಡ್‌ನಿಂದ ಸ್ಪರ್ಧಿಸಿ ಸಿಪಿಐ(ಎಂ)ನ ಎಂಬಿ ರಾಜೇಶ್ ವಿರುದ್ಧ ಸೋತರು. ಸೋಲಿನ ಹೊರತಾಗಿಯೂ, ಅವರು ರಾಜಕೀಯ ರಂಗದಲ್ಲಿ ಸಕ್ರಿಯರಾಗಿದ್ದರು ಮತ್ತು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು.

ಅವರು ರಾಜ್ಯದ ರಾಜಕೀಯದಲ್ಲಿ ಮಾತ್ರವಲ್ಲದೆ ಪತ್ರಿಕೋದ್ಯಮ ಕ್ಷೇತ್ರದಲ್ಲಿಯೂ ಛಾಪು ಮೂಢಿಸಿದ್ದಾರೆ. ವೀರೇಂದ್ರ ಕುಮಾರ್ ಅವರು 1979 ರಲ್ಲಿ ಮಾತೃಭೂಮಿ ಪ್ರಿಂಟಿಂಗ್ ಅಂಡ್ ಪಬ್ಲಿಷಿಂಗ್ ಕಂಪನಿ ಲಿಮಿಟೆಡ್‌ನ ನಿರ್ದೇಶಕರಾಗಿ ಜವಾಬ್ದಾರಿ ಹೊತ್ತುಕೊಂಡಿದ್ದರು. ಕಳೆದ ಕೆಲವು ದಶಕಗಳಲ್ಲಿ, ಮಾತೃಭೂಮಿ ಬೆಳೆದಿದ್ದು, ಈಗ ಹಲವಾರು ಪತ್ರಿಕೆ ಆವೃತ್ತಿಗಳು, ಟಿವಿ ಚಾನೆಲ್ ಮತ್ತು ಅನೇಕ ಆನ್‌ಲೈನ್ ಮಾದ್ಯಮಗಳನ್ನು ನಡೆಸುತ್ತಿದೆ.

1992-1993, 2003-2004 ಮತ್ತು 2011-2012ರ ನಡುವೆ ಅವರು ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.


ಓದಿ: ಕೇಂದ್ರವು ಕೊರೊನಾ ಹೆಚ್ಚಿಸಲೆಂದೇ ಕೇರಳಕ್ಕೆ ರೈಲುಗಳನ್ನು ಕಳಿಸುತ್ತಿದೆ: ಆರೋಪ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...